ಭದ್ರಾವತಿ ಹೊಸಸಿದ್ದಾಪುರದ ಸುರಕ್ಷಾ ವೃದ್ದಾಶ್ರಮ ಮತ್ತು ಅನಾಥಾಶ್ರಮದಲ್ಲಿ ಗುರುವಾರ ಸಮಾಜವಾದಿ ನಾಯಕ, ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್‌ರವರ ೨೩ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಡಿ. ೧೫: ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್‌ರವರ ಸಮಾಜವಾದಿ ಚಿಂತನೆಗಳು ಇಂದಿನ ಸಮಾಜಕ್ಕೆ ಅಗತ್ಯವಾಗಿವೆ ಎಂದು ಸುರಕ್ಷಾ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದರು.
ಅವರು ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದ ಸುರಕ್ಷಾ ವೃದ್ದಾಶ್ರಮ ಮತ್ತು ಅನಾಥಾಶ್ರಮದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಮಾಜವಾದಿ ನಾಯಕ, ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್‌ರವರ ೨೩ನೇ ಪುಣ್ಯಸ್ಮರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಇಂದಿನ ಪೀಳಿಗೆಯವರು ಜೆ.ಎಚ್ ಪಟೇ\ರವರ ಸಮಾಜವಾದಿ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಪಟೇಲ್‌ರವರ ಬದುಕು ಎಲ್ಲರಿಗೂ ಆದರ್ಶಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಅವರ ಪುಣ್ಯಸ್ಮರಣೆ ಅಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
ಸಂಯುಕ್ತ(ಜನತಾದಳ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿ ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವಿಭಾಗದ ಅಧ್ಯಕ್ಷ ಬಿ. ಗಂಗಾಧರ . ನಗರಸಭಾ ಸದಸ್ಯ ಆರ್. ಮೋಹನ್‌ಕುಮಾರ್, ಸಮಾಜ ಸೇವಕ ಹಿರೇಮಠ್, ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಮಧು, ತಾಲೂಕು ಅಧ್ಯಕ್ಷ ತ್ಯಾಗರಾಜ್. ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಕೆ. ಪ್ರಭು, ಜೆಡಿಯು ತಾಲೂಕು ಅಧ್ಯಕ್ಷ ರಘು ಸಂಕ್ಲೀಪುರ, ಸುರಕ್ಷಾ ಸೇವಾ ಟ್ರಸ್ಟ್ ಕಾರ್ಯದರ್ಶಿ ಸೋಮಶೇಖರ್, ಖಜಾಂಚಿ ಪ್ರಶಾಂತ್ ಟ್ರಸ್ಟಿ ಗಳಾದ ಮಂಜುಳಮ್ಮ, ಲಲಿತ ಸೇರಿದಂತೆ ವೃದ್ಧಾಶ್ರಮದ ವೃದ್ಧರು, ಸ್ಥಳೀಯರು ಉಪಸ್ಥಿತರಿದ್ದರು.
No comments:
Post a Comment