ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದಲ್ಲಿ ಅನಾಥಾಶ್ರಮ ಹಾಗು ವೃದ್ಧಾಶ್ರಮ ಆರಂಭಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹಾಗು ಸಾಮಾಜಿಕ ಸೇವಾಕರ್ತ ಪ್ರಶಾಂತ್‌ರವರು ತಮ್ಮ ಹುಟ್ಟುಹಬ್ಬವನ್ನು ಅನಾಥರು, ವೃದ್ಧರೊಂದಿಗೆ ಆಚರಿಸಿಕೊಂಡರು.
ಭದ್ರಾವತಿ, ಡಿ. ೧೦ : ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರದಲ್ಲಿ ಅನಾಥಾಶ್ರಮ ಹಾಗು ವೃದ್ಧಾಶ್ರಮ ಆರಂಭಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಹಾಗು ಸಾಮಾಜಿಕ ಸೇವಾಕರ್ತ ಪ್ರಶಾಂತ್‌ರವರು ತಮ್ಮ ಹುಟ್ಟುಹಬ್ಬವನ್ನು ಅನಾಥರು, ವೃದ್ಧರೊಂದಿಗೆ ಆಚರಿಸಿಕೊಂಡರು.
ಜ್ಯೋತಿ ಸೋಮಶೇಖರ್‌ರವರು ಹಲವಾರು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಗುರುತಿಸಿಕೊಂಡು ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ತದನಂತರ ಸುರಕ್ಷಾ ಸೇವಾ ಟ್ರಸ್ಟ್ ಮೂಲಕ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮ ಆರಂಭಿಸಿ ಗಮನ ಸೆಳೆದಿದ್ದಾರೆ.
ಜ್ಯೋತಿ ಸೋಮಶೇಖರ್ ಹಾಗು ಟ್ರಸ್ಟ್ ಖಜಾಂಚಿ ಪ್ರಶಾಂತ್ ತಮ್ಮ ಹುಟ್ಟುಹಬ್ಬವನ್ನು ಅನಾಥರು ಹಾಗು ವೃದ್ಧರೊಂದಿಗೆ ಆಚರಿಸಿಕೊಂಡರು. ವಿವಿಧ ಸಂಘಟನೆಗಳಿಂದ ಈ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಟ್ರಸ್ಟಿಗಳು, ಕರವೇ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment