ಭದ್ರಾವತಿ, ಡಿ. ೯: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಡಿ.೧೦ರ ಶನಿವಾರ ಮಧ್ಯಾಹ್ನ ೧೨.೩೦ಕ್ಕೆ ತಾಲೂಕು ಪಂಚಾಯಿತಿ ಆವರಣದಲ್ಲಿ 'ಜಾಗೃತಿ ಜಾಥಾ' ಹಮ್ಮಿಕೊಳ್ಳಲಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರ ಸಂಘ ಡಿ.೧೯ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಮಾಡು ಇಲ್ಲವೇ ಮಡಿ' ಅನಿರ್ಧಿಷ್ಟ ಹೋರಾಟ ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಶಾಸಕರಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ 'ಜಾಗೃತಿ ಜಾಥಾ' ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಎನ್‌ಪಿಎಸ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment