Thursday, September 15, 2022

ವಿವಿಧೆಡೆ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
    ಭದ್ರಾವತಿ, ಸೆ. ೧೫ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧೆಡೆ ಗುರುವಾರ ಭಾರತರತ್ನ, ಕ್ಷೇತ್ರ ಅನ್ನದಾತ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮದಿನ ಆಚರಿಸಲಾಯಿತು.
    ವಿಐಎಸ್‌ಎಲ್ ಕಾರ್ಖಾನೆ :
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ  ಅಚರಿಸಲಾಯಿತು.
    ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಸೇರಿದಂತೆ ಇನ್ನಿತರರು ಕಾರ್ಖಾನೆ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮುಖ್ಯ ಮಹಾಪ್ರಬಂಧಕ(ಸ್ಥಾವರ) ಟಿ. ರವಿಚಂದ್ರನ್, ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧ್ಯಕ್ಷರು, ಅಧಿಕಾರಿಗಳ ಸಂಘದ ಅಧ್ಯಕ್ಷ ಸುಗಾಲಿ ಲೋಕನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಭದ್ರತಾ ಪಡೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭದ್ರಾವತಿ ರೈಲ್ವೆ ನಿಲ್ದಾಣದ ಬಳಿ ಜಾತ್ಯತೀತ ಜನತಾದಳ ವತಿಯಿಂದ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
    ರೈಲ್ವೆ ನಿಲ್ದಾಣದ ಬಳಿ :
    ಜಾತ್ಯತೀತ ಜನತಾದಳ ವತಿಯಿಂದ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಗರದ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಇರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜನ್ಮದಿನ ಆಚರಿಸಲಾಯಿತು.
    ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಖಂಡರಾದ ಡಿ.ಟಿ ಶ್ರೀಧರ್, ಎನ್. ರಾಮಕೃಷ್ಣ, ಭಾಗ್ಯಮ್ಮ, ನಗರಸಭಾ ಸದಸ್ಯರಾದ ವಿಜಯ, ರೂಪಾವತಿ ಗುಣಶೇಖರ್, ರೇಖಾ ಪ್ರಕಾಶ್, ನಾಗರತ್ನ ಅನಿಲ್‌ಕುಮಾರ್, ಬಸವರಾಜ ಬಿ. ಆನೇಕೊಪ್ಪ, ಉದಯಕುಮಾರ್, ಮಂಜುಳ ಸುಬ್ಬಣ್ಣ, ಜಯಶೀಲ ಸುರೇಶ್, ಪಲ್ಲವಿ ದಿಲೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
      ವಿಶ್ವೇಶ್ವರಾಯ ವಿದ್ಯಾಸಂಸ್ಥೆ :
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
    ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು.  ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ  ಅಚರಿಸಲಾಯಿತು.
     ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘ:
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ  ಅಚರಿಸಲಾಯಿತು.
ಕಾರ್ಖಾನೆ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.

ಚಿತ್ರ: ಡಿ೧೫-ಬಿಡಿವಿಟಿ೪

ಚಿತ್ರ: ಡಿ೧೫-ಬಿಡಿವಿಟಿ೪(ಎ)

ಚಿತ್ರ: ಡಿ೧೫-ಬಿಡಿವಿಟಿ೪(ಬಿ)

ಚಿತ್ರ: ಡಿ೧೫-ಬಿಡಿವಿಟಿ೪(ಸಿ)

Ananthakumar

Journalist,

E.B-17, JPS Colony,

Near Sri Mahaganapathi Temple,

Papertown(P)

Bhadravathi-577302(Tq)

Shimoga (District)

Mob: 9738801478

: 9482007466

anantha.2009@hotmail.com

--
ಅನಂತಕುಮಾರ್, ವರದಿಗಾರರು, ಕನ್ನಡಪ್ರಭ, 
ಎನ್.ಡಿ.ಕೆ/31ಎ, ಶ್ರೀ ಸತ್ಯಸಾಯಿ ಬಾಬಾ ಸಮಗ್ರ ಶಿಕ್ಷಣ ಸಂಸ್ಥೆ ಹತ್ತಿರ,
ನ್ಯೂಟೌನ್, ಭದ್ರಾವತಿ: 577301(ತಾ), ಶಿವಮೊಗ್ಗ (ಜಿಲ್ಲೆ)

Ananthakumara, Reporter, Kannadaprabha, 
NDK/31A, Near, Sri Satyasayi Baba school, 
Newtown, Bhadravathi:-577301(Tq)
Shimoga(Dis)
Mob: 9738801478
       : 9482007466

ಸೆ.೧೭ರಂದು ಉಚಿತ ನೇತ್ರ ತಪಾಸಣಾ ಶಿಬಿರ, ಶಿಕ್ಷಕರ, ಅಭಿಯಂತರರ ದಿನಾಚರಣೆ

    ಭದ್ರಾವತಿ, ಸೆ. ೧೫ : ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆ, ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ವತಿಯಿಂದ ಸೆ.೧೭ರಂದು ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
    ಶಿಬಿರ ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨.೩೦ರ ವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಎ.ಎನ್ ಕಾರ್ತಿಕ್ ಮೊ: ೯೫೩೮೩೫೦೩೪೮ ಅಥವಾ ನಾಗರಾಜ್ ಎಂ. ಶೇಟ್ ಮೊ: ೯೪೪೮೨೩೮೭೪೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
    ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ :
    ನ್ಯೂಟೌನ್ ಲಯನ್ಸ್‌ಕ್ಲಬ್ ಭವನದಲ್ಲಿ ಸಂಜೆ ೭.೩೦ಕ್ಕೆ ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಲಯನ್ಸ್ ೩೧೭ಸಿ ಪ್ರಾಂತ್ಯ-೨, ವಲಯ-೨ರ ಅಧ್ಯಕ್ಷ ಕೆ.ವಿ ಚಂದ್ರಶೇಖರ, ಮಾಜಿ ಗೌರ‍್ನರ್ ಬಿ. ದಿವಾಕರ ಶೆಟ್ಟಿ ಉಪಸ್ಥಿತರಿರುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆ ವಹಿಸಲಿದ್ದಾರೆ.
    ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಬಿ.ಎಂ ನಾಸಿರ್‌ಖಾನ್, ನೆಹರು ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್. ಶಶಿಕಲಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಆರ್ ದಯಾನಂದ ಮತ್ತು ಹಾಲಪ್ಪ ವೃತ್ತದ ನಿವಾಸಿ, ಅಭಿಯಂತರ ಬಾಬು ಶೆಟ್ಟಿ ಅವರಿಗೆ ಸನ್ಮಾನ  ಹಮ್ಮಿಕೊಳ್ಳಲಾಗಿದೆ. 
--

ಡೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆಗಾಗಿ ಪಾದಯಾತ್ರೆ

ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಕ್ಷಣ ಸರ್ಕಾರಿ ಪ್ರೌಢಶಾಲೆ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಗುರುವಾರ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಿಂದ ತಾಲೂಕು ಕಛೇರಿವರೆಗೂ ಪಾದಯಾತ್ರೆ ನಡೆಸಲಾಯಿತು.
    ಭದ್ರಾವತಿ, ಸೆ. ೧೫ : ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಕ್ಷಣ ಸರ್ಕಾರಿ ಪ್ರೌಢಶಾಲೆ ಮಂಜೂರಾತಿ ಮಾಡಬೇಕೆಂದು ಪ್ರೌಢಶಾಲೆ ಹೋರಾಟ ಸಮಿತಿ ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧು ಸಿ. ಲೇಪಾಕ್ಷಿ ಆಗ್ರಹಿಸಿದ್ದಾರೆ.
    ಅವರು ಗುರುವಾರ ಹೋರಾಟ ಸಮಿತಿ ವತಿಯಿಂದ ತರೀಕೆರೆ ರಸ್ತೆಯ ಮಾಧವಚಾರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ  ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
    ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೧ ರಿಂದ ೮ನೇ ತರಗತಿವರೆಗೆ ಸರ್ಕಾರಿ ಶಾಲೆಗಳಿದ್ದು, ಒಟ್ಟು ೯ ಸರ್ಕಾರಿ ಶಾಲೆಗಳ ಪೈಕಿ ೪ ಹಿರಿಯ ಪ್ರಾಥಮಿಕ ಶಾಲೆಗಳಿವೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಿಯೂ ಸಹ ಸರ್ಕಾರಿ ಪ್ರೌಢಶಾಲೆ ಇರುವುದಿಲ್ಲ. ೯ ಮತ್ತು ೧೦ನೇ ತರಗತಿ ಹೊಂದಿರುವ ಪ್ರೌಢಶಾಲೆ ೨೦೨೨-೨೩ನೇ ಶೈಕ್ಷಣಿಕ ಸಾಲಿನಿಂದ ಆರಂಭಿಸಲು ಈಗಾಗಲೇ ಶಿಕ್ಷಣ ಇಲಾಖೆ ಮೂಲಕ ಶಾಸಕರ ನೇತೃತ್ವದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಈ ಭಾಗದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗು ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಮಕ್ಕಳು ಪ್ರೌಢಶಾಲೆಗಾಗಿ ೭-೮ ಕಿ.ಮೀ ದೂರ ಸಂಚರಿಸಬೇಕಾಗಿದೆ. ಅದರಲ್ಲೂ ಹೆಚ್ಚಿನ ಬಸ್ ಸೌಲಭ್ಯವಿಲ್ಲದ ಕಾರಣಕ್ಕಾಗಿ ಮಕ್ಕಳು ಪ್ರತಿದಿನ ಬಸ್‌ನಲ್ಲಿ ಜೋತುಬಿದ್ದು ಸಂಚರಿಸುವಂತಾಗಿದೆ. ಈ ಎಲ್ಲಾ ಕಾರಣಗಳ ಹಿನ್ನಲೆಯಲ್ಲಿ ತಕ್ಷಣ ಸರ್ಕಾರಿ ಪ್ರೌಢಶಾಲೆ ಮಂಜೂರಾತಿ ಮಾಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಪಾದಯಾತ್ರೆ ಹೋರಾಟ ಬೆಂಗಳೂರಿನವರೆಗೂ ನಡೆಯಲಿದೆ ಎಂದು ಎಚ್ಚರಿಸಿದರು.

    ಪಾದಯಾತ್ರೆಯಲ್ಲಿ ಪ್ರೌಢಶಾಲೆ ನೀಡಿ ಬಾಲಾಪರಾಧಿಗಳಾಗುವುದನ್ನು ತಪ್ಪಿಸಿ, ಪ್ರೌಢಶಾಲೆ ನೀಡಿ ಬಾಲ್ಯ ವಿವಾಹ ತಪ್ಪಿಸಿ ಇತ್ಯಾದಿಗಳ ಫಲಕಗಳನ್ನು ಹಿಡಿದು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಸಾಗಿದರು.
    ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಸಿಲುಮನೆ, ಸಿಕಂದರ್‌ಕ್ಯಾಂಪ್, ಬಾಳೆಕಟ್ಟೆ, ದೊಡ್ಡೇರಿ, ಎಮ್ಮೆದೊಡ್ಡಿ, ನೆಟ್‌ಕಲ್ಲುಹಟ್ಟಿ, ಗಂಗೂರು, ಬೆಳ್ಳಿಗೆರೆ, ಸಾಬರಹಟ್ಟಿ, ಬೈರು ಕ್ಯಾಂಪ್ ಮತ್ತು ಗುಂಡು ಕ್ಯಾಂಪ್ ಗ್ರಾಮಸ್ಥರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮಕ್ಕಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    ಪಾದಯಾತ್ರೆ ಮಹಾತ್ಮಗಾಂಧಿ ವೃತ್ತದಿಂದ ಮಾಧವಚಾರ್ ವೃತ್ತ, ಸಿ.ಎನ್ ರಸ್ತೆ ಮೂಲಕ ರಂಗಪ್ಪ ವೃತ್ತ ನಂತರ ತಾಲೂಕು ಕಛೇರಿ ತಲುಪಿಸಿತು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಐಎಸ್‌ಎಲ್ ನಿವೃತ್ತ ಕಾರ್ಮಿಕರಿಗೆ ಖಾಲಿ ಉಳಿದಿರುವ ೫೦೦ ವಸತಿ ಗೃಹಗಳು : ಬಿ.ವೈ ರಾಘವೇಂದ್ರ

ಭದ್ರಾವತಿಯಲ್ಲಿ ಗುರುವಾರ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮ ದಿನಾಚರಣೆ ಹಾಗು ಸರ್ವ ಸದಸ್ಯರ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಸೆ. ೧೫: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಲಾಗುತ್ತಿದ್ದು, ಖಾಲಿ ಉಳಿದಿರುವ ಸುಮಾರು ೫೦೦ ಕಾರ್ಖಾನೆಯ ವಸತಿ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.
    ಅವರು ಗುರುವಾರ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮ ದಿನಾಚರಣೆ ಹಾಗು ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಈಗಾಗಲೇ ನಿವೃತ್ತ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಬಗೆಹರಿಸಿಕೊಡಲಾಗಿದೆ. ಮೆಡಿಕ್ಲೈಮ್ ಸೌಲಭ್ಯದಿಂದ ವಂಚಿತರಾದವರಿಗೆ ಪುನಃ ಮೆಡಿಕ್ಲೈಮ್ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ. ಖಾಲಿ ಉಳಿದಿರುವ ಸುಮಾರು ೫೦೦ ಕಾರ್ಖಾನೆಯ ವಸತಿ ಗೃಹಗಳನ್ನು ಲೀಸ್ ಆಧಾರದಲ್ಲಿ ವಸತಿ ಗೃಹಗಳಿಂದ ವಂಚಿತರಾಗಿರುವ ನಿವೃತ್ತ ಕಾರ್ಮಿಕರಿಗೆ ನೀಡುವ ನಿಟ್ಟಿನಲ್ಲೂ ಸಹ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ನಿವೃತ್ತ ಕಾರ್ಮಿಕರು ಯಾವುದೇ ರೀತಿ ಆತಂಕಕ್ಕೆ ಒಳಗಾಗಬಾರದು ಎಂದರು.

ಭದ್ರಾವತಿಯಲ್ಲಿ ಗುರುವಾರ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮ ದಿನಾಚರಣೆ ಹಾಗು ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ೧ ಲಕ್ಷ ರು. ದೇಣಿಗೆ ನೀಡಿದರು.

    ಸರ್.ಎಂ ವಿಶ್ವೇಶ್ವರಾಯ ಅವರು ಜಿಲ್ಲೆಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಶರಾವತಿ ವಿದ್ಯುತ್ ಯೋಜನೆ ಮೂಲಕ ರಾಜ್ಯದ ಶೇ.೫೦ರಷ್ಟು ಭಾಗಕ್ಕೆ ವಿದ್ಯುತ್ ಕಲ್ಪಿಸಿಕೊಡಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಸ್ಥಾಪಿಸಿ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿಕೊಟ್ಟ ಮಹಾನ್ ವ್ಯಕ್ತಿ, ಆಧುನಿಕ ಕಾಲದ ಶಿಲ್ಪಿ ಸರ್.ಎಂ ವಿಶ್ವೇಶ್ವರಾಯನವರಾಗಿದ್ದಾರೆ. ಇವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಜನ್ಮದಿನ ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದಲ್ಲಿ ಸರ್.ಎಂ ವಿಶ್ವೇಶ್ವರಾಯನವರ ಕೊಡುಗೆ ಅಪಾರವಾಗಿದೆ. ಅವರನ್ನು ಯಾರು ಸಹ ಎಂದಿಗೂ ಮರೆಯಲು ಸಾಧ್ಯವಿಲ್ಲ. ನಿವೃತ್ತ ಕಾರ್ಮಿಕರು ಎಂದಿಗೂ ಆತಂಕಪಡುವ ಅಗತ್ಯವಿಲ್ಲ. ಕಾರ್ಖಾನೆಯ ವಸತಿ ಗೃಹಗಳಿಂದ ಖಾಲಿ ಮಾಡಿಸಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.

ಭದ್ರಾವತಿಯಲ್ಲಿ ಗುರುವಾರ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮ ದಿನಾಚರಣೆ ಹಾಗು ಸರ್ವ ಸದಸ್ಯರ ಸಭೆಯಲ್ಲಿ ಹಿರಿಯ ನಿವೃತ್ತ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರಕ್ಕೆ ೧ ಲಕ್ಷ ರು. ದೇಣಿಗೆ ನೀಡಿದರು. ಹಿರಿಯ ನಿವೃತ್ತ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯತು. ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪಾಂಶುಪಾಲರಾದ ಡಾ. ಹರಿಣಾಕ್ಷಿ ಉಪನ್ಯಾಸ ನಡೆಸಿಕೊಟ್ಟರು.
    ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಾಂದ್ವಾನಿ, ಹಿರಿಯ ಕಾರ್ಮಿಕ ಮುಖಂಡ ಎಸ್.ಎನ್ ಬಾಲಕೃಷ್ಣ, ಪದಾಧಿಕಾರಿಗಳಾದ ಎಲ್. ಬಸವರಾಜಪ್ಪ, ಶಂಕರ್, ಹಾ. ರಾಮಪ್ಪ, ರವೀಂದ್ರರೆಡ್ಡಿ, ಹನುಮಂತರಾವ್, ಎಸ್.ಎಸ್ ಭೈರಪ್ಪ, ನರಸಿಂಹಚಾರ್, ಅಡವೀಶಯ್ಯ, ಲೆಕ್ಕ ಪರಿಶೋಧಕ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.