Saturday, July 2, 2022

ವಚನ ಪಿತಾಮಹಾ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜನ್ಮದಿನ

ಭದ್ರಾವತಿಯಲ್ಲಿ ವಚನ ಪಿತಾಮಹಾ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ(ಫ.ಗು.ಹಳಕಟ್ಟಿ)ಯವರ ಜನ್ಮದಿನಾಚರಣೆ ಶನಿವಾರ ತಾಲೂಕು ಕಚೇರಿ ತಹಸೀಲ್ದಾರ್ ಸಭಾಂಗಣದಲ್ಲಿ ಸರಳವಾಗಿ ನಡೆಯಿತು.
    ಭದ್ರಾವತಿ, ಜು. ೨ : ವಚನ ಪಿತಾಮಹಾ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ(ಫ.ಗು.ಹಳಕಟ್ಟಿ)ಯವರ ಜನ್ಮದಿನಾಚರಣೆ ಶನಿವಾರ ತಾಲೂಕು ಕಚೇರಿ ತಹಸೀಲ್ದಾರ್ ಸಭಾಂಗಣದಲ್ಲಿ ಸರಳವಾಗಿ ನಡೆಯಿತು.
      ಫ.ಗು ಹಳಕಟ್ಟಿಯವರು ವಚನ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಪ್ರಸ್ತುತ ಇವರ ಸ್ಮರಣೆ ಅಗತ್ಯವಾಗಿದೆ ಎಂದು ಬಣ್ಣಿಸಲಾಯಿತು. ಇದಕ್ಕೂ ಮೊದಲು ಫ.ಗು ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
      ತಹಸೀಲ್ದಾರ್ ಆರ್. ಪ್ರದೀಪ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಕದಳಿ ಮಹಿಳಾ ವೇದಿಕೆ ಸದಸ್ಯರು, ತಾಲೂಕು ಕಛೇರಿ ಸಿಬ್ಬಂದಿಗಳು ಮತ್ತು ಶರಣ ಸಾಹಿತ್ಯ ಪರಿಷತ್ ಪ್ರಮುಖರು ಪಾಲ್ಗೊಂಡಿದ್ದರು.
      


ನವಲೆ ಬಸಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಗ್ರಾಮಸ್ಥರಿಂದ ದೂರು

ಭದ್ರಾವತಿ ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶನಿವಾರ ಗ್ರಾಮಸ್ಥರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗು ಅಭಿಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.
    ಭದ್ರಾವತಿ, ಜು. ೨: ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶನಿವಾರ ಗ್ರಾಮಸ್ಥರು  ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಿದ್ದಾರೆ.
      ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡುತ್ತಿದ್ದು, ಗ್ರಾಮಸ್ಥರು ನೆಮ್ಮದಿಯಿಂದ ಬದುಕಲು ಅಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಸೂಕ್ತ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
      ಬಿಳಿಕಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೇಮಂತ್, ಸದಸ್ಯರಾದ ಸವಿತಾ, ನಾಗಮ್ಮ,  ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ರಾಮ್ ಸೇನಾ ಜಿಲ್ಲಾಧ್ಯಕ್ಷ ಉಮೇಶ್ ಗೌಡ ಹಾಗು ಗ್ರಾಮದ ಹಿರಿಯರು, ಮಹಿಳೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.