ಭದ್ರಾವತಿ, ಮೇ. 26: ನಗರಸಭೆ ವಾರ್ಡ್ ನಂ.3ರ ಚಾಮೇಗೌಡ ಏರಿಯಾದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನವನ್ನು ಎಲ್ಲರ ಸಹಕಾರದೊಂದಿಗೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಸಿದ್ಧವಿದ್ದು ಅಗತ್ಯವಿರುವ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ವಾರ್ಡ್ ನಗರಸಭಾ ಸದಸ್ಯ ಜಾರ್ಜ್, ಶಿಲ್ಪಿ ಜಯರಾಂ, ಕೃಷ್ಣಮೂರ್ತಿ , ಪುಟ್ಟಸ್ವಾಮಿ, ಗೋವಿಂದಪ್ಪ , ಶ್ರೀನಿವಾಸ ನಾಯ್ಡು, ಮಹಾದೇವಯ್ಯ, ಮಾಣಿಕ್ಯಂ, ಮಹಾದೇವ, ಉಮೇಶ, ಕೃಷ್ಣ, ತಿಮ್ಮಯ್ಯ, ವೆಂಕಟೇಶ್ ಮತ್ತು ಅರ್ಚಕರಾದ ಷಣ್ಮುಗಂ, ರಾಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು . ದೇವಸ್ಥಾನ ಗೋಪುರವನ್ನು ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
Thursday, May 26, 2022
ವಿಐಎಸ್‌ಎಲ್ ಕಾರ್ಮಿಕ ಸಂಘದ ಮೊದಲ ಮಹಿಳಾ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜೆ.ಸಿ ರಾಜಮ್ಮ ನಿಧನ
ಜೆ.ಸಿ ರಾಜಮ್ಮ
ಭದ್ರಾವತಿ, ಮೇ. ೨೬: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕ ಸಂಘದ ಮೊದಲ ಮಹಿಳಾ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ(ಕೆ.ಸಿ ಬ್ಲಾಕ್) ನಿವಾಸಿ ಜೆ.ಸಿ ರಾಜಮ್ಮ(೮೭) ಗುರುವಾರ ನಿಧನ ಹೊಂದಿದರು.
೫ ಜನ ಸಹೋದರಿಯರು ಮತ್ತು ೬ ಜನ ಸಹೋದರರು ಇದ್ದರು. ರಾಜಮ್ಮ ನಗರದ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿದ್ದು, ಕಾರ್ಮಿಕ ಸಂಘಕ್ಕೆ ಆಯ್ಕೆಯಾಗಿ ಪದಾಧಿಕಾರಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ಅವಧಿಯಲ್ಲಿ ಕಾರ್ಮಿಕರಿಗೆ ಬರಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ಇವರ ಅಂತ್ಯಕ್ರಿಯೆ ಸಂಜೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಇವರ ನಿಧನಕ್ಕೆ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷರಾದ ಎಸ್.ಎನ್ ಬಾಲಕೃಷ್ಣ, ಜೆ.ಎನ್ ಚಂದ್ರಹಾಸ, ಎಸ್. ನರಸಿಂಹಚಾರ್, ಪ್ರಸ್ತುತ ಕಾರ್ಮಿಕ ಸಂಘದ ಅಧ್ಯಕ್ಷರಾಗಿರುವ ಜೆ. ಜಗದೀಶ್ ಹಾಗು ಪದಾಧಿಕಾರಿಗಳು, ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಲಿಂಗಯ್ಯ, ಪದಾಧಿಕಾರಿಗಳಾದ ಹನುಮಂತರಾವ್, ಶಂಕರ್, ಮಹೇಶಪ್ಪ, ಬಸವರಾಜ್, ಜಯರಾಜ್, ಕೆಂಪಯ್ಯ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ರಮಕಾಂತ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
೧೦೦ ಲೀಟರ್ ಮಂಡಕ್ಕೆ ಬೆಲೆ ೪೫೦ ರು. ನಿಗದಿ
ಭದ್ರಾವತಿ ಸೀಗೆಬಾಗಿಯಲ್ಲಿ ಗುರವಾರ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆ ನಡೆಯಿತು.
