ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು.
ಭದ್ರಾವತಿ, ಡಿ. ೨೨: ಎಲ್ಲಾ ಧರ್ಮಗಳ ಸಂದೇಶ ಒಂದೇ ಆಗಿದ್ದು, ಎಲ್ಲರೂ ಒಗ್ಗಟ್ಟಾಗಿ ಬದುಕಿದಾಗ ಮಾತ್ರ ನಮ್ಮ ಜೀವನ ಸಾರ್ಥಕಗೊಳ್ಳುತ್ತದೆ ಎಂದು ಶಿವಮೊಗ್ಗ ಧರ್ಮಗುರು ಮೌಲಾನ ಶಾಹುಲ್ ಹಬೀಬ್ ಹೇಳಿದರು.
ಅವರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಮನುಷ್ಯರೆಲ್ಲರೂ ಒಂದೇ ಆಗಿದ್ದು, ನಮ್ಮಲ್ಲಿ ಯಾವುದೇ ತಾರತಮ್ಯವಿರಬಾರದು. ಪ್ರತಿಯೊಬ್ಬರೂ ಸಹ ನಮ್ಮವರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಧರ್ಮಗಳು ಸಹ ಮನುಷ್ಯನ ಬದುಕಿಗೆ ದಾರಿದೀಪವಾಗಿವೆ. ಎಲ್ಲಾ ಧರ್ಮಗಳ ಸಂದೇಶ ಒಂದೇ ಆಗಿದ್ದು, ಇದನ್ನು ಅರಿತುಕೊಂಡು ಸೌಹಾರ್ದತೆಯಿಂದ ಬದುಕಬೇಕೆಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಮಾಜದಲ್ಲಿ ಸೌಹಾರ್ದತೆ ಬಹಳ ಮುಖ್ಯವಾಗಿದೆ. ನಾವೆಲ್ಲರೂ ಇದನ್ನು ಅರಿತುಕೊಂಡು ಬದುಕು ಸಾಗಿಸುವಂತಾಗಬೇಕೆಂದರು.
ಉಜ್ಜನಿಪುರ ಡಾನ್ ಬೋಸ್ಕೋ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ದೇಶಕ ಪಾದರ್ ಆರೋಗ್ಯ ರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭಾ ಸದಸ್ಯ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ರೆವರೆಂಡ್ ಪಿ.ಎಫ್ ಗಿಡಿಯೋನ್ ಕ್ರಿಸ್‌ಮಸ್ ಸಂದೇಶ ನೀಡಿದರು.
ಹಳೇನಗರ ಕಂಚಿಬಾಗಿಲು ವೃತ್ತ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ಪವನ್‌ಕುಮಾರ್ ಉಡುಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾವತಿ, ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಕಾಂಗ್ರೆಸ್ ವಕ್ತಾರ ಅಮೋಸ್ ಸೇರಿದಂತೆ ವಿವಿಧ ಚರ್ಚ್‌ಗಳ ಧರ್ಮಗುರುಗಳು, ವಿವಿಧ ಧರ್ಮಗಳ ಮುಖಂಡರು ಉಪಸ್ಥಿತರಿದ್ದರು.
ಭದ್ರಾವತಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸೌಹಾರ್ದ ಕ್ರಿಸ್‌ಮಸ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment