ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ಭದ್ರಾವತಿ ನಗರದಲ್ಲಿ ಜಾಥಾ ನಡೆಸಲಾಯಿತು.
ಭದ್ರಾವತಿ, ಡಿ. ೬ : ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ಮಂಗಳವಾರ ನಗರದಲ್ಲಿ ಜಾಥಾ ನಡೆಸಲಾಯಿತು.
ನಗರಸಭೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತ ದಿಂದ ಮಾಧವಚಾರ್ ವೃತ್ತದವರೆಗೆ ಆಯೋಜಿಸಲಾಗಿದ್ದ ಜಾಥಾದಲ್ಲಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜು ಸೇರಿದಂತೆ ಇನ್ನಿತರ ಕಾಲೇಜುಗಳ ವಿದ್ಯಾರ್ಥಿಗಳು, ತಾಲೂಕು ಕಛೇರಿ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಕಾಲೇಜುಗಳ ಅಧ್ಯಾಪಕರು ಹಾಗು ನಗರಸಭೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
೧೮ ವರ್ಷ ಪೂರೈಸಿರುವ ಪ್ರತಿಯೊಬ್ಬರು ಸಹ ಮತದಾನ ಹಕ್ಕು ಹೊಂದುವುದು, ಕಡ್ಡಾಯವಾಗಿ ಮತ ಚಲಾಯಿಸುವುದು ಸೇರಿದಂತೆ ಚುನಾವಣಾ ಸಂಬಂಧ ಅರಿವು ಮೂಡಿಸುವ ಜಾಗೃತಿ ಫಲಕಗಳನ್ನು ಹಿಡಿದು ಜಾಥಾ ನಡೆಸಲಾಯಿತು.
ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ಕವಿತಾ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
ಚುನಾವಣಾ ಸಾಕ್ಷರತಾ ಸಂಘ ಜಿಲ್ಲಾ ಉಪ ನೋಡಲ್ ಅಧಿಕಾರಿ ನವೀದ್ ಪರ್ವೀಜ್ ಅಹಮದ್ ಭದ್ರಾವತಿ ರಂಗಪ್ಪ ವೃತ್ತದಲ್ಲಿ ಚುನಾವಣಾ ಮಾದರಿಗಳೊಂದಿಗೆ, ವಿಶಿಷ್ಟ ಆಟದೊಂದಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ ಗಮನ ಸೆಳೆದರು.
No comments:
Post a Comment