ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್) ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಅಸಂಘಟಿತ ಕಾರ್ಮಿಕರ ಮಾಹಿತಿ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ನೃತ್ಯ ಕಲಾವಿದ ಅಪೇಕ್ಷ ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಡಿ. ೧ : ಸರ್ಕಾರ ಅಸಂಘಟಿತ ಕಾರ್ಮಿಕರಿಗಾಗಿ ಜಾರಿಗೊಳಿಸಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ವರ್ಕರ್ಸ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹೇಳಿದರು.
ಅವರು ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ(ಬಿಪಿಎಲ್) ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಅಸಂಘಟಿತ ಕಾರ್ಮಿಕರ ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಕುಟುಂಬದ ಆರೋಗ್ಯ ಭದ್ರತೆ, ಮಕ್ಕಳ ಶಿಕ್ಷಣ, ಮದುವೆ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ನೆರವಾಗುವಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಬಗ್ಗೆ ಮಾಹಿತಿ ಹೊಂದುವ ಮೂಲಕ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಹಕಾರ ಯೂನಿಯನ್ ವತಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ನೃತ್ಯ ಕಲಾವಿದ ಅಪೇಕ್ಷ ಮಂಜುನಾಥ್ ಮಾತನಾಡಿ, ಸರ್ಕಾರದ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪವಂತಾಗಬೇಕು. ಮೊದಲು ತಮ್ಮ ವೈಯಕ್ತಿಕ ಹಾಗು ಕುಟುಂಬದ ಹಿತರಕ್ಷಣೆಗೆ ಹೆಚ್ಚಿನ ಗಮನ ನೀಡಬೇಕು. ಸಂಘಟನೆಯಲ್ಲಿ ಎಲ್ಲರೂ ಕ್ರಿಯಾಶೀಲವಾಗಿ ಮುನ್ನಡೆಯಬೇಕು. ಸಮಾಜಕ್ಕೆ ಸಾಧ್ಯವಾದಷ್ಟು ಸೇವೆಯನ್ನು ನೀಡುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಹಣ, ಅಧಿಕಾರ, ಪದವಿ ಯಾವುದೇ ಶಾಶ್ವತವಲ್ಲ. ನಾವುಗಳು ಮಾಡುವ ಒಳ್ಳೆಯ ಕಾರ್ಯಗಳು ಶಾಶ್ವತವಾಗಿ ಉಳಿಯಲಿವೆ ಎಂದರು.
ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್‌ನ ಅನಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಪಿಎಲ್ ಸಂಘದ ಅಧ್ಯಕ್ಷ ಬಿ. ಜಗದೀಶ್, ಪ್ರಜಾರಾಜ್ಯ ದಲಿತ ಸಂಘ(ಪಿಡಿಎಸ್) ರಾಜ್ಯಾಧ್ಯಕ್ಷ ಬಿ. ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಶ್ರೀನಿವಾಸ್ ಸ್ವಾಗತಿಸಿ, ಛಾಯಾಗ್ರಾಹಕ ಮಂಜುನಾಥ್ ವಂದಿಸಿದರು.
ಬೆಳಿಗ್ಗೆ ಧ್ವಜಾರೋಹಣ ನೇರವೇರಿಸಿ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಬಿಪಿಎಲ್ ಸಂಘದ ಉಪಾಧ್ಯಕ್ಷರಾದ ಸಂಪತ್, ಜಿ. ಗೋವಿಂದ, ಪ್ರಧಾನ ಕಾರ್ಯದರ್ಶಿ ಶ್ಯಾಮ್, ಖಜಾಂಚಿ ಮುರುಳಿ ಕೃಷ್ಣ, ಕಾರ್ಯಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಸುನಿಲ್ ಕುಮಾರ್, ಸಹಕಾರ್ಯದರ್ಶಿಗಳಾದ ರಾಜು, ಅಜಂತ್‌ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment