ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹಳೇನಗರದಲ್ಲಿರುವ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಅದರಲ್ಲೂ ಈ ರಸ್ತೆಯಲ್ಲಿ ಅನಗತ್ಯವಾಗಿ ವಾಹನಗಳ ನಿಲುಗಡೆಯಾಗುತ್ತಿರುವುದು ಸಮಸ್ಯೆ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿದೆ.
ಭದ್ರಾವತಿ, ಡಿ. ೨೯: ನಗರದ ಹೃದಯ ಭಾಗದಲ್ಲಿ ಹಳೇನಗರದಲ್ಲಿರುವ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಅದರಲ್ಲೂ ಈ ರಸ್ತೆಯಲ್ಲಿ ಅನಗತ್ಯವಾಗಿ ವಾಹನಗಳ ನಿಲುಗಡೆಯಾಗುತ್ತಿರುವುದು ಸಮಸ್ಯೆ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿದೆ.
ಆಸ್ಪತ್ರೆಗೆ ಪ್ರತಿದಿನ ಸಾವಿರಾರು ಜನ ಬಂದು ಹೋಗುತ್ತಿದ್ದು, ಆಸ್ಪತ್ರೆಯ ಮುಖ್ಯ ರಸ್ತೆ ಕಿರಿದಾದ ಕಾರಣ ವಾಹನಗಳು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಅದರಲ್ಲೂ ವಾಣಿಜ್ಯ ರಸ್ತೆಯಾಗಿರುವ ಹಿನ್ನಲೆಯಲ್ಲಿ ಸದಾ ಜನಸಂದಣಿಯಿಂದ ಕೂಡಿರುತ್ತದೆ. ಸಂಬಂಧಪಟ್ಟ ಇಲಾಖೆಯವರು ಈ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಫಲಕ ಅಳವಡಿಸದ ಕಾರಣ ವಾಹನಗಳನ್ನು ಎಲ್ಲೆಬೇಕೆಂದರಲ್ಲಿ ನಿಲುಗಡೆ ಮಾಡಲಾಗುತ್ತಿದೆ. ಅಲ್ಲದೆ ಬೀದಿಬದಿ ವ್ಯಾಪಾರಿಗಳು ಸಹ ಈ ರಸ್ತೆಯನ್ನು ಆಶ್ರಯಿಸಿಕೊಂಡಿದ್ದು, ಇದರಿಂದಾಗಿ ತುರ್ತು ವಾಹನಗಳು ಸಹ ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ.
ತಕ್ಷಣ ಈ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಫಲಕ ಅಳವಡಿಸುವ ಜೊತೆಗೆ ಅನಗತ್ಯವಾಗಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಸಾರ್ವಜನಿಕರು ಮನವಿ ಮಾಡಿದ್ದಾರೆ.
No comments:
Post a Comment