ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೋಮವಾರ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ ಚಾಲನೆ ನೀಡಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಿಕ್ಷಕರಿಗೆ ಶುಭ ಕೋರಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಹಾಗು ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ತಹಸೀಲ್ದಾರ್ ಆರ್.ಪ್ರದೀಪ್, ನಗರಸಭೆ ಅಧ್ಯಕ್ಷ ಚನ್ನಪ್ಪ, ಪೌರಾಯುಕ್ತ ಮನುಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆ ಸದಸ್ಯರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.