ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮ ಪಂಚಾಯತಿ ಸರ್ಕಾರಿ ಕಿರಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಪ್ರೇಮ ತಂಡದಿಂದ ೪೩ನೇ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಡಿ. ೧೯ : ನಮ್ಮಲ್ಲಿ ಧನಾತ್ಮಕ ಆಲೋಚನೆಯಿಂದ ಉತ್ತಮ ಅನುಷ್ಠಾನ ಮಾಡಲು ಸಾಧ್ಯವಿದ್ದು, ಒಬ್ಬನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಸುಮ್ಮನಿರಬಾರದು ಬದಲಾಗಿ ಉತ್ತಮ ಕೆಲಸ ಮಾಡುವವರ ಜೊತೆಯಲ್ಲಿ ಕೈ ಜೊಡಿಸಿದರೆ ಯಶಸ್ಸು ಇಬ್ಬರಿಗೂ ದೊರೆಯುತ್ತದೆ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ, ಕರ್ನಾಟಕ ಪರಿಸರರತ್ನ ಪ್ರಶಸ್ತಿ ಪುರಸ್ಕೃತ ಟಿ. ಮಲ್ಲಿಕಾರ್ಜುನ್ ಹೇಳಿದರು.
ಅವರು ತಾಲೂಕಿನ ಹಿರಿಯೂರು ಗ್ರಾಮ ಪಂಚಾಯತಿ ಸರ್ಕಾರಿ ಕಿರಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೪೩ನೇ ಶ್ರಮದಾನ ಕಾರ್ಯಕ್ರಮಕ್ಕೆ ಗೋಡೆಗೆ ಬಣ್ಣಹಚ್ಚುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ತಮ್ಮ ಸ್ವಂತ ಹಣದಿಂದ ಪರಿಸರ ಪ್ರೇಮ ತಂಡ ರೂಪಿಸಿಕೊಂಡು ಇದುವರೆಗೂ ೪೨ ಶ್ರಮದಾನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು. ನಾವು ಕೈಗೊಳ್ಳುವ ಕಾರ್ಯಗಳು ಸಾರ್ಥಕಗೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತಿಸಬೇಕೆಂದರು.
೭ ಶಾಲಾ ಕೊಠಡಿಗಳಿಗೆ ಬಣ್ಣ ಹಚ್ಚಲಾಯಿತು. ಅಲ್ಲದೆ ಅರೋಗ್ಯ ತಪಾಸಣೆ, ಶಾಲಾ ಸ್ವಚ್ಛತೆ ಕೈಗೊಳ್ಳಲಾಯಿತು. ಮಕ್ಕಳು ಮತ್ತು ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯತಿ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಪೋಷಕರು, ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಕೋಡ್ಲು ಯಜ್ಞ ಯ್ಯ, ಸಿ.ಅರ್.ಪಿ ಜೆ.ಎಚ್ ವೇಣುಗೋಪಾಲ್, ಪರಿಸರ ಪ್ರೇಮ ತಂಡದ ಅಧ್ಯಕ್ಷ ಶಿವಾನಾಯ್ಕ, ಜಿಲ್ಲಾ ಕಾರ್ಯದರ್ಶಿ ಪಿ.ಕೆ ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment