ಭದ್ರಾವತಿ ತಾಲೂಕಿನ ತಡಸ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರ ಜಮೀನುಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರಾವತಿ, ಡಿ. ೨೭ : ತಾಲೂಕಿನ ತಡಸ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರ ಜಮೀನುಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮೀನುಗಳಿಗೆ ಸಂಪರ್ಕಗೊಂಡಿರುವ ಕಾಲುವೆಗಳು ಮತ್ತು ಜಮೀನು ರಸ್ತೆಗಳನ್ನು ಪರಿಶೀಲಿಸಿ ನಂತರ 'ನಮ್ಮ ಹೊಲ ನಮ್ಮ ರಸ್ತೆ' ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ತಡಸ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗು ಸದಸ್ಯರುಗಳು ಮತ್ತು ಅಭಿವೃದ್ಧಿ ಅಧಿಕಾರಿ ಹಾಗು ಈ ವ್ಯಾಪ್ತಿಯ ರೈತರು ಉಪಸ್ಥಿತರಿದ್ದರು.
No comments:
Post a Comment