ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಸ್ವಾಮಿಯ ದರ್ಶನ ಪಡೆಯಲು ಮನವಿ
ಭದ್ರಾವತಿ, ಜ. ೧೨: ಕೊರೋನಾ ೩ನೇ ಅಲೆ ನಡುವೆಯೂ ನಗರದ ವಿವಿಧ ದೇವಾಲಯಗಳಲ್ಲಿ ಗುರುವಾರ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗಳನ್ವಯ ವೈಕುಂಠ ಏಕಾದಶಿ ಜರುಗಲಿದೆ.
ಮಿಲ್ಟ್ರಿಕ್ಯಾಂಪನಲ್ಲಿ ವೈಕುಂಠ ಏಕಾದಶಿ:
ಬೈಪಾಸ್ ರಸ್ತೆ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೫ ಗಂಟೆಯಿಂದ ಧಾರ್ಮಿಕ ಆಚರಣೆಗಳು ಜರುಗಲಿವೆ. ಸ್ವಾಮಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಶ್ರೀ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಪ್ರಧಾನ ಅರ್ಚಕ ರವಿಕುಮಾರ್ ಹಾಗು ಸೇವಾಕರ್ತ ನಾಗೇಶ್ ಕೋರಿದ್ದಾರೆ.
ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ವೈಕುಂಠ ಏಕಾದಶಿ:
ಕಾಗದನಗರ ವಾರ್ಡ್ ನಂ.೭ರ ಮುಖ್ಯರಸ್ತೆಯಲ್ಲಿರುವ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೫.೩೦ರಿಂದ ಧಾರ್ಮಿಕ ಆಚರಣೆಗಳು ಜರುಗಲಿದ್ದು, ಸಂಜೆ ೭ ಗಂಟೆಗೆ ಸಹಸ್ರ ದೀಪೋತ್ಸವ ಜರುಗಲಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಯಶಸ್ವಿಗೊಳಿಸುವಂತೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಭಟ್ಟರು ಕೋರಿದ್ದಾರೆ.
ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದಲ್ಲಿ :
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಜರುಗಲಿದೆ.
ವೈಭವದ ವೈಕುಂಠ ಏಕಾದರ್ಶಿ ವೀಕ್ಷಣೆಗೆ ಪ್ರತಿ ವರ್ಷ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುಲಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳಿಂದ ವೈಕುಂಠ ಏಕಾದಶಿಯನ್ನು ಸಂಪ್ರದಾಯದಂತೆ ಸರಳವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಭಕ್ತರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಕೋರಿದ್ದಾರೆ.