ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಗಳವಾರ ಭದ್ರಾವತಿ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು.
ಭದ್ರಾವತಿ, ಆ. ೧೬: ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಗಳವಾರ ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು.
ಸಂಸದರ ಹೆಸರಿನಲ್ಲಿ ಕುಂಕುಂಮಾರ್ಚನೆ ನೆರವೇರಿಸಿ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಶಿವಮೊಗ್ಗದಲ್ಲಿ ಸೋಮವಾರ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಗರಸಭೆ ವ್ಯಾಪ್ತಿ ಹಾಗು ಕೆಲ ಗ್ರಾಮಾಂತರ ಪ್ರದೇಶದ ವ್ಯಾಪ್ತಿ ೧೪೪ ಕಲಂರನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಸಂಸದರ ಹುಟ್ಟುಹಬ್ಬವನ್ನು ಈ ಬಾರಿ ಸರಳವಾಗಿ ಆಚರಿಸಲಾಯಿತು.
ಪಕ್ಷದ ಪ್ರಮುಖರಾದ ಜಿ. ಆನಂದ್‌ಕುಮಾರ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ನಾಗರಾಜ್, ನರೇಂದ್ರ, ಮುರುಗನ್, ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.