ಯೋಗಾಸನ ಪ್ರದರ್ಶನದಲ್ಲಿ ತೊಡಗಿರುವ ಭದ್ರಾವತಿ ವಿವೇಕಾನಂದ ಯೋಗ ಕೇಂದ್ರದ ಅಧ್ಯಕ್ಷ ಡಿ. ನಾಗರಾಜ್
ಭದ್ರಾವತಿ, ನ. ೧೨ : ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಇನ್‌ಸ್ಟಿಟ್ಯೂಟ್, ಜಮುನಾ ರವಿ ಫೌಂಡೇಷನ್ ವತಿಯಿಂದ ಬೆಂಗಳೂರು ಮಹಾನಗರ ಪಾಲಿಕೆಯ ಡಾ. ರಾಜ್‌ಕುಮಾರ್ ಗ್ಲಾಸ್ ಹೌಸ್‌ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಯೋಗಾಸನ ಕಪ್ ಮೊದಲ ಮುಕ್ತ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ನಗರದ ವಿವೇಕಾನಂದ ಯೋಗ ಕೇಂದ್ರದ ಅಧ್ಯಕ್ಷ ಡಿ. ನಾಗರಾಜ್‌ರವರು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
೫೫ ವರ್ಷ ವಯೋಮಾನ ಮೇಲ್ಪಟ್ಟವರ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಕೆ. ಪ್ರಭಾಕರ್ ಹಾಗು ಕಾರ್ಯದರ್ಶಿ ಡಿ. ಪುಟ್ಟೇಗೌಡ ಮತ್ತು ಕ್ರೀಡಾಭಿಮಾನಿಗಳು ನಾಗರಾಜ್‌ರವರನ್ನು ಅಭಿನಂದಿಸಿದ್ದಾರೆ.
ನಾಗರಾಜ್‌ರವರು ಕಳೆದ ಸುಮಾರು ೪ ದಶಕಗಳಿಗೂ ಹೆಚ್ಚು ಕಾಲದಿಂದ ಯೋಗಾಸನದಲ್ಲಿ ತೊಡಗಿಸಿಕೊಂಡಿದ್ದು, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರ ಸಹ ಕ್ರೀಡಾ ಪ್ರಶಸ್ತಿ ನೀಡಿ ಗೌರವಿಸಿದೆ.