ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಡಿ.೨೪ರಂದು ಭದ್ರಾವತಿ ತಾಲೂಕಿಗೆ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಕಛೇರಿಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಭದ್ರಾವತಿ, ಡಿ. ೧೬ : ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಡಿ.೨೪ರಂದು ತಾಲೂಕಿಗೆ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ತಾಲೂಕು ಕಛೇರಿಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಕನ್ನಡ ರಥದಲ್ಲಿ ಜಾಥಾ ಮೂಲಕ ಕನ್ನಡ ಜ್ಯೋತಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಲೂಕಿಗೆ ಮಾತ್ರ ಆಗಮಿಸಲಿದ್ದು, ಈ ಹಿನ್ನಲೆಯಲ್ಲಿ ಜ್ಯೋತಿಯನ್ನು ಅದ್ದೂರಿಯಾಗಿ ಸ್ವಾಗತಿಸಲು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ರೂಪಿಸಲು ಚರ್ಚಿಸಲಾಯಿತು.
ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮತ್ತು ಶಾಲಾ ಮಕ್ಕಳ ಬ್ಯಾಂಡ್‌ಸೆಟ್‌ನೊಂದಿಗೆ ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತಿಸುವುದು. ವಿವಿಧ ಸಂಘಟನೆಗಳಿಂದ ಗೀತ ಗಾಯನ ನಡೆಸುವುದು. ಅಂದಿನ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕನ್ನಡಪರ ಸಂಘ-ಸಂಸ್ಥೆಗಳು, ರೈತರು, ಧಾರ್ಮಿಕ ಸಂಘ-ಸಂಸ್ಥೆಗಳು, ವಿದ್ಯಾಸಂಸ್ಥೆಗಳು, ಮಹಿಳಾ ಸಂಘಟನೆಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ ಮತ್ತು ಗೈಡ್ ತಂಡಗಳು, ಶಾಲಾ ಮಕ್ಕಳು, ರೋಟರಿ, ಲಯನ್ಸ್ ಸೇವಾ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸುವಂತೆ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ. ಕಂದಾಯಾಧಿಕಾರಿ ರಾಜ್ ಕುಮಾರ್, ಬಿ.ಕೆ ಜಗನ್ನಾಥ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
No comments:
Post a Comment