Wednesday, June 15, 2022

ಮಕ್ಕಳೊಂದಿಗೆ ಸಂಭ್ರಮಿಸಿದ ಶಿಕ್ಷಣ ಸಚಿವರು

ಭದ್ರಾವತಿಯಲ್ಲಿ ಯುರೋ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಪುಟಾಣಿ ಮಕ್ಕಳಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು.
    ಭದ್ರಾವತಿ, ಜೂ. ೧೫: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್‌ರವರು ಬುಧವಾರ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ನಡುವೆ ಕೆಲ ಸಮಯ ಮಕ್ಕಳೊಂದಿಗೆ ಸಂಭ್ರಮಿಸಿದರು.
ಸಚಿವರು ಮಕ್ಕಳೊಂದಿಗೆ ತೋರಿದ ಪ್ರೀತಿ ಭಾವನೆ ಮೆಚ್ಚುಗೆಗೆ ಪಾತ್ರವಾಯಿತು. ಯುರೋ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಪುಟಾಣಿ ಮಕ್ಕಳಿಗೆ ಸಚಿವರು ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಲವು ಮಕ್ಕಳನ್ನು ಖುಷಿಯಿಂದ ಮಾತನಾಡಿದರು.


ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಮಕ್ಕಳಿಂದ ಗುಲಾಬಿ ಹೂಗಳನ್ನು ಸ್ವೀಕರಿಸಿ ಸಂಭ್ರಮಿಸಿದರು.

    ಇದೆ ರೀತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಂದ ಗುಲಾಬಿ ಹೂಗಳನ್ನು ಸ್ವೀಕರಿಸಿ ಸಂಭ್ರಮಿಸಿದರು.
ತಾಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಚಿವರು ಮಕ್ಕಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸುವಂತೆ ಕಿವಿ ಮಾತು ಹೇಳುವ ಮೂಲಕ ಅವರೊಂದಿಗೆ ಮಧ್ಯಾಹ್ನ ಬಿಸಿಯೂಟ ಸೇವಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಮಕ್ಕಳೊಂದಿಗೆ ಮಧ್ಯಾಹ್ನ ಬಿಸಿಯೂಟ ಸೇವಿಸಿದರು.
    ಶಂಕರಮಠದಲ್ಲಿ ಸಚಿವರಿಗೆ ಸನ್ಮಾನ :
    ಸಿದ್ದಾರೂಢ ನಗರದಲ್ಲಿರುವ ಶ್ರೀ ಶಂಕರ ಮಠದ ವತಿಯಿಂದ ಬುಧವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಗಿರೀಶ್, ಶಾಂತ ಕುಮಾರ್, ಸುರೇಶ್, ಪೂರ್ಣಿಮಾ, ಸುಮಾ, ಉಷಾ,ಸಿದ್ದಲಿಂಗಯ್ಯ, ನಾಗಜ್ಯೋತಿ, ಶಿಲ್ಪರಾಣಿ, ಶಶಿಕಲಾ, ರೇಖಾ, ಸೌಖ್ಯ, ಸ್ವಾತಿ, ರಶ್ಮಿ, ಭಾರತಿ, ಜಯಲಕ್ಷ್ಮಿ ಹಾಗು ಶಂಕರ ಮಠದ ಪದಾಧಿಕಾರಿಗಳು ಮತ್ತು ಶಾರದಾ ಭಜನಾ ಮಂಡಳಿ ಸದಸ್ಯೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜೂ.೧೮ರಂದು ವದಿಯೂರು ಗ್ರಾಮದಲ್ಲಿ ವಿದ್ಯುತ್ ಅದಾಲತ್

    ಭದ್ರಾವತಿ, ಜೂ. ೧೫: ಮೆಸ್ಕಾಂ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ವಿದ್ಯುತ್ ಅದಾಲತ್ ನಡೆಸಲು ಉದ್ದೇಶಿಸಿದ್ದು, ಜೂ.೧೮ರಂದು ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಾಂತರ ಉಪವಿಭಾಗ ಘಟಕ-೨, ಬಿ.ಆರ್.ಪಿ ಶಾಖೆಯಲ್ಲಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವದಿಯೂರು ಗ್ರಾಮದಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ.
    ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಅದಾಲತ್‌ನಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಹವಾಲುಗಳಿದ್ದಲ್ಲಿ ಪರಿಹರಿಸಿಕೊಳ್ಳಲು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಕೋರಿದ್ದಾರೆ.

ಮಕ್ಕಳಲ್ಲಿನ ಕೌಶಲ್ಯಗಳನ್ನು ಗುರುತಿಸಲು ಪೂರ್ವ ಪ್ರಾಥಮಿಕ ಶಾಲೆಗಳು ಸಹಕಾರಿ : ಸಚಿವ ಬಿ.ಸಿ ನಾಗೇಶ್

ಭದ್ರಾವತಿ ಸಿದ್ದರೂಢನಗರದ ಶಂಕರಮಠ ಸಮೀಪದಲ್ಲಿ ಎಚ್.ಎಸ್ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್, ಶಂಕರ್ ಸಾ ಮಿಲ್, ಶೃಶಿ ಕ್ಲಾಮ್ಸ್ ಮತ್ತು ಸಂಸ್ಥಾನ ಪ್ರಾಪರ್ಟಿ ಗ್ರೂಪ್ಸ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯುರೋ ಕಿಡ್ಸ್ ಶಾಲೆಯ ಕಟ್ಟಡವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಉದ್ಘಾಟಿಸಿದರು.
    ಭದ್ರಾವತಿ, ಜೂ. ೧೫: ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳಲ್ಲಿನ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಹೇಳಿದರು.
    ಅವರು ಬುಧವಾರ ಸಿದ್ದರೂಢನಗರದ ಶಂಕರಮಠ ಸಮೀಪದಲ್ಲಿ ಎಚ್.ಎಸ್ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್, ಶಂಕರ್ ಸಾ ಮಿಲ್, ಶೃಶಿ ಕ್ಲಾಮ್ಸ್ ಮತ್ತು ಸಂಸ್ಥಾನ ಪ್ರಾಪರ್ಟಿ ಗ್ರೂಪ್ಸ್ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯುರೋ ಕಿಡ್ಸ್ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳು ತಾಯಿಯ ಗರ್ಭದಲ್ಲಿರುವಾಗಲೇ ಜ್ಞಾನದ ಕೌಶಲ್ಯಗಳನ್ನು ಹೊಂದಿರುತ್ತವೆ ಎಂಬುದನ್ನು ಮಹಾಭಾರತ ಸೇರಿದಂತೆ ಹಲವು ಪುರಾಣ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಾವುಗಳು ಇವುಗಳ ಮೇಲೆ ನಂಬಿಕೆ ಹೊಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಪುರಾಣ ಗ್ರಂಥಗಳಲ್ಲಿ ಉಲ್ಲೇಖವಾಗಿರುವುದು ದೃಢವಾಗುತ್ತಿದೆ. ಚಿಕ್ಕಮಕ್ಕಳಲ್ಲಿನ ಕೌಶಲ್ಯಗಳನ್ನು ಸಹ ಗುರುತಿಸಬೇಕೆಂಬ ಮನೋಭಾವನೆ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಹೆಚ್ಚು ಸಹಕಾರಿಯಾಗಿವೆ. ಮಕ್ಕಳ ಉತ್ತಮ ಶಿಕ್ಷಣಕ್ಕೆ ಪೂರಕವಾದ ಕಲಿಕೆಗಳು ಈ ಶಾಲೆಗಳಲ್ಲಿ ನಡೆಯುವಂತಾಗಬೇಕು. ಹೊಸ ಶಿಕ್ಷಣ ನೀತಿಯ ಉದ್ದೇಶ ಸಹ ಇದೆ ಆಗಿದೆ ಎಂದರು.
    ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಆರ್. ಶ್ರೇಯಸ್(ಚಿಟ್ಟೆ), ಶಾಲೆಯ ಅಧ್ಯಕ್ಷ ಎಚ್.ಎಸ್ ಶಂಕರ್, ಕಾರ್ಯದರ್ಶಿ ಆರ್. ದೀಪ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಚಿವರು ಶಾಲಾ ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಿದರು. ಅಲ್ಲದೆ ಒಂದೂವರೆ ವರ್ಷವಿರುವಾಗಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ದಿಶಾಂಕ್ ಮಲ್ಲಿಕಾರ್ಜುನ ಪುಟಾಣಿ ಮಗುವನ್ನು ಸನ್ಮಾನಿಸಿ ಗೌರವಿಸಿದರು.


ಒಂದೂವರೆ ವರ್ಷವಿರುವಾಗಲೇ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿರುವ ದಿಶಾಂಕ್ ಮಲ್ಲಿಕಾರ್ಜುನ ಪುಟಾಣಿ ಮಗುವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಸನ್ಮಾನಿಸಿ ಗೌರವಿಸಿದರು.

ವಿಇಎಸ್ ವಿದ್ಯಾಸಂಸ್ಥೆಗೆ ಶಿಕ್ಷಣ ಸಚಿವರ ಭೇಟಿ : ಸನ್ಮಾನ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬುಧವಾರ ಭೇಟಿ ನೀಡಿದರು. ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಜೊತೆಗೆ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಜೂ. ೧೫: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬುಧವಾರ ಭೇಟಿ ನೀಡಿದರು.  ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
    ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ, ವಿದ್ಯಾಸಂಸ್ಥೆ ಪದನಿಮಿತ್ತ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯಾಧ್ಯಕ್ಷ ಬಿ.ಎಲ್ ರಂಗಸ್ವಾಮಿ,  ಉಪಾಧ್ಯಕ್ಷೆ ಡಿ. ನಾಗರತ್ನ, ಕಾರ್ಯದರ್ಶಿ ಡಿ.ಎಸ್ ರಾಜಪ್ಪ , ಖಜಾಂಚಿ ಎಸ್.ಕೆ ಮೋಹನ್,   ಕಾರ್ಯಾಧ್ಯಕ್ಷರಾಗಿ ಬಿ.ಎಲ್ ರಂಗಸ್ವಾಮಿ, ಗೌರವಧ್ಯಕ್ಷ ರಂಗನಾಥ ಪ್ರಸಾದ್, ಬಸವಂತರಾವ್ ದಾಳೆ, ಯು ಮಹಾದೇವಪ್ಪ, ರೇವಣಪ್ಪ, ಎ. ತಿಪ್ಪೇಸ್ವಾಮಿ, ಆಡಳಿತಾಧಿಕಾರಿ ರಾಕೇಶ್, ದೈಹಿಕ ಶಿಕ್ಷಕ ಶಿವಲಿಂಗೇಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕರು, ಪಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು  ಸೇರಿದಂತೆ  ಇನ್ನಿತರರು ಉಪಸ್ಥಿತರಿದ್ದರು. ಸಚಿವರನ್ನು ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಹಲವು ಯೋಜನೆಗಳು : ಸಚಿವ ಬಿ.ಸಿ ನಾಗೇಶ್

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಸಿಂಚನ ಮತ್ತು ವಿದ್ಯಾಶ್ರೀ ಅವರನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಬುಧವಾರ ಸನ್ಮಾನಿಸಿ ಗೌರವಿಸಿದರು.
    ಭದ್ರಾವತಿ, ಜೂ. ೧೫ : ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ. ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ವಾಭಿಮಾನಿ, ಸ್ವಾವಲಂಬಿ ಬದುಕಿಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳಬೇಕೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
    ಅವರು ಬುಧವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಗೆ ಭೇಟಿ ನೀಡಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿದರು.
    ಈ ಹಿಂದೆ ಶಾಲೆಗಳಲ್ಲಿ ಶೌಚಾಲಯ, ಕೊಠಡಿಗಳ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಹೆಣ್ಣು ಮಕ್ಕಳು ಶಾಲೆಗಳಿಗೆ ಬರಲು ಹಿಂದೇಟು ಹಾಕುತ್ತಿದ್ದರು. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳು ಎಲ್ಲಾ ಸರ್ಕಾರಿ ಶಾಲೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
    ಸರ್ಕಾರಿ ಶಾಲೆಗಳಲ್ಲಿ ಪರಿಣಿತ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲು ಹಗಲಿರಳು ಶ್ರಮಿಸುತ್ತಿದ್ದಾರೆ. ಸ್ವಾವಲಂಬ, ಸ್ವಾಭಿಮಾನಿ ಬದುಕಿಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳುವಂತಾಗಬೇಕು. ಕಲಿಕೆಯಲ್ಲಿ ಯಾವುದೇ ರೀತಿಯ ಸಂಕೋಚವಿರಬಾರದು. ಯಾವುದೇ ರೀತಿಯ ಅನುಮಾನಗಳಿದ್ದರೂ ಸಹ ಶಿಕ್ಷಕರಿಂದ ಕೇಳಿ ತಿಳಿದುಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕು. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿನಿಯರು ಸಹ ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರಯತ್ನಿಸಬೇಕೆಂದರು.
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಸಿಂಚನ ಮತ್ತು ವಿದ್ಯಾಶ್ರೀ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕಾಲೇಜಿನ ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಹಾಗು ಕಾಲೇಜಿನ ಪ್ರೌಢಶಾಲಾ ವಿಭಾಗದ  ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.