ಭದ್ರಾವತಿ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ದಾನಿಗಳು, ಸೇವಾಕರ್ತರನ್ನು ಸನ್ಮಾನಿಸಿದರು.
ಭದ್ರಾವತಿ, ಡಿ. ೩೧ : ಅಯ್ಯಪ್ಪ ಸ್ವಾಮಿ ದೀಪೋತ್ಸವದ ಮೂಲಕ ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದ್ದು, ಸೌಹಾರ್ದತೆಯಿಂದ ಪ್ರತಿಯೊಬ್ಬರು ಬದುಕುವಂತಾಗಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶನಿವಾರ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರತಿವರ್ಷ ವಿಜೃಂಭಣೆಯಿಂದ ದೀಪೋತ್ಸವ ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಅಯ್ಯಪ್ಪಸ್ವಾಮಿ ಕೃಪೆಯಿಂದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುವ ಜೊತೆಗೆ ಸಮಿತಿಗೆ ಎಲ್ಲಾ ರೀತಿಯ ಸಹಕಾರ ನೀಡುವುದು ಭರವಸೆ ನೀಡಿದರು.
ಭದ್ರಾವತಿ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ ಅಂಗವಾಗಿ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.
ಪ್ರಮುಖರಾದ ಬಿ.ಕೆ ಜಗನ್ನಾಥ, ಟಿ. ಚಂದ್ರೇಗೌಡ, ಬಾಲಕೃಷ್ಣ, ಎಸ್. ಕುಮಾರ್, ಸುದೀಪ್‌ಕುಮಾರ್, ಬಿ.ಎಸ್ ಗಣೇಶ್, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಎಸ್. ಜಯಕೃಷ್ಣ, ಉಪಾಧ್ಯಕ್ಷ ವಿ. ಬಾಬು, ಪ್ರಧಾನ ಕಾರ್ಯದರ್ಶಿ ಟಿ.ಪಿ ಸುಬ್ರಮಣ್ಯ, ಕಾರ್ಯದರ್ಶಿ ಶೇಖ್ಯಾನಾಯ್ಕ, ಖಜಾಂಚಿ ರಾಮಮೊಗವೀರ, ಸದಸ್ಯರಾದ ಪಿ.ಆರ್ ಪ್ರಭಾಕರ್, ಆರ್. ರಾಧಕೃಷ್ಣನ್, ಡಿ. ಗಿರೀಶ್ ಪಿಳ್ಳೆ, ಕೆ.ಸಿ ರಾಜಶೇಖರ್, ಕೆ. ಮಧುಕುಮಾರ್ ಹಾಗು ಕೇರಳ ಸಮಾಜಂ ಹಾಗು ಮಹಿಳಾ ಘಟಕ ಮತ್ತು ಯುವ ಘಟಕದ ಪದಾಧಿಕಾರಿಗಳು ಹಾಗು ಅಯ್ಯಪ್ಪ ಸ್ವಾಮಿ ಗುರುಮೂರ್ತಿ, ಮಾಲಾಧಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸೇವಾಕರ್ತರು, ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತಿಗೀತೆಗಳ ಗಾಯನ ನಡೆಯಿತು. ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment