ಭದ್ರಾವತಿ, ಡಿ. ೨೭ : ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಪಟ್ಟಿರುವ ವ್ಯಕ್ತಿಯನ್ನು ತಾಲೂಕಿನ ಮತ್ತಿಘಟ್ಟ ಗ್ರಾಮದ ನಿವಾಸಿ ನಂದೀಶ(೨೮) ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಮದ್ಯದಂಗಡಿ ಪಕ್ಕದಲ್ಲಿರುವ ಪಂಕ್ಚರ್ ಅಂಗಡಿ ಮುಂಭಾಗ ಮೃತದೇಹ ಪತ್ತೆಯಾಗಿದೆ. ಈತ ಸೋಮವಾರ ರಾತ್ರಿ ಮೃತಪಟ್ಟಿರಬಹುದು ಎನ್ನಲಾಗಿದೆ. ಮಂಗಳವಾರ ಸ್ಥಳಕ್ಕೆ ಸಂಬಂಧಿಕರು ಆಗಮಿಸಿ ಮೃತದೇಹ ಗುರುತಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
No comments:
Post a Comment