ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭದ್ರಾವತಿ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟಿನ ಅಧ್ಯಕ್ಷ ಡಿ. ನಾಗರಾಜ್‌ರವರು ಭಾಗವಹಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಡಿ. ೩೦: ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಶಿಕ್ಷಣ ಟ್ರಸ್ಟಿನ ಅಧ್ಯಕ್ಷ ಡಿ. ನಾಗರಾಜ್‌ರವರು ಭಾಗವಹಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಪುದುಚೆರಿ ಗಾಜೀವ್‌ಗಾಂಧಿ ಇಂಡೋರ್ ಸ್ಟೇಡಿಯಂ, ಉಪ್ಪಲಮ್‌ನಲ್ಲಿ ಪುದುಚೆರಿ ಅಮೆಚ್ಯೂರ್ ಯೋಗ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗು ಇಂಡಿಯನ್ ಯೋಗ ಫೆಡರೇಷನ್ ವತಿಯಿಂದ ಆಯೋಜಿಸಲಾಗಿದ್ದ ೪೧ನೇ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಪಂದ್ಯಾವಳಿಯ ೬೦ ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಡಿ. ನಾಗರಾಜ್‌ರವರನ್ನು ಕರ್ನಾಟಕ ರಾಜ್ಯ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಹಾಗು ಕಾರ್ಯದರ್ಶಿ ಡಿ. ಪುಟ್ಟೇಗೌಡ ಹಾಗು ಯೋಗಪಟುಗಳು ಅಭಿನಂದಿಸಿದ್ದಾರೆ.
No comments:
Post a Comment