ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೆ.೫ರಂದು ಬೆಳಿಗ್ಗೆ ೧೦ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.
ತಾಲೂಕಿನ ಎಲ್ಲಾ ಶಿಕ್ಷಕರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೋರಿದ್ದಾರೆ. ಕೋರಲಾಗಿದೆ.