ಭದ್ರಾವತಿ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ, ಡಿ. ೭: ನಗರದ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
ದತ್ತ ಜಯಂತಿ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ದತ್ತಾತ್ರೇಯ ಸ್ವಾಮಿ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಡೆಸಲಾಯಿತು. ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
ವಿವಿಧ ಭಜನಾ ಮಂಡಳಿ ಸದಸ್ಯರು, ತಾಲೂಕು ಬ್ರಾಹ್ಮಣ ಮಹಾಸಭಾ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment