ಭದ್ರಾವತಿ, ನ. ೧೭: ತಾಲೂಕಿನ ಮೆಸ್ಕಾಂ ಗ್ರಾಮಾಂತರ ಉಪವಿಭಾಗದ ಘಟಕ-೧ ಮತ್ತು ಘಟಕ-೨ ಬಿಆರ್‌ಪಿ ಶಾಖೆಯಲ್ಲಿನ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 'ಕಂಬದಾಳ್ ಹೊಸೂರು' ಗ್ರಾಮದಲ್ಲಿ ನ.೧೯ರಂದು ಬೆಳಿಗ್ಗೆ ೧೦.೩೦ಕ್ಕೆ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಕಂಬದಾಳ್ ಹೊಸೂರು ಗ್ರಾಮ ಪಂಚಾಯತಿ ಕಛೇರಿ ಸಭಾಂಗಣದಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್‌ನಲ್ಲಿ ಈ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
No comments:
Post a Comment