Wednesday, May 4, 2022

ಮೇ.೫ರಂದು ಕಸಾಪ ೧೦೮ನೇ ಸಂಸ್ಥಾಪನಾ ದಿನಾಚರಣೆ : ದತ್ತಿ ಕಾರ್ಯಕ್ರಮ

    ಭದ್ರಾವತಿ, ಮೇ. ೪: ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಮೇ.೫ರಂದು ಸಂಜೆ ೫ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಎವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಹರಿಣಾಕ್ಷಿ ಉಪನ್ಯಾಸ ನೀಡಲಿದ್ದಾರೆ.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕಸಾಪ ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಎಸ್.ಬಿ ಸಿದ್ದಪ್ಪ, ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಎಚ್.ಬಿ ಸಿದ್ದೋಜಿರಾವ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ದತ್ತಿದಾನಿಗಳಾದ ಡಾ. ವಿಜಯದೇವಿ, ಎನ್. ಶ್ರೀನಿವಾಸ್, ಡಾ. ಜಿ.ಎಂ ನಟರಾಜ್, ಜೀವಂದರ್ ಕುಮಾರ್ ಹೋತಪೇಟಿ, ಪ್ರಭಾಕರ ಬೀರಯ್ಯ, ಕರೀಗೌಡ್ರ ನಾಗರಾಜಪ್ಪ ಆರುಂಡಿ ಮತ್ತು ವಾಗೀಶ್ ಕೋಠಿ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
    ದತ್ತಿ ನಿಧಿ ಕಾರ್ಯಕ್ರಮ:
    ಸಂಜೆ ೫.೩೦ಕ್ಕೆ ನಡೆಯಲಿರುವ ದಿವಂಗತ ಶಿವಲಿಂಗಮ್ಮ ಮತ್ತು ಡಾ. ಜಿ.ಎಂ ಮುರುಗೇಂದ್ರಯ್ಯ ದತ್ತಿ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ನ್ಯಾಯ ಕುರಿತು ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಉಪನ್ಯಾಸ ನೀಡಲಿದ್ದಾರೆ. ಅಂಧರ ಕೇಂದ್ರದ ಕಲಾವಿದರಿಂದ ಸುಗಮ ಸಂಗೀತ ನಡೆಯಲಿದ್ದು, ನಂತರ ಎಸ್. ಮನೋಜ್ ದತ್ತಿ ಕಾರ್ಯಕ್ರಮ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ದತ್ತಿ ದಾನಿಗಳಾದ ಡಾ. ಜಿ.ಎಂ ನಟರಾಜ್, ಎನ್. ಶ್ರೀನಿವಾಸ್ ಉಪಸ್ಥಿತರಿರುವರು.

