ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಸೇನಾ ಸಮಿತಿ ವತಿಯಿಂದ ದರ್ಶನ್ ಅಭಿಮಾನಿಗಳು ಮಂಗಳವಾರ ರಾತ್ರಿ ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಂಜಿನ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಡಿ. ೨೦: ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಸೇನಾ ಸಮಿತಿ ವತಿಯಿಂದ ದರ್ಶನ್ ಅಭಿಮಾನಿಗಳು ಮಂಗಳವಾರ ರಾತ್ರಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಂಜಿನ ಪ್ರತಿಭಟನೆ ನಡೆಸಿದರು.
ಚಿತ್ರನಟ ದರ್ಶನ್ ಮೇಲೆ ಕೆಲವು ಗೂಂಡಾಗಳು ಚಪ್ಪಲಿ ಎಸೆದು ಅವಮಾನ ಮಾಡಿದ್ದು, ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಪ್ರತಿಭಟನೆ ನಡೆಸಿದ ಅಭಿಮಾನಿಗಳು ತಕ್ಷಣ ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪ್ರಮುಖರಾದ ಸಂತೋಷ್‌ಕುಮಾರ್, ಸಂದೀಪ್, ಆಟೋ ಸೋಮ, ಲೋಹಿತ್, ದರ್ಶನ್, ಕಿರಣ್, ರಾಜು, ಪ್ರವೀಣ, ಮಹೇಶ್ ಸೇರಿದಂತೆ ಪ್ರತಿಭಟನೆ ನೇತೃತ್ವ ವಹಿಸಿದ್ದರು.
No comments:
Post a Comment