ಭದ್ರಾವತಿ, ಡಿ. ೧೫: ಹಳೇನಗರದ ಸರ್ಕಾರಿ ಸಂಚಿಯ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್‌ಎಸ್‌ಎಸ್, ಸೇವಾದಳ ಹಾಗು ರೇಂಜರ್ ಮತ್ತು ರೋವರ‍್ಸ್ ಘಟಕಗಳ ಸಮಾರೋಪ ಸಮಾರಂಭ ಡಿ.೧೬ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಯಲಿದೆ.
ಸಮಾರಂಭ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ. ಕೃಷ್ಣಪ್ಪ, ವ್ಯದ್ಯ ಡಾ. ನರೇಂದ್ರಬಾಬು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ, ಕಾಲೇಜಿನ ಉಪಪ್ರಾಂಶುಪಾಲರಾದ ಶಾಂತಮ್ಮ, ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಿ. ವೆಂಕಟರಮಣ ಶೇಟ್ ಹಾಗು ಸದಸ್ಯರು, ಯುವ ಮುಖಂಡರಾದ ರವೀಶ್ ಮತ್ತು ಅಮೋಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್ ಸಿದ್ದಲಿಂಗಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment