ಭದ್ರಾವತಿ ಜಾವಳ್ಳಿ ಅರಬಿಂದೋ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಡಿ. ೧೮: ಜ್ಞಾನದೀಪ ವಿದ್ಯಾಸಂಸ್ಥೆಯ ಜಾವಳ್ಳಿ ಶ್ರೀ ಅರಬಿಂದೋ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರು ರಾಜಾಜಿನಗರ ಕೆಎಲ್‌ಇ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರ್. ಸಿಂಧೂರ(ಆಂಗ್ಲ ಭಾಷೆ ಪ್ರಬಂಧ) ಪ್ರಥಮ ಮತ್ತು ತ್ರಿಷಾಂತ್ ಎನ್ ರಾಜ್ ಹಾಗು ಪ್ರಹ್ಲಾದ್ ಆರ್ ಶಾಸ್ತ್ರಿ(ರಸ ಪ್ರಶ್ನೆ) ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡು ಕೀರ್ತಿ ತಂದಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಡಾ.ಕೆ ನಾಗರಾಜ್ ಹಾಗೂ ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
No comments:
Post a Comment