Friday, August 26, 2022

ಧಾರ್ಮಿಕ ಆಚರಣೆಗಳ ಮೂಲಕ ಯಶಸ್ಸು ಸಾಧಿಸಲು ಪ್ರಾರ್ಥನೆ ಒಳ್ಳೆಯ ಬೆಳವಣಿಗೆ : ಆರ್.ಎಸ್ ಶೋಭಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ಜರುಗಿತು. ಧಾರ್ಮಿಕ ಸಭೆಯನ್ನು ನ್ಯಾಯವಾದಿ, ನೋಟರಿ ಆರ್.ಎಸ್ ಶೋಭಾ ಉದ್ಘಾಟಿಸಿ ಮಾತನಾಡಿದರು.  
    ಭದ್ರಾವತಿ, ಆ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಹಳೇನಗರದ ಭೂತನಗುಡಿ ಶ್ರೀ ಶನೈಶ್ವರ, ಶ್ರೀ ಗಣಪತಿ, ಶ್ರೀ ಕೆಂಚಮ್ಮ ಮತ್ತು ಶ್ರೀ ಭೂತಪ್ಪ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ಜರುಗಿತು.
    ಈ ಸಂಬಂಧ ಆಯೋಜಿಸಲಾಗಿದ್ದ ಧಾರ್ಮಿಕ ಸಭೆಯನ್ನು ನ್ಯಾಯವಾದಿ, ನೋಟರಿ ಆರ್.ಎಸ್ ಶೋಭಾ ಉದ್ಘಾಟಿಸಿ ಮಾತನಾಡಿ, ಶ್ರಾವಣಮಾಸದಲ್ಲಿ ಮಹಿಳೆಯರಿಗೆ ಹಬ್ಬದ ಸಂಭ್ರಮ. ಮಹಿಳೆಯರು ಒಟ್ಟಾಗಿ ವರಮಹಾಲಕ್ಷ್ಮೀ ಆರಾಧಿಸುವ ಮೂಲಕ ಒಕ್ಕೂಟದ ಕಾರ್ಯ ಚಟುವಟಿಕೆಗಳಲ್ಲಿ ಯಶಸ್ಸು ಸಾಧಿಸಲು ಪ್ರಾರ್ಥಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇಂತಹ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುವ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶಯಗಳಿಗೆ ಪೂರಕವಾಗಿ ಒಕ್ಕೂಟವನ್ನು ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ವ್ಯಕ್ತಪಡಿಸಿದರು.
    ಯೋಜನಾಧಿಕಾರಿ ಪ್ರಕಾಶ್‌ನಾಯ್ಕ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರತಿಯೊಂದು ಕಾರ್ಯದ ಆರಂಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುತ್ತದೆ. ಆ ಮೂಲಕ ಎಲ್ಲರೂ ಧಾರ್ಮಿಕ ಭಾವನೆಗಳನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುತ್ತದೆ. ಧಾರ್ಮಿಕ ಮಾರ್ಗದಲ್ಲಿ ಸಾಗಿದಾಗ ಯಶಸ್ಸು ಖಂಡಿತ ಲಭಿಸುತ್ತದೆ ಎಂದರು.  
     ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅರ್. ಕರುಣಾಮೂರ್ತಿ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ನಗರಸಭಾ ಸದಸ್ಯೆ ಅನುಸುಧಾ ಮೋಹನ್, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಜಣ್ಣ ಸೇರಿದಂತೆ ಇನ್ನಿತರರು ಇನ್ನಿತರರು ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು. ನೇತ್ರಾವತಿ ಸ್ವಾಗತಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಭದ್ರಾವತಿ ದೊಡ್ಡಗೊಪ್ಪೇನಹಳ್ಳಿ (ಡಿಜಿ ಹಳ್ಳಿ) ವೈಷ್ಣವಿ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ಗ್ರಾಮದ ಮುಖಂಡರಾದ ನಂಜುಂಡಪ್ಪ ಉದ್ಘಾಟಿಸಿದರು.
    ಭದ್ರಾವತಿ, ಆ. ೨೬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ದೊಡ್ಡಗೊಪ್ಪೇನಹಳ್ಳಿ (ಡಿಜಿ ಹಳ್ಳಿ) ವೈಷ್ಣವಿ ಜ್ಞಾನ ವಿಕಾಸ ಕೇಂದ್ರದಲ್ಲಿ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮವನ್ನು ಗ್ರಾಮದ ಮುಖಂಡರಾದ ನಂಜುಂಡಪ್ಪ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಹಳೇನಗರದ ಉದ್ಗೀಥ ಆಯುರ್ವೇದ ಮತ್ತು ಪಂಚಕರ್ಮ ಚಿಕಿತ್ಸಾಲಯದ ವೈದ್ಯ ಡಾ. ಸುದರ್ಶನ್ ಆಚಾರ್, ಸಿರಿಧಾನ್ಯಗಳ ಪರಿಚಯ ತಿಳಿಸಿ, ಸಿರಿಧಾನ್ಯಗಳಿಂದ ಮಾಡಬಹುದಾದ ವಿವಿಧ ಖಾದ್ಯಗಳು, ಆರೋಗ್ಯ ಕಾಪಾಡಿಕೊಳ್ಳಲು ಸಿರಿಧಾನ್ಯ ಬಳಕೆಯ ವಿಧಾನಗಳು ಹಾಗು ಸಿರಿಧಾನ್ಯ ಬಳಕೆಯಿಂದ ಆರೋಗ್ಯದಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು.
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಸಿರಿಧಾನ್ಯ ಮೇಲ್ವಿಚಾರಕ ನಾಗರಾಜ್, ಸಿರಿಧಾನ್ಯ, ಪೌಷ್ಠಿಕ ಆಹಾರದ ಅಗತ್ಯತೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಮಿಲೆಟ್ ಕುರಿತು ಮಾಹಿತಿ ನೀಡಿದರು.
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸ್ವಸಹಾಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಶೀಲಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.