Thursday, July 14, 2022
ಹೊಸಸೇತುವೆ ಸಂಪೂರ್ಣ ಮುಳುಗಡೆ : ಸಂಚಾರ ಸ್ಥಗಿತ
ನಿರಂತರ ಮಳೆ ಹಿನ್ನಲೆಯಲ್ಲಿ ಶಾಸಕರಿಂದ ತುರ್ತು ಸಭೆ : ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ
ಭಷ್ಟಾಚಾರ ನಿರ್ಮೂಲನೆಗೆ ಪೊರಕೆ ಹಿಡಿದು ಸ್ವಚ್ಛತೆಗೆ ಮುಂದಾಗಿರುವವರ ಕೈ ಬಲಪಡಿಸಿ : ವಿಜಯಶರ್ಮ
ಧಾನ್ಯಕ್ಕೆ ಶೇ.5 ಜಿಎಸ್ ಟಿ ವಿರೋಧಿಸಿ 2 ದಿನ ಹೋರಾಟ
ಭದ್ರಾವತಿ, ಜು. ೧೪: ಕೇಂದ್ರ ಸರ್ಕಾರ ಧಾನ್ಯಕ್ಕೆ ಶೇ.೫ರಷ್ಟು ಜಿಎಸ್‌ಟಿ ವಿಧಿಸಿರುವುದು ಸರಿಯಲ್ಲ. ತಕ್ಷಣ ಹಿಂಪಡೆದುಕೊಳ್ಳುವಂತೆ ಆಗ್ರಹಿಸಿ ದೇಶಾದ್ಯಂತ ಜು.೧೫ ಮತ್ತು ೧೬ ಎರಡು ದಿನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈಸ್‌ಮಿಲ್ ಮಾಲೀಕರ ಸಂಘ ಹಾಗು ದವಸ ಧಾನ್ಯ, ಅಕ್ಕಿ ವರ್ತಕರ ಸಂಘದ ಪ್ರಮುಖರು ತಿಳಿಸಿದರು.
ಗುರುವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶೇ.೫ರಷ್ಟು ಜಿಎಸ್‌ಟಿ ಪರಿಣಾಮ ರೈತರು, ವರ್ತಕರು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಈ ಹಿಂದೆ ಧಾನ್ಯಕ್ಕೆ ಯಾವುದೇ ಜಿಎಸ್‌ಟಿ ವಿಧಿಸದ ಕಾರಣ ಅಕ್ಕಿ, ಬೇಳೆಕಾಳು ಸೇರಿದಂತೆ ಜನಸಾಮಾನ್ಯರಿಗೆ ಅತಿ ಅಗತ್ಯವಿರುವ ಧ್ಯಾನ ಕಡಿಮೆ ಬೆಲೆಯಲ್ಲಿ ತಲುಪಿಸಲು ಸಾಧ್ಯವಾಗುತ್ತಿತ್ತು. ಇದೀಗ ಜಿಎಸ್‌ಟಿ ವಿಧಿಸಿರುವುದರಿಂದ ಧಾನ್ಯ ಮಾರಾಟ ಉದ್ಯಮಗಳು, ಧಾನ್ಯ ಉತ್ಪಾದಿಸುವ ರೈತರು ಹಾಗು ಧಾನ್ಯ ಕೊಂಡುಕೊಳ್ಳುವ ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದರು.
ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ
ಭದ್ರಾವತಿ, ಜು.14: ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ 41ನೇ ಬಾರಿಗೆ ಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಜಲಾಶಯದಿಂದ ನೀರು ನದಿಗೆ ಬಿಡಲಾಯಿತು.