ಭದ್ರಾವತಿ, ಮೇ. ೨೬: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ೧೦೦ ಲೀಟರ್ ಮಂಡಕ್ಕಿ ಬೆಲೆ ೪೫೦ ರು. ನಿಗದಿಪಡಿಸಲಾಗಿದ್ದು, ಎಲ್ಲರೂ ಸಹಕರಿಸುವಂತೆ ಮಂಡಕ್ಕಿ ಉತ್ಪಾದನಾ ಮಾಲೀಕರು ಮನವಿ ಮಾಡಿದರು.
ಗುರುವಾರ ನಗರಸಭೆ ವ್ಯಾಪ್ತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಮಾತನಾಡಿದ ಮಂಡಕ್ಕಿ ಉತ್ಪಾದನಾ ಮಾಲೀಕರು, ಭತ್ತದ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ, ಕಾರ್ಮಿಕರ ಕೂಲಿ ಹೆಚ್ಚಳ ಹಾಗು ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಮಂಡಕ್ಕಿ ಉತ್ಪಾದಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಮಂಡಕ್ಕಿ ಉದ್ಯಮ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕೂಲಿ ಕಾರ್ಮಿಕರು ದಿನದ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಪ್ರಸ್ತುತ ಮಂಡಕ್ಕಿ ದರ ಅತ್ಯಂತ ಕಡಿಮೆ ಇದ್ದು, ಈ ದರದಲ್ಲಿ ಮಂಡಕ್ಕಿ ಉದ್ಯಮ ನಡೆಸುವುದು ಅಸಾಧ್ಯವಾಗಿದೆ. ಮಂಡಕ್ಕಿ ಹೆಚ್ಚಾಗಿ ಬಡವರ್ಗದವರು ಬಳಸುವ ಆಹಾರ ಪದಾರ್ಥವಾಗಿದ್ದು, ಇಂತಹ ಆಹಾರ ಪದಾರ್ಥದ ಬೆಲೆ ಏರಿಕೆ ಮಾಡುವುದು ಇಂದು ಅನಿವಾರ್ಯವಾಗಿದೆ. ಈಗಾಗಲೇ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಹಕಾರ ಸಂಘದವರು ಸಭೆ ನಡೆಸಿ ಮಂಡಕ್ಕಿ ಬೆಲೆ ಏರಿಕೆ ಮಾಡಲು ತೀರ್ಮಾಣ ಕೈಗೊಂಡಿದ್ದಾರೆ. ೧೦೦ ಲೀಟರ್ ಮಂಡಕ್ಕಿ ದರವನ್ನು ೪೫೦ ರು.ಗಳಿಗೆ ನಿಗದಿ ಪಡಿಸಲಾಗುತ್ತಿದೆ. ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಅಧ್ಯಕ್ಷ ಖಾದರ್ ಖಾನ್ ಸಭೆ ಅಧ್ಯಕ್ಷತೆ ವಹಿಸಿದ್ದರು.
ಪ್ರಮುಖರಾದ ಚಿಕ್ಕಮಗಳೂರಿನ ಪಾಪಣ್ಣ, ತರೀಕೆರೆಯ ಚಾಂದ್ ಪಾಷ, ಬೇಲೂರಿನ ತಜಮ್ಮುಲ್ ಪಾಷ, ಶಿವಮೊಗ್ಗದ ಚಂದ್ರಣ್ಣ, ಹಾಸನದ ಕೃಷ್ಣೇಗೌಡ ಸೇರಿದಂತೆ
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಮಂಡಕ್ಕಿ ಉತ್ಪಾದಕರು ಹಾಗೂ ಮಾರಾಟಗಾರರು ಪಾಲ್ಗೊಂಡಿದ್ದರು.
ಮಂಡಕ್ಕಿ ಉತ್ಪಾದನೆದಾರರು, ಮಾರಾಟಗಾರರ ಸಭೆ
ಭದ್ರಾವತಿ, ಮೇ. 26: ಸೀಗೆಬಾಗಿ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಹಾಗು ಮಾರಾಟ ಮತ್ತು ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ಭತ್ತದ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ, ಕಾರ್ಮಿಕರ ಕೂಲಿ ಹೆಚ್ಚಳ ಹಾಗು ಕಚ್ಚಾ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲಾಯಿತು. ಶಿವಮೊಗ್ಗ ಚಿಕ್ಕಮಗಳೂರು ಮತ್ತು ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಮಂಡಕ್ಕಿ ಉತ್ಪಾದಕರು ಹಾಗೂ ಮಾರಾಟಗಾರರು ಪಾಲ್ಗೊಂಡಿದ್ದರು.
Subscribe to:
Posts (Atom)