Saturday, February 12, 2022

ರವಿಕುಮಾರ್ ನಿಧನ

ರವಿಕುಮಾರ್
    ಭದ್ರಾವತಿ, ಫೆ. ೧೨: ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನ ಸಮೀಪದ ನಿವಾಸಿ, ಆಟೋ ಚಾಲಕ ರವಿಕುಮಾರ್(೪೫) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
    ತಾಯಿ ಹಾಗು ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ರವಿಕುಮಾರ್ ಕಳೆದ ಸುಮಾರು ೨೫ ವರ್ಷಗಳಿಂದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದರು.
    ಇವರ ನಿಧನಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ ಹಾಗು ಕುಟುಂಬ ವರ್ಗದವರು ಸಂತಾಪ ಸೂಚಿಸಿದ್ದು, ದೇವರು ಇವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗು ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ

ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಫೆ. ೧೨: ನಗರಸಭೆ ವಾರ್ಡ್ ನಂ.೨೦ರ ವ್ಯಾಪ್ತಿಯ ಸುರಗಿತೋಪ್ ಶ್ರೀ ಚೌಡೇಶ್ವರಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
    ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾಪೂಜೆ, ಅನ್ನಸಂತರ್ಪಣೆ, ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದ ನೇತೃತ್ವವನ್ನು ವಾರ್ಡಿನ ಸದಸ್ಯೆ ಜಯಶೀಲ ಸುರೇಶ್ ವಹಿಸಿದ್ದರು.
    ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಶಾರದ ಅಪ್ಪಾಜಿ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಎಸ್. ಮಣಿಶೇಖರ್, ಎಂ.ಎ ಅಜಿತ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮಂಜುನಾಥ್, ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಖಜಾಂಚಿ ರವಿ, ಕಾರ್ಯದರ್ಶಿ ಪರಮೇಶ್ ಸೇರಿದಂತೆ ಪದಾಧಿಕಾರಿಗಳು, ಸುರಗಿತೋಪು, ಕಾಗದನಗರ, ಜೆಪಿಎಸ್ ಕಾಲೋನಿ, ಬಾಲಭಾರತಿ, ನ್ಯೂಟೌನ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.

ವಿಜೃಂಭಣೆಯಿಂದ ಜರುಗಿದ ೨೯ನೇ ವರ್ಷದ ಶ್ರೀ ಶನೈಶ್ವರ ಜಾತ್ರಾ ವಾರ್ಷಿಕೋತ್ಸವ


ಭದ್ರಾವತಿ ನಗರದ ಹೊಸಮನೆ ಮುಖ್ಯರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೯ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
    ಭದ್ರಾವತಿ, ಫೆ. ೧೨: ನಗರದ ಹೊಸಮನೆ ಮುಖ್ಯರಸ್ತೆ ಪಶು ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಶನೈಶ್ವರ ದೇವಸ್ಥಾನದ ೨೯ನೇ ವರ್ಷದ ಜಾತ್ರಾ ವಾರ್ಷಿಕೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ಶನಿವಾರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
        ಶುಕ್ರವಾರ ಸಂಜೆ ಗಣಪತಿ ಪೂಜೆ, ಪುಣ್ಯಾಹ, ಕಂಕಣ ಬಂಧನ, ೧೦೮ ಕಲಶ ಪ್ರತಿಷ್ಠೆ, ಕಲಾಶಾಧಿವಾಸ, ಹೋಮ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆgಗಳೊಂದಿಗೆ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಲಾಯಿತು. ಶನಿವಾರ ಸಾಮೂಹಿಕ ನವಗ್ರಹ ಹೋಮ, ಶನೈಶ್ವರ ಹೋಮ, ಶ್ರೀಸ್ವಾಮಿಗೆ ೧೦೮ ಕಲಶದ ಕುಂಭಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಫೆ.೧೩ರ ಭಾನುವಾರ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗು ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನಸಂತರ್ಪಣೆ ನಡೆಯಲಿದೆ.
    ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ಆರ್ ಗೋವಿಂದಸ್ವಾಮಿ, ಗೌರವ ಸಲಹೆಗಾರ ಎಸ್.ಎನ್ ಸುಭಾಷ್, ಉಪಾಧ್ಯಕ್ಷ ಎ.ಎಂ ದೇವೇಂದ್ರ, ಕಾರ್ಯದರ್ಶಿ ಎಚ್.ಎಂ ತಿಪ್ಪೇಸ್ವಾಮಿ, ಸಹಕಾರ್ಯದರ್ಶಿ ಎಂ.ಆರ್ ಮಹೇಶ್, ಖಜಾಂಚಿ ಡಿ.ಎಚ್. ಮುಕುಂದಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ಚೌಡಪ್ಪ, ಮಲ್ಲೇಶಪ್ಪ, ಎಂ.ವಿ ಆನಂದ್‌ಮೂರ್ತಿ ಮತ್ತು ಅಜಯ್ ಸೇರಿದಂತೆ ಸುತ್ತಮತ್ತ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರು, ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಪಾಲ್ಗೊಂಡಿದ್ದರು.