ಭದ್ರಾವತಿ ನಗರಸಭೆ ವಾರ್ಡ್ ೨೩ರ ತಿಮ್ಲಾಪುರ ರಸ್ತೆಯಲ್ಲಿರುವ ಖಬರ್‌ಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಸುಮಾರು ರು. ೬ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಪ್ಲಾಟ್ ಫಾರಂ ನಿರ್ಮಾಣಕ್ಕೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಮೇ. ೧೩: ನಗರಸಭೆ ವಾರ್ಡ್ ೨೩ರ ತಿಮ್ಲಾಪುರ ರಸ್ತೆಯಲ್ಲಿರುವ ಖಬರ್‌ಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಸುಮಾರು ರು. ೬ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಪ್ಲಾಟ್ ಫಾರಂ ನಿರ್ಮಾಣಕ್ಕೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಕಾಗದನಗರ, ಜೆಪಿಎಸ್ ಕಾಲೋನಿ, ಉಜ್ಜನಿಪುರ, ಬುಳ್ಳಾಪುರ ಹಾಗು ತಿಮ್ಲಾಪುರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಮುಸ್ಲಿಂ ಸಮುದಾಯವರಿಗೆ ಈ ಖಬರ್‌ಸ್ಥಾನ ಹೆಚ್ಚು ಅವಶ್ಯಕವಾಗಿದೆ. ಖಬರ್‌ಸ್ಥಾನವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿಕೊಂಡು ಬರಲಾಗುತ್ತಿದೆ.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಕೆ ಮೋಹನ್, ಪ್ರೇಮಾ ಬದರಿನಾರಾಯಣ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಉಪಾಧ್ಯಕ್ಷ ಎಚ್. ನಾಗರಾಜ್, ಮುಸ್ಲಿಂ ಸಮುದಾಯದ ಪ್ರಮುಖರಾದ ಜಹೀರ್ ಜಾನ್, ಅಮೀರ್ ಜಾನ್, ಜೆಬಿಟಿ ಬಾಬು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.