Tuesday, July 12, 2022

ದೊಡ್ಡೇರಿ ಗ್ರಾಮದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರು ಪೂರ್ಣಿಮಾ

ದೊಡ್ಡೇರಿ ಗ್ರಾಮದಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ಗುರು ಪೂರ್ಣಿಮಾ

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
    ಭದ್ರಾವತಿ, ಜು. ೧೨: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಮಂಗಳವಾರ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.
      ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರು.
      ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ, ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಅಧ್ಯಕ್ಷತೆ ವಹಿಸಿ ಗುರು ಪೂರ್ಣಿಮಾ ಮಹತ್ವ ವಿವರಿಸಿದರು.
       ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಪಾದ ಪೂಜೆ ನೆರವೇರಿತು. ಇದಕ್ಕೂ ಮೊದಲು ಶಿವಲಿಂಗಕ್ಕೆ ವಿಶೇಷ ಪೂಜೆ ಜರುಗಿತು. ಕುಂಚಕಲಾವಿದ ರಾಘವೇಂದ್ರ, ಭಜನಾ ಗುರು ನಾರಾಯಣ ಶೆಟ್ಟರ್, ವೀಣೆ ಶಿಕ್ಷಕ ಸೋಮು ಮತ್ತು ಸಂಗೀತ ಶಿಕ್ಷಕಿ ದಮಯಂತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
      ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್, ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಧನುಷ್ ಬೋಸ್ಲೆ, ಜೆ. ನಂದೀಶ್ ಹಾಗು ವೇದಿಕೆ ನಿರ್ದೇಶಕಿಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವಿಐಎಸ್‌ಎಲ್ ಕಾರ್ಖಾನೆ : ಯಶಸ್ವಿಯಾಗಿ ಜರುಗಿದ ‘ಐಕಾನಿಕ್ ವೀಕ್ ಆಚರಣೆ’

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕಾರ್ಖಾನೆ ವೀಕ್ಷಣೆಗೆ ಅವಕಾಶ

ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಂಬಂಧ ವಿದ್ಯಾರ್ಥಿಗಳಿಗೆ ಕಾರ್ಖಾನೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.  
    ಭದ್ರಾವತಿ, ಜು. ೧೨: ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು.
    ಜು.೪ರಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ೯ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ  'ಕಾರ್ಬನ್ ಡೈಆಕ್ಸೆಡ್ ಹೊರಸೂಸುವಿಕೆಯ ಕಡಿತ-ತತ್ಸಮಯದ ಅವಶ್ಯಕತೆ' ವಿಷಯ ಕುರಿತು ಪ್ರಬಂಧ ಬರೆಯುವ ಸ್ಪರ್ಧೆಯನ್ನು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನಡೆದ ಸ್ಪರ್ಧೆಯಲ್ಲಿ  ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಒಟ್ಟು ೧೬೭ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಆ.೧೫ರ ಸ್ವಾತಂತ್ರ್ಯ ದಿನದಂದು ಪ್ರಶಸ್ತಿ ವಿತರಣೆ ನಡೆಯಲಿದೆ.
    ವಿದ್ಯಾರ್ಥಿಗಳಲ್ಲಿ ಸ್ಟೀಲ್ ಪ್ಲಾಂಟ್ ಕಾರ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.  ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪಿ.ಯು ಕಾಲೇಜಿನ ಸುಮಾರು ೩೦೦ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ವೀಕ್ಷಿಸಿದರು. ಫೋರ್ಜ್ ಪ್ಲಾಂಟ್, ಹೀಟ್ ಟ್ರೀಟ್‌ಮೆಂಟ್ ಶಾಪ್, ರೋಲ್ ಟರ್ನಿಂಗ್ ಶಾಪ್‌ಗಳಲ್ಲಿ ಸಂಬಂಧಿಸಿದ ತಂತ್ರಜ್ಞರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು.
    'ಐಕಾನಿಕ್ ವೀಕ್ ಆಚರಣೆ' ಕೊನೆಯ ದಿನ  ಉಕ್ಕಿನ ಬಳಕೆಯ ವೀಡಿಯೋಗಳು ಮತ್ತು ಪೋಸ್ಟರ್‌ಗಳನ್ನು ನೌಕರರು ಮತ್ತು ಗುತ್ತಿಗೆ ಕಾರ್ಮಿಕರು ವೀಕ್ಷಿಸಲು ವಿಐಎಸ್‌ಎಲ್ ಇಂಟ್ರಾನೆಟ್ ವೆಬ್‌ಸೈಟ್ ಮತ್ತು ವಾಟ್ಸ್ ಆಪ್ ಗುಂಪುಗಳಲ್ಲಿ ಪ್ರದರ್ಶಿಸಲಾಯಿತು. ಅಲ್ಲದೆ ಸಾರ್ವಜನಿಕರ ವೀಕ್ಷಣೆಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಡಿಜಿಟಲ್ ಫಲಕದಲ್ಲಿ ಪ್ರದರ್ಶಿಸಲಾಯಿತು.
    ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು 'ಐಕಾನಿಕ್ ವೀಕ್ ಆಚರಣೆಯ' ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.


