ಭದ್ರಾವತಿ : ನಗರದ ವಿಶ್ವೇಶ್ವರಾಯ ಐರನ್& ಸ್ಟೀಲ್ ಪ್ಲಾಂಟ್ ಎಂಪ್ಲಾಯಿಸ್ ಅಸೋಸಿಯೇಷನ್ (ಎಐಟಿಯುಸಿ) ಅಧ್ಯಕ್ಷರಾಗಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧನಂಜಯ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್, ಸಹಕಾರ್ಯದರ್ಶಿಯಾಗಿ ಕೆ. ಐಸಾಕ್ ಲಿಂಕನ್ ಮತ್ತು ಖಜಾಂಚಿಯಾಗಿ ಎಂ. ಶಿವನಾಗು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹರೀಶ್, ಜಿ. ಮಂಜುನಾಥ್, ಆರ್. ರಾಘವೇಂದ್ರ, ಜೆ. ಪ್ರಕಾಶ್, ಕಿರಣ್ ಕುಮಾರ್, ದೇವೇಂದ್ರ, ಎಲ್. ಆರ್ ನವೀನ್ ಮತ್ತು ಎಂ. ವೆಂಕಟೇಶ್ ಆಯ್ಕೆಯಾಗಿದ್ದಾರೆ. ನ್ಯಾಯವಾದಿ ಎಸ್. ರವಿಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನೂತನ ಪದಾಧಿಕಾರಿಗಳನ್ನು ಕಾರ್ಮಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಅಭಿನಂದಿಸಿದ್ದಾರೆ.
Sunday, July 10, 2022
ಪೇಪರ್‌ಟೌನ್ ಪೊಲೀಸ್ ಠಾಣೆಯಿಂದ ಸುರಗಿತೋಪಿನಲ್ಲಿ ಕುಂದುಕೊರತೆ ಸಭೆ
ಭದ್ರಾವತಿ ನಗರಸಭೆ ವಾರ್ಡ್ ನಂ.೨೦ರ ಸುರಗಿತೋಪಿನಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆ ವತಿಯಿಂದ ಕುಂದುಕೊರತೆ ಸಭೆ ನಡೆಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ ಅವರನ್ನು ನಿವಾಸಿಗಳು ಸನ್ಮಾನಿಸಿ ಗೌರವಿಸಿದರು.
ಭದ್ರಾವತಿ, ಜು. ೧೦: ನಗರಸಭೆ ವಾರ್ಡ್ ನಂ.೨೦ರ ಸುರಗಿತೋಪಿನಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆ ವತಿಯಿಂದ ಕುಂದುಕೊರತೆ ಸಭೆ ನಡೆಸಲಾಯಿತು.
ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ ಮತ್ತು ಸಿಬ್ಬಂದಿಗಳು ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿದರು.
ನಗರಸಭೆ ಸದಸ್ಯೆ ಜಯಶೀಲ ಸುರೇಶ್, ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟಿನ ಗೌರವಾಧ್ಯಕ್ಷ ರಾಮಕೃಷ್ಣ, ತರೀಕೆರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್, ಮುಖಂಡರಾದ ಕ್ಲಬ್ ಸುರೇಶ್, ಉಮೇಶ್ ಸುರಗಿತೋಪು, ಬಾಬಣ್ಣ, ನಿರ್ಮಲ ಕುಮಾರಿ, ದತ್ತಣ್ಣ, ಭಾಸ್ಕರ್ ಬಾಬು, ಪುಟ್ಟಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸೇವೆ, ತ್ಯಾಗದ ಮನೋಭಾವ ರೋಟರಿ ಸಂಕೇತ : ಜಿ.ಕೆ ಬಾಲಕೃಷ್ಣನ್
ನೂತನ ಅಧ್ಯಕ್ಷರಾಗಿ ಅಡವೀಶಯ್ಯ ಪದಗ್ರಹಣ
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಅಡವೀಶಯ್ಯ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ, ಜು. ೧೦: ಸೇವೆ, ತ್ಯಾಗದ ಮನೋಭಾವ ರೋಟರಿ ಸಂಕೇತವಾಗಿದ್ದು, ಕ್ಲಬ್ ಧ್ಯೇಯೋದ್ದೇಶಗಳಿಗೆ ಗೌರವ ತರುವಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕೆಂದು ರೋಟರಿ ಕ್ಲಬ್ ಮೈಸೂರು ವಿಭಾಗದ ಎಆರ್‌ಆರ್‌ಎಫ್‌ಸಿ ಜಿ.ಕೆ ಬಾಲಕೃಷ್ಣನ್ ಹೇಳಿದರು.
ಅವರು ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರದ ನೇತೃತ್ವದ ವಹಿಸಿ ಮಾತನಾಡಿದರು.
ನೂತನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿ ಕ್ಲಬ್ ನೇತೃತ್ವ ವಹಿಸಿಕೊಂಡವರು ಹೆಚ್ಚಿನ ಜವಾಬ್ದಾರಿಯುತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಬೇಕೆಂದರು.
ನೂತನ ಅಧ್ಯಕ್ಷರಾಗಿ ಎಸ್. ಅಡವೀಶಯ್ಯ, ಕಾರ್ಯದರ್ಶಿಯಾಗಿ ಕೆ.ಎಚ್ ಶಿವಕುಮಾರ್, ಉಪಾಧ್ಯಕ್ಷರಾಗಿ ಪಿ. ಸುಧಾಕರ್ ಶೆಟ್ಟಿ, ಖಜಾಂಚಿಯಾಗಿ ವಾದಿರಾಜ ಅಡಿಗ, ನಿರ್ದೇಶಕರಾಗಿ ಟಿ.ಎಸ್ ದುಷ್ಯಂತ್‌ರಾಜ್, ಪ್ರಭಾಕರ ಬೀರಯ್ಯ, ಕೆ.ಎಚ್ ತೀರ್ಥಯ್ಯ, ಡಾ. ಕೆ. ನಾಗರಾಜ್, ಅಮಿತ್‌ಕುಮಾರ್ ಜೈನ್, ವಿವಿಧ ವಿಭಾಗಗಳ ಛೇರ್‍ಮನ್‌ಗಳಾಗಿ ಜಿ. ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ರಾವ್, ಡಾ. ಆರ್.ಸಿ ಬೆಂಗಳೂರ್, ಕೆ.ಎಸ್ ಶೈಲೇಂದ್ರ ಮತ್ತು ಹಾಲೇಶ್ ಎಸ್. ಕೂಡ್ಲಿಗೆರೆ, ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಲತಾ ದುಷ್ಯಂತ್ ರಾಜ್, ಕಾರ್ಯದರ್ಶಿಯಾಗಿ ಡಾ. ಮಯೂರಿ ಮಲ್ಲಿಕಾರ್ಜುನ ಪದಗ್ರಹಣ ಸ್ವೀಕರಿಸಿದರು.
ನಿರ್ಗಮಿತ ಅಧ್ಯಕ್ಷ ಎಚ್.ವಿ ಆದರ್ಶ್ ಮಾತನಾಡಿ, ನನ್ನ ಅವಧಿಯಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ನಿರ್ಗಮಿತ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯಾಯ ಕೈಗೊಂಡಿರುವ ಕಾರ್ಯ ಚಟುವಟಿಕೆಗಳ ಕುರಿತು ವರದಿ ಮಂಡಿಸಿದರು. ಸಹಾಯಕ ಗೌವರ್ನರ್ ಸುನೀತ ಶ್ರೀಧರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಸುಮ ತೀರ್ಥಯ್ಯ ಪ್ರಾರ್ಥಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಸ್ಥಾಪನ ದಿನ
ಭದ್ರಾವತಿ, ಜು.10: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಶಾಖೆ ಯಿಂದ ಸಂಸ್ಥಾಪನಾ ದಿನ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ ನಗರದ ಬಿ. ಎಚ್ ರಸ್ತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ನಡೆಯಿತು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜು. 9, 1949 ರಲ್ಲಿ ಸ್ಥಾಪನೆಯಾಯಿತು. ವಿದ್ಯಾರ್ಥಿಗಳ ಹಿತರಕ್ಷಣೆ ಈ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಹಲವು ಹೋರಾಟಗಳ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಇದು ವಿಶ್ವದಲ್ಲೇ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ.
ಶಿವಮೊಗ್ಗ ಜಿಲ್ಲಾ ವಿಸ್ತಾರಕಿ ಕೆ. ಶುಚಿತ, ನಗರ ಸಹಕಾರ್ಯದರ್ಶಿ ಸ್ವಾತಿ, ಎಬಿವಿಪಿ ಕಾರ್ಯಕರ್ತೆ ಅನನ್ಯ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಎಸ್.ಎಸ್ ಜ್ಯೂಯಲರ್ಸ್ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ
ಕೋಟ್ಯಾಂತರ ರು. ಮೌಲ್ಯದ ಚಿನ್ನಾಭರಣ ಕಳವು
ಭದ್ರಾವತಿ, ಜು. ೧೦: ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿರುವ ಎಸ್.ಎಸ್ ಜ್ಯೂಯಲರ್ಸ್ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು, ಕೋಟ್ಯಾಂತರ ರು. ಮೌಲ್ಯದ ಬೆಳ್ಳಿ ಹಾಗು ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಮಳಿಗೆಯ ಹಿಂಬದಿಯ ಗೋಡೆ ಹಾಗು ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ. ಈ ಮಳಿಗೆ ವಿಕ್ರಂ ಮತ್ತು ವಿಜಿಯ ಎಂಬ ಸಹೋದರರಿಗೆ ಸೇರಿದ್ದಾಗಿದೆ.
ಸ್ಥಳದಲ್ಲಿ ಗ್ಯಾಸ್ ಕಟರ್ ಸೇರಿದಂತೆ ಕಳ್ಳತನಕ್ಕೆ ಬಳಸಲಾಗಿರುವ ವಸ್ತುಗಳು ಪತ್ತೆಯಾಗಿವೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಮತ್ತು ಫೋರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಾತೆ ಹಾಗು ಹಳೇನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಬಿಜೆಪಿ ಹಿರಿಯೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಜಯದೇವ ನಿಧನ
ಜಯದೇವ
ಭದ್ರಾವತಿ, ಜು. ೧೦ : ಭಾರತೀಯ ಜನತಾ ಪಕ್ಷದ ಹಿರಿಯೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಜಯದೇವ(೫೧) ಶನಿವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಹೊಂದಿದ್ದರು. ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಭಾನುವಾರ ಗ್ರಾಮದ ಸ್ಮಶಾನ ಭೂಮಿಯಲ್ಲಿ ನೆರವೇರಿತು. ಸಂಸದ ಬಿ ವೈ ರಾಘವೇಂದ್ರ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮ ಪ್ರಸಾದ್, ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಯುವ ಮುಖಂಡ ಗೋಕುಲ್ ಕೃಷ್ಣ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.
Subscribe to:
Posts (Atom)