ಸೂಕ್ತ ಕ್ರಮ ಕೈಗೊಳ್ಳಲು ತಹಸೀಲ್ದಾರ್‌ಗೆ ಮನವಿ
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಡಿ. ೬: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಿದ್ದು, ಈ ಹಿಂದೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಪರಿಶ್ರಮದ ಫಲವಾಗಿ ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ೭೦ ಕೆರೆಗಳ ಪೈಕಿ ಈಗಾಗಲೇ ೨೫ ಕೆರೆಗಳ ಬೌಂಡರಿ ನಿಗದಿಪಡಿಸಲಾಗಿದ್ದು, ತುರ್ತಾಗಿ ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ನಗರಸಭೆಗೆ ಹಸ್ತಾಂತರ ಮಾಡುವುದು. ಉಳಿದ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಕ್ರಮ ಕೈಗೊಳ್ಳುವುದು.
ಕಲ್ಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಹಾಗು ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಈಗಾಗಲೇ ನಿಗದಿಪಡಿಸಲಾಗಿದೆ. ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ಸಂಬಂಧ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿ ಪಡಿಸುವ ಸಂಬಂಧ ಸರ್ಕಾರದಿಂದ ಇದುವರೆಗೂ ಯಾವುದೇ ಅನುದಾನ ಬಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಕ್ಯಾಚ್ ದ ರೈನ್'(ಮಳೆ ನೀರು ಹಿಡಿಯಿರಿ) ಅನುಷ್ಠಾನಗೊಳ್ಳಲು ಕೆರೆಗಳ ಸಮೀಪವಿರುವ ರೈತರುಗಳಿಗೆ ಕೆರೆಗಳಲ್ಲಿರುವ ಊಳನ್ನು ತೆಗೆದು ಕೆರೆಗಳನ್ನು ಅಭಿವೃದ್ಧಿಪಡಿಸಲು ಷರತ್ತು ಬದ್ಧ ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
ವೇದಿಕೆ ಪ್ರಮುಖರಾದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮೂಡಲಗಿರಿ ಗೌಡ, ರುದ್ರೇಶ್, ಆನಂದ್, ದೇವಿಕಾ ನಾಗರಾಜ್, ಮಹಮದ್ ಸುಹೇಲ್, ಗವಿಸಿದ್ದಪ್ಪ, ಬಿ.ಡಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
No comments:
Post a Comment