Friday, February 11, 2022

ಶ್ರೀ ಚೌಡೇಶ್ವರಿ ದೇವಸ್ಥಾನ ಲೋಕಾರ್ಪಣೆ : ಧಾರ್ಮಿಕ ಸಭೆ


ಭದ್ರಾವತಿ ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು. ಈ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಯೋಜಿಸಲಾಗಿತ್ತು.
    ಭದ್ರಾವತಿ, ಫೆ. ೧೧: ತಾಲೂಕಿನ ಕುಮರಿ ನಾರಾಯಣಪುರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಲೋಕಾರ್ಪಣೆ ಶುಕ್ರವಾರ ನೆರವೇರಿತು.
    ಲೋಕಾರ್ಪಣೆ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಂದನಾಥ ಸ್ವಾಮೀಜಿ ಮತ್ತು ಅರಕೆರೆ ವಿರಕ್ತ ಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು.
ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಎಸ್. ಮಣಿಶೇಖರ್, ಎಪಿಎಂಸಿ ಸದಸ್ಯೆ ರತ್ನಮ್ಮ,  ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೆಂಕಟೇಶ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಕುಮರಿ ನಾರಾಯಣಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಫೆ.೧೩ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ, ಫೆ. ೧೧: ತಾಲೂಕಿನ ಮೆಸ್ಕಾಂ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಲಿ ಲಿಂಕ್‌ಲೈನ್ ಕಾಮಗಾರಿ ಮತ್ತು ಸೀಗೆಬಾಗಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಸ್.ಎಫ್-೧ ಭದ್ರಾ ಕಾಲೋನಿ ಮತ್ತು ಎಸ್.ಎಫ್ -೨ ವೀರಾಪುರ ಫೀಡರ್‌ನಲ್ಲಿ ೧೧ ಕೆ.ವಿ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.೧೩ರಂದು ಬೆಳಿಗ್ಗೆ ೯.೩೦ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಳಚಿ, ತಿಮ್ಲಾಪುರ, ಕಣಕಟ್ಟೆ, ಭದ್ರಾಕಾಲೋನಿ, ಮಜ್ಜಿಗೇನಹಳ್ಳಿ, ಬಾಬಳ್ಳಿ, ಗೌಡ್ರಹಳ್ಳಿ, ಅಂಬೇಡ್ಕರ್ ಬೀದಿ, ಲಕ್ಷ್ಮೀಪುರ, ವೀರಾಪುರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಸತ್ಯಸಾಯಿ ನಗರ ಮತ್ತು ಕೈಗಾರಿಕಾ ಪ್ರದೇಶ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.

ಹೃದಯ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ ಸಾವು : ಸಂತಾಪ

ಮಹೇಶ್
    ಭದ್ರಾವತಿ, ಫೆ. ೧೧: ನಗರದ ಗೋಲ್ಡನ್ ಜ್ಯೂಬಿಲಿ ನಿವಾಸಿ, ನ್ಯಾಯಬಲೆ ಅಂಗಡಿ ಮಾಲೀಕ ಜಗದೀಶ್ ಗುಪ್ತ ಅವರ ಪುತ್ರ ಮಹೇಶ್(೪೩) ಶುಕ್ರವಾರ ಬೆಳಿಗ್ಗೆ ಅನಾರೋಗ್ಯದಿಂದ ಬೆಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
    ಮಹೇಶ್ ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿ ಶಸ್ತ್ರ ಚಿಕಿತ್ಸೆ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸೂಕ್ತ ಚಿಕಿತ್ಸೆ ಲಭ್ಯವಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಹೇಶ್ ಪತ್ನಿ ಮತ್ತು ಒಂದು ಮಗು ಹೊಂದಿದ್ದರು.
    ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾ ಹಾಗು ತಾಲೂಕು ಪದಾಧಿಕಾರಿಗಳು, ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.