ಕೇಂದ್ರ ಸರ್ಕಾರದ ಉಕ್ಕು ಸಚಿವಾಲಯದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 'ಐಕಾನಿಕ್ ವೀಕ್ ಆಚರಣೆ' ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಂಬಂಧ ಪ್ರೌಢಶಾಲೆ ಮತ್ತು ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಬರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.

ಶಾಸಕರ ಅನುದಾನದಲ್ಲಿ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ

ಭದ್ರಾವತಿ ನಗರಸಭೆ ವಾರ್ಡ್ ನಂ.೧ರ ವ್ಯಾಪ್ತಿಯ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಗದ್ದಿಗೆ ಮಠದ ಸಮೀಪ ಚರಂಡಿ ಕಾಮಗಾರಿಗೆ ಮಂಗಳವಾರ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.
    ಭದ್ರಾವತಿ, ಜು. ೧೨:  ನಗರಸಭೆ ವಾರ್ಡ್ ನಂ.೧ರ ವ್ಯಾಪ್ತಿಯ ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ಗದ್ದಿಗೆ ಮಠದ ಸಮೀಪ ಚರಂಡಿ ಕಾಮಗಾರಿಗೆ ಮಂಗಳವಾರ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.
      ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಅನುದಾನದಲ್ಲಿ ಕಾಮಗಾರಿ ಮಂಜುರಾತಿಯಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು.
      ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ವಾರ್ಡ್ ನಂ.೧ರ ನಗರಸಭಾ ಸದಸ್ಯೆ ರೇಖಾ ಹಾಗೂ ಗ್ರಾಮಸ್ಥರಾದ ವಾಗೀಶ್, ಪ್ರಕಾಶ್, ಧನರಾಜ್, ದೇವರಾಜ್, ರಿತು ಕುಮಾರ್, ರವಿಕುಮಾರ್ ಶಾರದಾಬಾಯಿ, ವರಲಕ್ಷ್ಮಮ್ಮ ಮತ್ತು ಮಠದ ಅರ್ಚಕ ಮಂಜಯ್ಯ, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಎಪಿ ಸಂಘಟನೆಗೆ ಒತ್ತು : ಜು.೧೪ರಂದು ಕಾರ್ಯಾಲಯ ಉದ್ಘಾಟನೆ


ಭದ್ರಾವತಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಎಪಿ ಪಕ್ಷದ ಮುಖಂಡ ಹಾಗು ಚುನಾವಣಾ ಆಕಾಂಕ್ಷಿ ಮಾರುತಿ ಮೆಡಿಕಲ್ ಆನಂದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  
    ಭದ್ರಾವತಿ, ಜು. ೧೨: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ ಎಂದು ಪಕ್ಷದ ಮುಖಂಡ ಹಾಗು ಚುನಾವಣಾ ಆಕಾಂಕ್ಷಿ ಮಾರುತಿ ಮೆಡಿಕಲ್ ಆನಂದ್ ತಿಳಿಸಿದರು.
      ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಮ್ ಆದ್ಮಿ ಪಾರ್ಟಿ ವಿಭಿನ್ನವಾಗಿದ್ದು, ಭ್ರಷ್ಟಾಚಾರ ಮುಕ್ತ ಪಕ್ಷವಾಗಿದೆ. ಈ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧನಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆದರೆ ಈ ಎರಡು ಪಕ್ಷವನ್ನು ನನ್ನನ್ನು ಆರ್ಥಿಕವಾಗಿ ದುರ್ಬಳಕೆ ಮಾಡಿಕೊಳ್ಳುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಕಡೆಗಣಿಸಿವೆ ಎಂದು ಆರೋಪಿಸಿದರು.
      ಕ್ಷೇತ್ರದಲ್ಲಿ ಭ್ರಷ್ಟಾಚಾರ, ಅನೈತಿಕತೆ ಹೆಚ್ಚಾಗಿದ್ದು, ಪ್ರಾಮಾಣಿಕವಾಗಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಆಶಯ ಹೊಂದಿದ್ದೇನೆ. ಕ್ಷೇತ್ರದಲ್ಲಿ ನಾನು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಆಮ್ ಆದ್ಮಿ ಪಾರ್ಟಿ ಗುರುತಿಸಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಲಭಿಸುವ ವಿಶ್ವಾಸವಿದೆ ಎಂದರು.
      ಜು.೧೪ರಂದು ಕಾರ್ಯಾಲಯ ಉದ್ಘಾಟನೆ :
      ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಕಾರ್ಯಾಲಯ ನಗರದ ರಂಗಪ್ಪ ವೃತ್ತದ ಸಮೀಪದಲ್ಲಿರುವ ಮಾರುತಿ ಮೆಡಿಕಲ್ಸ್ ಬಿಲ್ಡಿಂಗ್‌ನಲ್ಲಿ ಆರಂಭಗೊಳ್ಳಲಿದ್ದು, ಈ ಸಂಬಂಧ ಜು.೧೪ರಂದು ಸಂಜೆ ೪ ಗಂಟೆಗೆ ಹಮ್ಮಿಕೊಳ್ಳಲಾಗಿರುವ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ದೆಹಲಿ ಶಾಸಕ ದಿಲೀಪ್ ಪಾಂಡೆ, ಪಂಜಾಬ್ ಶಾಸಕ ಪುನೀತ್ ಸಿಂಗ್, ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಾಜ್ಯ ಉಪಾಧ್ಯಕ್ಷರಾದ ಭಾಸ್ಕರ್‌ರಾವ್, ವಿಜಯಶರ್ಮ, ರಾಜ್ಯ ವಕ್ತಾರ ಮಥಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜೀವ ಸಹನಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ಶಿವಮೊಗ್ಗ-ಚಿಕ್ಕಮಗಳೂರು-ಹಾಸನ ಜಿಲ್ಲಾ ವಲಯ ಉಸ್ತುವಾರಿ ದಿವಾಕರ, ಜಿಲ್ಲಾ ವಲಯ ಉಸ್ತುವಾರಿ ಗೋಪಾಲ, ಜಿಲ್ಲಾ ಮುಖಂಡ ಎಚ್. ರವಿಕುಮಾರ್, ತಾಲೂಕು ಅಧ್ಯಕ್ಷ ಬಿ.ಕೆ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
       ಪಕ್ಷದ ತಾಲೂಕು ಬಿ.ಕೆ ರಮೇಶ್, ಪ್ರಮುಖರಾದ ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಎ. ಮಸ್ತಾನ್, ಅಬ್ದುಲ್ ಖದೀರ್, ಜಾವಿದ್, ರೇಷ್ಮಬಾನು, ನಾಗಮಣಿ, ಜ್ಯೋತಿ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.