ಭದ್ರಾವತಿ, ಡಿ. ೧೨ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸಿ ಸಾರ್ವಜನಿಕ ರಂಗದಲ್ಲಿ ಉಳಿಸಲು ಒತ್ತಾಯಿಸಿ ಡಿ.೧೩ರಂದು ಸಿಐಟಿಯು ಜಿಲ್ಲಾ ಸಂಘಟನಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸರ್.ಎಂ ವಿಶ್ವೇಶ್ವರಾಯರವರು ದೇಶದಲ್ಲಿ ಸ್ಥಾಪಿಸಿದ ಮೊಟ್ಟ ಮೊದಲ ಉಕ್ಕು ಉದ್ಯಮ ಇದ್ದಾಗಿದ್ದು, ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಸುಮಾರು ೬೦೦೦ ಕೋ. ರು. ಬಂಡವಾಳ ತೊಡಗಿಸಿ ಸಾರ್ವಜನಿಕ ರಂಗದಲ್ಲಿ ಉಳಿಸಲು ಒತ್ತಾಯಿಸಿ ಬೆಳಿಗ್ಗೆ ೧೧.೧೫ಕ್ಕೆ ಬೃಹತ್ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗುವುದು. ಕಾರ್ಮಿಕರು, ಹೋರಾಟಗಾರರು, ವಿವಿಧ ಸಂಘಟನೆಗಳು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಿಐಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ ಕೋರಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