ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ವ್ಯವಸ್ಥಾಪಕ ನಿತಿನ್ ಜೋಸ್ ಕುಟುಂಬ ಸದಸ್ಯರೊಂದಿಗೆ ೨೦೨೦-೨೧ನೇ ಸಾಲಿನ ಪ್ರತಿಷ್ಠಿತ ಸೈಲ್ ಕಾರ್ಪೊರೇಟ್ ಅವಾರ್ಡ್ ಫಾರ್ ಎಕ್ಸಲೆನ್ಸ್-ರೋಲ್ ಮಾಡೆಲ್ ಅವಾರ್ಡ್ ಪ್ರಶಸ್ತಿ ಸ್ವೀಕರಿಸಿದರು.
ಭದ್ರಾವತಿ, ಏ. ೩೦: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ವ್ಯವಸ್ಥಾಪಕ ನಿತಿನ್ ಜೋಸ್ ಅವರಿಗೆ ೨೦೨೦-೨೧ನೇ ಸಾಲಿನ ಪ್ರತಿಷ್ಠಿತ ಸೈಲ್ ಕಾರ್ಪೊರೇಟ್ ಅವಾರ್ಡ್ ಫಾರ್ ಎಕ್ಸಲೆನ್ಸ್-ರೋಲ್ ಮಾಡೆಲ್ ಅವಾರ್ಡ್ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.
ನವದೆಹಲಿಯಲ್ಲಿ ಏ.೨೮ರಂದು ಆಯೋಜಿಸಲಾಗಿದ್ದ ಸಮಾರಂಭದಲ್ಲಿ . ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ಸೋಮ ಮಂಡಲ್ ಪ್ರಶಸ್ತಿ ವಿತರಿಸಿದರು. ಪ್ರಶಸ್ತಿ ರು. ೫೦,೦೦೦ ನಗದು ಮತ್ತು ಪ್ರಮಾಣ ಪತ್ರ ಒಳಗೊಂಡಿದೆ.
ಕಾರ್ಖಾನೆಯಲ್ಲಿ ನಿತಿನ್ ಜೋಸ್‌ರವರು ೨೦೦೮ರಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಕಂಪ್ಯೂಟರ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇವರು ಬ್ಯಾಡ್ಮಿಂಟನ್ ಆಟಗಾರರು ಸಹ ಆಗಿದ್ದು, ಕಾರ್ಖಾನೆ ಆಡಳಿತ ಮಂಡಳಿ, ಅಧಿಕಾರಿಗಳು, ಕಾರ್ಮಿಕರು ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.