ಕಲಿಕಾ ಚೇತರಿಕೆ ಉಪಕ್ರಮದ ತರಬೇತಿ ಸಾರ್ಥಕಗೊಳಿಸಿ : ಮಂಜುನಾಥ್

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭದ್ರಾವತಿ ನ್ಯೂಟೌನ್ ಸೆಂಟ್ ಚಾರ್ಲ್ಸ್ ಶಾಲೆಯಲ್ಲಿ ಅಯೋಜಿಸಲಾಗಿದ್ದ ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ(ಚಿತ್ರದುರ್ಗ) ಮಂಜುನಾಥ್ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಮೇ. ೪: ಕೋವಿಡ್-೧೯ ಕರಾಳತೆಯಲ್ಲಿ ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದು, ಇದನ್ನು ಸರಿದೊಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ  ಕಲಿಕಾಚೇತರಿಕೆ ಉಪಕ್ರಮಗಳನ್ನು ಜಾರಿಗೆ ತಂದಿದೆ. ಶಿಕ್ಷಕರು ತರಬೇತಿ ಮೂಲಕ ಪ್ರತಿ ಮಗುವಿಗೆ ಈ ಉಪಕ್ರಮಗಳನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ(ಚಿತ್ರದುರ್ಗ) ಮಂಜುನಾಥ್ ಹೇಳಿದರು.
    ಅವರು ಬುಧವಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನಗರದ ನ್ಯೂಟೌನ್ ಸೆಂಟ್ ಚಾರ್ಲ್ಸ್ ಶಾಲೆಯಲ್ಲಿ ಅಯೋಜಿಸಲಾಗಿದ್ದ ಕಲಿಕಾ ಚೇತರಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು
    ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಕಾರ್ಯಾಗಾರದಲ್ಲಿ ತಾಲೂಕಿನ ಶಾಲಾ ಶಿಕ್ಷಕರಿಗೆ ಎಲ್ಲಾ ವಿಷಯಗಳ ಕುರಿತು ಒಟ್ಟು ೧೬ ಘಟಕಗಳಲ್ಲಿ ತರಬೇತಿ ನೀಡಲಾಗುತ್ತದೆ. ಶಿಕ್ಷಕರು ಇದರ ಸದುಪಯೋಗಪಡೆದುಕೊಂಡು ಸಾರ್ಥಕಗೊಳಿಸಬೇಕೆಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ  ಮಾತನಾಡಿ, ಶಿಕ್ಷಕರು ತರಬೇತಿ ಸದ್ಬಳಕೆ ಮಾಡಿಕೊಂಡು ತಾಲೂಕಿನ ಎಲ್ಲಾ ಶಾಲೆಯ ಪ್ರತಿ ಮಗುವಿನ ಕಲಿಕೆಯ ನಷ್ಟವನ್ನು ಈ ಮೂಲಕ ಸರಿದೊಗಿಸಿ ಎಂದರು.
    ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಟಿಪಿಇಓ ಪ್ರಭು, ಶಿಕ್ಷಣ ಸಂಯೋಜಕರುಗಳಾದ ರವಿಕುಮಾರ್, ಜ್ಯೋತಿ,  ಶ್ಯಾಮಲಾ  ಮತ್ತು ಬಿಆರ್‌ಪಿ ನವೀದ್ ಅಹಮದ್, ಎಂಅರ್‌ಪಿಗಳಾದ ಪಿ.ಕೆ ಸತೀಶ್, ಮಾಯಮ್ಮ, ಮಂಜುನಾಥ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿ ರಾಜ್ ಹಾಗು ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು.  ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು  ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.

ಉದ್ಯೋಗ ಖಾತ್ರಿ ಯೋಜನೆ : ವಿಕಲಚೇತನರ ನೋಂದಾಣಿ


ಭದ್ರಾವತಿ :  ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ದುಡಿಯೋಣ ಬಾ ಅಭಿಯಾನದಲ್ಲಿ ಬುಧವಾರ ವಿಶೇಷವಾಗಿ ವಿಲಚೇತನರ  ನೋಂದಾಣಿ ನಡೆಸಲಾಯಿತು.
 ಉದ್ಯೋಗ ಚೀಟಿ ವಿತರಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಡಿ ಶೇಖರಪ್ಪ, ಖಾತ್ರಿ ಯೋಜನೆಯಲ್ಲಿ ವಿಕಲಚೇತನರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಕೆಲಸದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲಾಗಿದೆ.  ದಿನದ ಕೂಲಿ 309 ರು. ಜೊತೆಗೆ 10 ರು. ಹೆಚ್ಚುವರಿಯಾಗಿ ಸಲಕರಣೆ ವೆಚ್ಚವಾಗಿ ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಂಡು ವಿಕಲಚೇತನರು ಸಹ ಆರ್ಥಿಕವಾಗಿ ಸದೃಢ ಹೊಂದುವಂತೆ ಮನವಿ ಮಾಡಿದರು.
          ಗ್ರಾಮ ಪಂಚಾಯಿತಿ ಸದಸ್ಯ  ಎಸ್.ಎಲ್ ರವಿಕುಮಾರ್ , ಪಿಡಿಓ ಸುರೇಶ್ ಕುಮಾರ್ , ಎಸ್ ಡಿಎ ಭಾಸ್ಕರ್, ವಿ ಆರ್ ಡಬ್ಲ್ಯೂ ಪರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು .