ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಭದ್ರಾವತಿ ತಾಲೂಕಿನ ಕಾಗೆಕೋಡಮಗ್ಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಪನಾಲೆಗಳನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಶನಿವಾರ ಪರಿಶೀಲನೆ ನಡೆಸಿದರು.
ಭದ್ರಾವತಿ, ಡಿ. ೧೭: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ತಾಲೂಕಿನ ಕಾಗೆಕೋಡಮಗ್ಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಪನಾಲೆಗಳನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಶನಿವಾರ ಪರಿಶೀಲನೆ ನಡೆಸಿದರು.
ಉಪನಾಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ಮತ್ತು ಜಂಗಲ್ ತುಂಬಿಕೊಂಡು ನೀರು ಸರಾಗವಾಗಿ ಹರಿಯಲು ತೊಂದರೆಯಾಗಿದ್ದು, ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸುತಿರುವ ನೀರನ್ನು ಈಗಾಗಲೇ ನಿಲ್ಲಿಸಿದ್ದು, ಈ ಬಿಡುವಿನ ಅವಧಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡು ನಾಲೆ ಸ್ವಚ್ಛಗೊಳಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಈ ಹಿಂದೆ ಪವಿತ್ರ ರಾಮಯ್ಯ ನಿರ್ದೇಶನ ನೀಡಿದ್ದರು.
ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಗೆಕೋಡಮಗ್ಗಿ ನೀರು ಬಳಕೆದಾರರ ಸಂಘದ ಉಪಾಧ್ಯಕ್ಷ ಮಂಜಣ್ಣ, ಕಾರ್ಯದರ್ಶಿ ರವಿ ಕುಮಾರ್ ಹಾಗೂ ಸದಸ್ಯರುಗಳು, ಗ್ರಾಮದ ರೈತರು, ಮುಖಂಡರುಗಳು ಉಪಸ್ಥಿತರಿದ್ದರು.
No comments:
Post a Comment