ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ
ಭದ್ರಾವತಿ ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ ಕಛೇರಿ) ಹಾಗು ಉಂಬ್ಳೆಬೈಲು ರಸ್ತೆ, ಮೆಸ್ಕಾಂ ಘಟಕ-೨ ಕಛೇರಿ ಆವರಣದಲ್ಲಿರುವ ವಿದ್ಯುತ್ ಬಿಲ್ ಪಾವತಿ ಕೇಂದ್ರಗಳನ್ನು ಜ.೧, ೨೦೨೩ರಿಂದ ಸ್ಥಗಿತಗೊಳಿಸಲು ಮೆಸ್ಕಾಂ ಹೊರಡಿಸಿರುವ ಆದೇಶ ರದ್ದುಪಡಿಸಲು ಆಗ್ರಹಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ಮುನಾಫ್‌ರವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೨೬ : ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ ಕಛೇರಿ) ಹಾಗು ಉಂಬ್ಳೆಬೈಲು ರಸ್ತೆ, ಮೆಸ್ಕಾಂ ಘಟಕ-೨ ಕಛೇರಿ ಆವರಣದಲ್ಲಿರುವ ವಿದ್ಯುತ್ ಬಿಲ್ ಪಾವತಿ ಕೇಂದ್ರಗಳನ್ನು ಜ.೧, ೨೦೨೩ರಿಂದ ಸ್ಥಗಿತಗೊಳಿಸಲು ಮೆಸ್ಕಾಂ ಹೊರಡಿಸಿರುವ ಆದೇಶ ರದ್ದುಪಡಿಸಲು ಆಗ್ರಹಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ಮುನಾಫ್‌ರವರಿಗೆ ಮನವಿ ಸಲ್ಲಿಸಲಾಯಿತು.
ಈ ಹಿಂದೆ ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆಯವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದ ಪರಿಣಾಮ ನ್ಯೂಟೌನ್ ಭಾಗದ ಜನ್ನಾಪುರ, ಹುತ್ತಾಕಾಲೋನಿ, ಸಿದ್ದಾಪುರ, ಹೊಸೂರು ತಾಂಡ ಹಾಗು ನ್ಯೂಟೌನ್ ಭಾಗದ ಸ್ಲಂ ನಿವಾಸಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು ೪೦ ವರ್ಷಗಳ ಹಿಂದೆ ನಗರಸಭೆ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿ ಪಾವತಿ ಕೇಂದ್ರ ಆರಂಭಿಸಲಾಯಿತು. ನಂತರ ದಿನಗಳಲ್ಲಿ ಎನ್‌ಟಿಬಿ ಕಛೇರಿಯಲ್ಲಿ ಉಚಿತವಾಗಿ ಕೊಠಡಿಯನ್ನು ಸಹ ನೀಡಲಾಯಿತು. ಅಲ್ಲದೆ ಸಾರ್ವಜನಿಕರಿಗೆ ಮಳೆ, ಬಿಸಿಲಿನಿಂದ ರಕ್ಷಣೆ ನೀಡುವ ಸಂಬಂಧ ಈ ಹಿಂದೆ ಪೌರಾಯುಕ್ತರಾಗಿದ್ದ ಮನೋಹರ್‌ರವರು ಶೆಲ್ಟರ್ ಸಹ ನಿರ್ಮಿಸಿಕೊಟ್ಟಿದ್ದಾರೆ. ಇದೀಗ ಈ ಕೇಂದ್ರವನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿರುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಆರ್. ವೇಣುಗೋಪಾಲ್, ರಮಾವೆಂಕಟೇಶ್, ಶೈಲಜಾರಾಮಕೃಷ್ಣ, ದೇವಿಕಾನಾಗರಾಜ್, ಪಂಕಜಾ ನಟರಾಜ್, ವೇದಾ ಬಸವರಾಜ್, ಗೀತಾ, ಸುಜಾತ, ಲತಾ, ರಾಧಾ, ಇಂದ್ರಾಣಿ, ಶೈಲಜಾಮಹೇಶ್, ಶ್ರೀಲಕ್ಷ್ಮೀ, ಜಯಶ್ರೀ, ಬಿ.ವಿ ಶಶಿಕಲಾ, ಗೋಪಿ ಎಲೆಕ್ಟ್ರಿಕಲ್, ಆರ್. ಮುರುಗೇಶ್, ಎಂ.ವಿ ಚಂದ್ರಶೇಖರ್, ಎ. ವಿಶ್ವೇಶ್ವರರಾವ್, ಬಿ.ಎಸ್ ನವಾದ್, ಎಚ್.ಎನ್ ದಿನೇಶ್, ಜಾನ್ಸನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment