Sunday, December 31, 2023

ಜ.೧ರಂದು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಹುಟ್ಟುಹಬ್ಬ

ಶಾರದ ಅಪ್ಪಾಜಿ
    ಭದ್ರಾವತಿ; ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಧರ್ಮಪತ್ನಿ, ಜಾತ್ಯತೀತ ಜನತಾದಳ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿಯವರ ಹುಟ್ಟುಹಬ್ಬ ಜ.೧ರ ಸೋಮವಾರ ಆಚರಿಸಲಾಗುತ್ತಿದೆ.
    ಕಳೆದ ಸುಮಾರು ೧ ವಾರದಿಂದ ಹುಟ್ಟುಹಬ್ಬ ಆಚರಣೆಗಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ಮುಂದಾಗಿದ್ದಾರೆ. ನಗರದ ವಿವಿಧೆಡೆ ಹುಟ್ಟುಹಬ್ಬ ಅಂಗವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೆ ವಿವಿಧೆಡೆ ಹಲವು ಕಾರ್ಯಕ್ರಮಗಳ ಆಯೋಜನೆಗೆ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
    ಶಾರದ ಅಪ್ಪಾಜಿಯವರು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮ ಬಾರಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದು, ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಸೋಲು ಕಂಡರೂ ಸಹ ಇಂದಿಗೂ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಪಕ್ಷ ಸಂಘಟನೆ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದಾರೆ.
    ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ:
    ಶಾರದ ಅಪ್ಪಾಜಿಯವರ ಹುಟ್ಟುಹಬ್ಬದ ಅಂಗವಾಗಿ ಜ.೧ರ ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ತಾಲೂಕು ಘಟಕದ ವತಿಯಿಂದ ಒಳರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ ನಡೆಯಲಿದೆ.
ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ಎಸ್ ಮಧುಸೂಧನ್ ಕೋರಿದ್ದಾರೆ.

ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ರಕ್ತದಾನ ಶಿಬಿರ

ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ಭಾನುವಾರ ರಕ್ತದಾನ ಶಿಬಿರ ನಡೆಯಿತು.
    ಭದ್ರಾವತಿ: ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ರಕ್ತನಿಧಿ ಸಹಯೋಗದೊಂದಿಗೆ ಭಾನುವಾರ ರಕ್ತದಾನ ಶಿಬಿರ ನಡೆಯಿತು.
ಪೊಲೀಸ್ ಉಪಾಧೀಕ್ಷಕ (ಡಿ.ವೈ.ಎಸ್.ಪಿ) ನಾಗರಾಜ್ ಸೇರಿದಂತೆ ಪೇಪರ್‌ಟೌನ್ ಠಾಣೆ ಪೊಲೀಸರು ಹಾಗು ಸಾರ್ವಜನಿಕರು ರಕ್ತದಾನ ಮಾಡಿದರು.
    ಠಾಣಾ ನಿರೀಕ್ಷಕಿ ನಾಗಮ್ಮ,, ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳಾದ ಡಾ. ಸಯ್ಯದ್ ಮೀರ್ ಮಹಮದ್, ಡಾ. ಹರ್ಷವರ್ಧನ್, ಡಾ. ಸುಚಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಚಾರಿ ಪೊಲೀಸ್ ಇಲಾಖೆ ಠಾಣೆ ಸಿಬ್ಬಂದಿ ಹಾಲೇಶಪ್ಪನವರು ಹಲವಾರು ವರ್ಷಗಳಿಂದ ರಕ್ತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವತಃ ಸುಮಾರು ೪೦ ಬಾರಿ ರಕ್ತದಾನ ಮಾಡಿದ್ದು, ಉಪವಿಭಾಗದ ವ್ಯಾಪ್ತಿಯ ಠಾಣೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ ‘ಆಯುಷ್’ ಕಾರ್ಯಾರಂಭಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಭಾನುವಾರ ಕಾರ್ಯಾರಂಭಗೊಂಡಿತು.
    ಭದ್ರಾವತಿ: ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಕಾರ್ಯಾರಂಭಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಭಾನುವಾರ ಚಾಲನೆ ನೀಡಿದರು.
    ಆಯುಷ್ ವೈದ್ಯರಾದ ಡಾ. ಎಂ. ಅರುಣ ಕುಮಾರಿ, ಡಾ. ದಿವ್ಯ, ಡಾ. ಟಿ.ಸಿ ವಿನಯ್, ಪ್ರಶಾಂತ್, ಡಾ. ಸಿ. ವಿಕ್ರಮ್, ಡಾ. ಎಚ್.ಎಸ್ ಸತೀಶ್, ಡಾ. ಚಂದ್ರಶೇಖರ್ ವೈ ನಾಗನೂರ್ ಒಟ್ಟು ೭ ಜನರ ತಂಡ ಚಿಕಿತ್ಸಾ ಕೇಂದ್ರ ಆರಂಭಿಸಿದ್ದಾರೆ.
    ಗಾಂಧಿನಗರದ ೨ನೇ ಅಡ್ಡ ರಸ್ತೆಯಲ್ಲಿರುವ ಭದ್ರಾ ನರ್ಸಿಂಗ್ ಹೋಂ ಪಕ್ಕದಲ್ಲಿ ಸುಸಜ್ಜಿತ ಕಟ್ಟಡದಲ್ಲಿ ಆಯುಷಿ ತಜ್ಞ ಚಿಕಿತ್ಸಾ ಕೇಂದ್ರ ತೆರೆಯಲಾಗಿದ್ದು, ವಿಚಾರಣೆ ಹಾಗು ಔಷಧಿ ವಿತರಣೆ ಕೊಠಡಿ, ವೈದ್ಯರ ಕೊಠಡಿ, ತಪಾಸಣಾ ಹಾಗು ಚಿಕಿತ್ಸಾ ಕೊಠಡಿಗಳನ್ನು ಒಳಗೊಂಡಿದೆ.
    ಕಾರ್ಯ ಚಿಕಿತ್ಸಾ(ಜನರಲ್ ಮೆಡಿಸಿನ್)ವಿಭಾಗ, ಮೂಳೆ ಮತ್ತು ಸಂಧಿರೋಗ ಚಿಕಿತ್ಸಾ ವಿಭಾಗ, ನರ ಮತ್ತು ಮನೋರೋಗ ಚಿಕಿತ್ಸಾ ವಿಭಾಗ, ಚರ್ಮ ಮತ್ತು ಸೌಂದರ್ಯ ಚಿಕಿತ್ಸಾ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ ಮತ್ತು ಕಣ್ಣು, ಕಿವಿ, ಮೂಗು, ಗಂಟಲು ಚಿಕಿತ್ಸಾ ವಿಭಾಗ ಕಾರ್ಯ ನಿರ್ವಹಿಸಲಿವೆ.
    ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಮುರುಗೇಶ್ ಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರಸಭಾ ಸದಸ್ಯ ಬಿ.ಕೆ ಮೋಹನ್, ಉದ್ಯಮಿ ಬಿ.ಕೆ ಜಗನ್ನಾಥ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಅಮೂಲ್ಯ, ನರಸಿಂಹಮೂರ್ತಿ, ಭದ್ರಗಿರಿ ದೇವಸ್ಥಾನ ಸಮಿತಿ ಪ್ರಮುಖರಾದ ಎ. ಚಂದ್ರಘೋಷನ್, ಮಂಜುನಾಥ್, ನಾಗರಾಜ್, ಸೋಮ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಂಡು ಶುಭಾ ಹಾರೈಸಿದರು.

ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಕೇವಲ ಭಾಷಣಗಳಿಗೆ ಸೀಮಿತ, ಜವಾಬ್ದಾರಿ ಅರಿಯಲಿ ; ಬಿ.ಕೆ ಸಂಗಮೇಶ್ವರ್

ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ

ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಭದ್ರಾವತಿ ನಗರದ ಜನ್ನಾಪುರ ಉಂಬ್ಳೆಬೈಲು ರಸ್ತೆಯಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಆಯೋಜಿಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ವರ್ಷದ ದಿನದರ್ಶಿಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬಿಡುಗಡೆಗೊಳಿಸಿದರು.
    ಭದ್ರಾವತಿ: ಕ್ಷೇತ್ರದ ಅಭಿವೃದ್ಧಿಯಲ್ಲಿ ಬಿಜೆಪಿ ಕೊಡುಗೆ ಶೂನ್ಯವಾಗಿದ್ದು, ಕೇವಲ ಭಾಷಣಗಳಿಗೆ ಸೀಮಿತವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಟೀಕಿಸಿದರು.
    ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ನಗರದ ಜನ್ನಾಪುರ ಉಂಬ್ಳೆಬೈಲು ರಸ್ತೆಯಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಆಯೋಜಿಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ವರ್ಷದ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ತನ್ನ ಜವಾಬ್ದಾರಿ ಅರಿತುಕೊಳ್ಳಬೇಕೆಂದರು.
    ಸಮಾಜದಲ್ಲಿ ಬಹಳಷ್ಟು ಮಂದಿ ಶ್ರೀಮಂತರಿದ್ದಾರೆ. ಆದರೆ ಸೇವಾ ಭಾವನೆ ಎಂಬುದು ಎಲ್ಲರಲ್ಲೂ ಇರುವುದಿಲ್ಲ. ಪ್ರತಿಯೊಬ್ಬರು ಸೇವಾ ಮನೋಭಾವನೆ ಹೊಂದಿರಬೇಕು. ಆಗ ಮಾತ್ರ ಮುಖಂಡರುಗಳಾಗಿ ಬೆಳೆಯಲು ಸಾಧ್ಯ ಎಂದರು.
    ನಗರಸಭೆ ಸದಸ್ಯ ಚೆನ್ನಪ್ಪ ಮಾತನಾಡಿ, ಅಧಿಕಾರ ಇದ್ದರೆ ಅಭಿವೃದ್ಧಿ ಯೋಜನೆ ತರಬಹುದು. ಆದರೆ ಎಲ್ಲ ಸಮಾಜದವರನ್ನು ಸಮಾನತೆಯಿಂದ ಕೊಂಡೊಯ್ಯುವುದು ಮುಖ್ಯ. ಈ ನಿಟ್ಟಿನಲ್ಲಿ ಶಾಸಕ ಸಂಗಮೇಶ್ವರ್ ಆಡಳಿತ ದೇಶಕ್ಕೆ ಮಾದರಿ ಎಂದರು.
    ನಗರ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಮುಖಂಡ ಸತ್ಯ ಕೋಡಿಹಳ್ಳಿ, ಪತ್ರಕರ್ತ ಅನಂತಕುಮಾರ್, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಗು ನಗರಸಭಾ ಸದಸ್ಯ ಕಾಂತರಾಜ್, ಟ್ರಸ್ಟ್ ಪದಾಧಿಕಾರಿಗಳಾದ ಅಧ್ಯಕ್ಷ ಲಾಜರ್, ಗೌರವಾಧ್ಯಕ್ಷ ಎನ್.ಆರ್ ಜಯರಾಜ್, ಉಪಾಧ್ಯಕ್ಷರಾದ ರಾಮಪ್ಪ, ವಿ. ಮುನೇನಕೊಪ್ಪ, ಸಹಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್, ಕೋಶಾಧ್ಯಕ್ಷ ಮಹೇಶ್ವರಪ್ಪ, ನಿರ್ದೇಶಕರಾದ ವಿ.ಎಚ್ ಶಿವಣ್ಣ, ಎಸ್.ಎಚ್ ಹನುಮಂತರಾವ್, ಎಲ್. ಬಸವರಾಜಪ್ಪ, ಡಿ. ಸುಬ್ರಮಣಿ, ನಾಗರಾಜ್, ಆರ್. ಕಾಮಾಕ್ಷಿ, ಎನ್. ರೂಪ, ವಿಲ್ಸನ್‌ಬಾಬು ಮತ್ತು ಕೆ. ಆಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸೇರಿದಂತೆ ಹಲವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಅನಂತಕುಮಾರರನ್ನು ಅಭಿನಂದಿಸಿ ಗೌರವಿಸಲಾಯಿತು.

ಜ.೨ರಂದು ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ : ಎಂ.ಎಸ್ ಸುಧಾಮಣಿ

 ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ.೨ರಂದು ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂಎಸ್ ಸುಧಾಮಣಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಭದ್ರಾವತಿ : ೧೦ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ.೨ರಂದು ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂಎಸ್ ಸುಧಾಮಣಿ ತಿಳಿಸಿದರು.
    ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಸಮ್ಮೇಳನ ಆಯೋಜಿಸಲಾಗಿದೆ ಅಂದು ಬೆಳಿಗ್ಗೆ  ೧೦ಗಂಟೆಗೆ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆ ೯ನೇ ತರಗತಿ ವಿದ್ಯಾರ್ಥಿನಿ ಸಿಂಚನ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶ್ರೀ ಸತ್ಯಸಾಯಿ ಪ್ರೌಢಶಾಲೆ ೮ನೇ ತರಗತಿ ವಿದ್ಯಾರ್ಥಿನಿ ಕೆ.ಆರ್ ಸೇವಂತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಶಾಸಕ ಡಿಕೆ ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
    ಇದಕ್ಕೂ ಮೊದಲು ಬೆಳಿಗ್ಗೆ ೯.೩೦ಕ್ಕೆ ಪ್ರಶಾಂತಿ ಸೇವಾ ಟ್ರಸ್ಟ್ ಜಂಟಿ ಕಾರ್ಯದರ್ಶಿ ಶಿವಪ್ಪ ರಾಷ್ಟ್ರಧ್ವಜಾರೋಹಣ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲ ನಾಡಧ್ವಜಾರೋಹಣ ಹಾಗು ಎಂ.ಎಸ್ ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.
    ಉದ್ಘಾಟನೆ ಸಮಾರಂಭದ ನಂತರ ಕವಿಗೋಷ್ಠಿ, ಕಥಾಗೋಷ್ಠಿ ಮತ್ತು ಪ್ರಚಲಿತ ವಿದ್ಯಾಮಾನಗಳು ಕುರಿತ ಗೋಷ್ಠಿ ನಡೆಯಲಿವೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಶಿಕ್ಷಣ ಸಂಯೋಜಕ ರವಿಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಮಾಜ ಸೇವಕ ವೆಂಕಟರಮಣಶೇಟ್, ಸಿದ್ದಪ್ಪ ಮತ್ತು ಎಚ್.ಪಿ ಪ್ರಸನ್ನ ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೋಡ್ಲು ಯಜ್ಞಯ್ಯ, ಜೆ. ಉಮಾಪತಿ, ಎಚ್. ತಿಮ್ಮಪ್ಪ, ಗಂಗರಾಜ್, ಬಿ. ಕಾಂತಪ್ಪ, ತಿಪ್ಪಮ್ಮ ಮತ್ತು ಬಿ.ಎಸ್ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, December 30, 2023

ಜ.೧ರಂದು ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ನಾರಾಯಣಗೌಡ
    ಭದ್ರಾವತಿ: ವರ್ಷದ ಮೊದಲ ದಿನವೇ ನಗರದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.
    ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ಜ.೧ರಂದು ಮಧ್ಯಾಹ್ನ ೧೨ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಯುತ್ತಿದ್ದು,  ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Friday, December 29, 2023

ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಪ್ರಬಂಧ ಮಂಡನೆ : ಡಾ. ವಿದ್ಯಾಶಂಕರ್‌ಗೆ ಪ್ರಶಸ್ತಿ

ಡಾ. ವಿದ್ಯಾಶಂಕರ್
    ಭದ್ರಾವತಿ : ಗುಜರಾತ್ ಅಹಮದಾಬಾದ್‌ನಲ್ಲಿ ನಡೆದ ವಿಜ್ಞಾನ ಭಾರತೀಯ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ, ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ವಿದ್ಯಾಶಂಕರ್ ಅವರು ಮಂಡಿಸಿದ 'ಭಾರತೀಯ ವೇದಗಳಲ್ಲಿ ತಂತ್ರಜ್ಞಾನ' ಎಂಬ ಪ್ರಬಂಧಕ್ಕೆ ಅತ್ಯುತ್ತಮ ಪ್ರಬಂಧ ಮಂಡನೆ ಪ್ರಶಸ್ತಿ ಲಭಿಸಿದೆ.
    ಮೂಲತಃ ನಗರದ ನಿವಾಸಿಯಾಗಿರುವ ಡಾ. ವಿದ್ಯಾಶಂಕರ್ ಅವರು ಈಗಾಗಲೇ ರಾಷ್ಟ್ರ ಹಾಗು ರಾಜ್ಯಮಟ್ಟದ ಹಲವಾರು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಈ ಬಾರಿ ವಿಶೇಷವಾಗಿ 'ಭಾರತೀಯ ವೇದಗಳಲ್ಲಿ ತಂತ್ರಜ್ಞಾನ' ಎಂಬ ಪ್ರಬಂಧ ಮಂಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರನ್ನು ಕಾಲೇಜಿನ ಉಪನ್ಯಾಸಕ ವೃಂದದವರು, ನಗರದ ಗಣ್ಯರು ಅಭಿನಂದಿಸಿದ್ದಾರೆ.

ಡಿ.೩೦ರಂದು ನಗರಸಭೆ ಸಾಮಾನ್ಯ ಸಭೆ


ಭದ್ರಾವತಿ: ನಗರಸಭೆ ಸಾಮಾನ್ಯ ಸಭೆ ಡಿ.೩೦ರ ಶನಿವಾರ ಬೆಳಿಗ್ಗೆ  ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸದಸ್ಯರು ಸಭೆಯಲ್ಲಿ ತಪ್ಪದೇ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್ ಕೋರಿದ್ದಾರೆ.

ಡಿ.೩೧ರಂದು ‘ಆಯುಷ್’ ತಜ್ಞ ಚಿಕಿತ್ಸಾ ಕೇಂದ್ರ ಕಾರ್ಯಾರಂಭ

ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಡಿ.೩೧ರಿಂದ ಭದ್ರಾವತಿಯಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಆಯುಷಿ ವೈದ್ಯ ವೃಂದ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
    ಭದ್ರಾವತಿ: ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಆಯುರ್ವೇದ ತಜ್ಞ ಚಿಕಿತ್ಸಾ ಕೇಂದ್ರ 'ಆಯುಷ್' ಡಿ.೩೧ರಿಂದ ಕಾರ್ಯಾರಂಭಗೊಳ್ಳಲಿದೆ ಎಂದು ಆಯುಷಿ ವೈದ್ಯ ವೃಂದ ತಿಳಿಸಿದೆ.
    ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಜ್ಞ ವೈದ್ಯರು, ಇಲ್ಲಿಯೇ ಹುಟ್ಟಿ ಬೆಳೆದು ಆಯುರ್ವೇದದಲ್ಲಿ ಉನ್ನತ ಶಿಕ್ಷಣ ಪಡೆದು ಸ್ವಂತ ಆಯುರ್ವೇದ ಕ್ಲಿನಿಕ್‌ಗಳನ್ನು ನಗರದಲ್ಲಿ ತೆರೆದು ಸುಮಾರು ೧೦-೧೨ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಹೆಚ್ಚಿನ ಅನುಭವ ಹೊಂದಿದ್ದು, ಎಲ್ಲಾ ರೀತಿಯ ರೋಗಗಳಿಗೂ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಒಂದೇ ಕಡೆ ಎಲ್ಲಾ ರೋಗಗಳಿಗೂ ಚಿಕಿತ್ಸೆ ನೀಡುವ ಕೇಂದ್ರ ಆರಂಭಿಸುವ ಉದ್ದೇಶದಿಂದ ಇದೀಗ ಆಯುಷಿ ಕೇಂದ್ರ ತೆರೆಯಲಾಗುತ್ತಿದೆ ಎಂದರು.
    ೫ ಜನರನ್ನೊಳಗೊಂಡ ಆಯುಷಿ ವೈದ್ಯ ವೃಂದ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ. ಆರಂಭಿಕವಾಗಿ ಗಾಂಧಿನಗರದ ೨ನೇ ಅಡ್ಡ ರಸ್ತೆಯಲ್ಲಿರುವ ಭದ್ರಾ ನರ್ಸಿಂಗ್ ಹೋಂ ಪಕ್ಕದಲ್ಲಿ ಆಯುಷಿ ತಜ್ಞ ಚಿಕಿತ್ಸಾ ಕೇಂದ್ರ ತೆರೆಯಲಾಗುತ್ತಿದೆ. ಡಿ.೩೧ರಂದು ಬೆಳಿಗ್ಗೆ ೧೧ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.
    ಪತ್ರಿಕಾಗೋಷ್ಠಿಯಲ್ಲಿ ವೈದ್ಯರಾದ ಡಾ. ಎಂ. ಅರುಣ ಕುಮಾರಿ, ಡಾ. ದಿವ್ಯ, ಡಾ. ಟಿ.ಸಿ ವಿನಯ್, ಡಾ. ಪ್ರಶಾಂತ್ ಮತ್ತು  ಡಾ. ಸಿ. ವಿಕ್ರಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಏನಾದರೂ ಸಾಧಿಸುವ ಗುರಿ ಹೊಂದಿ : ಕೆ.ಎನ್ ಜನಾರ್ಧನ್

ಅನನ್ಯೋತ್ಸವದಲ್ಲಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ

ಭದ್ರಾವತಿ ಅಪ್ಪರ್‌ಹುತ್ತಾ ಅನನ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅನನ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ಧನ್ ಪಾಲ್ಗೊಂಡಿದ್ದರು.
    ಭದ್ರಾವತಿ : ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಏನಾದರೂ ಸಾಧಿಸುವ ಗುರಿ ಹೊಂದಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ಧನ್ ಹೇಳಿದರು.
    ಅವರು ನಗರದ ಅಪ್ಪರ್‌ಹುತ್ತಾ ಅನನ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅನನ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಕ್ಕಳು ತಮ್ಮ ಜೀವನದಲ್ಲಿ ಯಾವುದಾದರೂ ಗುರಿ ಹೊಂದಿದ್ದಲ್ಲಿ ಮಾತ್ರ ಏನಾದರೂ ಸಾಧಿಸಬಹುದು. ಯಾವುದೇ ರೀತಿಯ ವ್ಯಸನಗಳಿಗೆ ಒಳಗಾಗದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದರು.
    ಓದುವಿನ ಜೊತೆಗೆ ಕ್ರೀಡೆ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಹ ಕಡ್ಡಾಯವಾಗಿ ತೊಡಗಿಸಿಕೊಂಡು ತಮ್ಮಲ್ಲಿನ ಪ್ರತಿಭೆ ಅನಾವರಣಗೊಳಿಸಬೇಕು. ಇದರಿಂದ ದೈಹಿಕ ಹಾಗು ಮಾನಸಿಕವಾಗಿ ಸದೃಢತೆ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಬೆಳವಣಿಗೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.
    ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಕೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಸಂಜಯ್ ಕುಮಾರ್, ವಿಶ್ವಸ್ಥರಾದ ಸಿ.ಎನ್ ಗಿರೀಶ್, ಆಡಳಿತಾದಿಕಾರಿ ವೇಣುಗೋಪಾಲ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಮುಖ್ಯ ಶಿಕ್ಷಕ ಕಲ್ಲೇಶ್ ಕುಮಾರ್ ಸ್ವಾಗತಿಸಿ, ಉಪ ಮುಖ್ಯ ಶಿಕ್ಷಕಿ ಸುನಿತಾ ನಟರಾಜ್ ಪ್ರತಿಭಾ ಪರುಸ್ಕಾರ ನಡೆಸಿಕೊಟ್ಟರು. ಅನನ್ಯ ಹ್ಯಾಪಿ ಹಾರ್ಟ್ ಮುಖ್ಯ ಶಿಕ್ಷಕಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಹರೀಶ್ ಕುಮಾರ್ ವಂದಿಸಿದರು.

Thursday, December 28, 2023

ದೇಶದ ಬಹುತೇಕ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಕ್ಷದ ಧ್ವಜಾರೋಹಣ ನೆರವೇರಿಸಿದರು.
    ಭದ್ರಾವತಿ: ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದ್ದು, ದೇಶದ ಬಹುತೇಕ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ನಗರದ ಶಾಸಕರ ಗೃಹಕಚೇರಿ ಆವರಣದಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಧ್ವಜಾರೋಹಣ ಮತ್ತು ಪ್ರತಿಜ್ಞೆ ಸ್ವೀಕಾರ ಸಮಾರಂಭದ ನೇತೃತ್ವವಹಿಸಿ ಮಾತನಾಡಿದರು.
    ಕಾಂಗ್ರೆಸ್ ಪಕ್ಷ ಸದಾ ದೇಶದ ಜನರ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಅಭಿವೃದ್ಧಿಕಾರ್ಯಗಳು, ರೂಪಿಸಿರುವ ಯೋಜನೆಗಳು ಇಂದಿಗೂ ದೇಶಕ್ಕೆ ಮಾದರಿಯಾಗಿವೆ ಎಂದರು.
    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯಮಿಗಳ ಪರವಾಗಿದೆ ಹೊರತು ರೈತಪರವಾಗಿಲ್ಲ. ರೈತರ ಸಾಲಮನ್ನಾ ನಿರ್ಲಕ್ಷಿಸುವ ಕೇಂದ್ರ ಸರ್ಕಾರ, ಉದ್ಯಮಿಗಳ ಸಾಲಮನ್ನಾಕ್ಕೆ ಆಸಕ್ತಿ ತೋರುತ್ತದೆ. ಇದು ಜನಪರ ಕಾಳಜಿ ಇಲ್ಲದ ಸ್ವಾರ್ಥ ಸರ್ಕಾರ ಎಂದು ಆರೋಪಿಸಿದರು.
    ಎಚ್.ಡಿ ದೇವೆಗೌಡ ಅವರು ಪ್ರಧಾನಿಯಾಗುವಲ್ಲಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ೨ ಬಾರಿ ಮುಖ್ಯಮಂತ್ರಿಯಾಗುವಲ್ಲಿ ಕಾಂಗ್ರೆಸ್ ಪಕ್ಷದ ಸಹಕಾರವಿದೆ. ಆದರೆ ಇದನ್ನು ಮರೆತು ಇದೀಗ ಜೆಡಿಎಸ್ ಬಿಜೆಪಿ ಪಕ್ಷದ 'ಬಿ' ಟೀಂನಂತೆ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿ ಪಕ್ಷ ಅಭಿವೃದ್ಧಿ ಮೂಲಕ ಹಿಂದೂಗಳ ಮನಗೆಲ್ಲಲಿ. ಆದರೆ ಹಿಂದೂತ್ವದ ಹೆಸರಿನಲ್ಲಿ ಸಂಘರ್ಷಗಳನ್ನು ಸೃಷ್ಟಿಸಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.
    ಪಕ್ಷದ ಹಿರಿಯ ಮುಖಂಡರಾದ ಬಲ್ಕೀಷ್ ಬಾನು ಮಾತನಾಡಿ, ದೇಶ ಸಂಕಷ್ಟದಲ್ಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದಿರುವಂತೆಯೇ ರಾಷ್ಟ್ರದಲ್ಲೂ ಬಿಜೆಪಿ ಕಿತ್ತೊಗೆಯಲು ಕಾರ್ಯಕರ್ತರು ಪಣತೊಡೋಣ. ಪಕ್ಷ ಇದ್ದರೆ ಕಾರ್ಯಕರ್ತರು ಎಂಬುದನ್ನು ಎಲ್ಲಾ ಕಾರ್ಯಕರ್ತರು ತಿಳಿದುಕೊಳ್ಳಬೇಕೆಂದು  ಕರೆ ನೀಡಿದರು.
    ಪಕ್ಷದ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ಥಳೀಯವಾಗಿ ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳ ಮುಖಂಡರುಗಳ ವರ್ತನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.
    ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಆಪ್ತ ಸಹಾಯಕ ಈಶ್ವರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಶಾಸಕರು ಧ್ವಜಾರೋಹಣ ನೆರವೇರಿಸಿದ ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು.
    ಪಕ್ಷದ ಹಿರಿಯ ಕಾರ್ಯಕರ್ತರಾದ ಎ.ಎನ್ ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾದಳ ಕಾರ್ಯಕರ್ತರು, ಮುಖಂಡರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಪಕ್ಷದ ಮುಖಂಡರುಗಳಾದ ಸುಕನ್ಯ, ಸಿ.ಎಂ ಸಾಧಿಕ್, ಚನ್ನಪ್ಪ, ಎಚ್. ರವಿಕುಮಾರ್, ಬಿ. ಗಂಗಾಧರ್, ಅಮೀರ್‌ಜಾನ್,  ಲಕ್ಷ್ಮೀದೇವಿ, ಅಂತೋಣಿ ವಿಲ್ಸನ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಿ. ಜಯಪ್ಪ ಕಾರ್ಯಕ್ರಮ ನಿರೂಪಿಸಿ, ಜುಂಜ್ಯಾನಾಯ್ಕ ವಂದಿಸಿದರು.

ಗುಡ್ಡದ ನೇರಲಕೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ವಿಡಿಯೋ ವೈರಲ್

ಭದ್ರಾವತಿ ತಾಲೂಕಿನ ಗುಡ್ಡದ ನೇರಲಕೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ.
    ಭದ್ರಾವತಿ : ತಾಲೂಕಿನ ಗುಡ್ಡದ ನೇರಲಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವ ವಿಡಿಯೋ ಹರಿದಾಡುತ್ತಿದ್ದು, ಇದೀಗ ಈ ಸಂಬಂಧ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
    ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಲೋಕಾಯುಕ್ತ ನಿರೀಕ್ಷಕ ಸುರೇಶ್ ಅವರಿಗೂ ದೂರು ನೀಡಲಾಗಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಚಾರ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ತಕ್ಷಣ ಶಾಲಾ ಮುಖ್ಯ ಶಿಕ್ಷಕ ಶಂಕರಪ್ಪ ಹಾಗು ಇದಕ್ಕೆ ಸಹಕರಿಸಿದ ಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಲಾಗುವುದು ಎಂದರು.


ಭದ್ರಾವತಿ ತಾಲೂಕಿನ ಗುಡ್ಡದ ನೇರಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಗುರುವಾರ ಲೋಕಾಯುಕ್ತ ನಿರೀಕ್ಷಕ ಸುರೇಶ್ ಅವರಿಗೆ ದೂರು ಸಲ್ಲಿಸಿದರು.
    ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ಧ ಹೋರಾಟ ನಡೆಸುವ ಮೂಲಕ ಅವರ ವೈಫಲ್ಯ ಎತ್ತಿ ಹಿಡಿಯುವುದಾಗಿ ಎಚ್ಚರಿಸಿದರು.
    ವಿಡಿಯೋದಲ್ಲಿ ಏನಿದೆ?
    ಹರಿದಾಡುತ್ತಿರುವ ವಿಡಿಯೋದಲ್ಲಿ ಸಮವಸ್ತ್ರದಲ್ಲಿರುವ ಇಬ್ಬರು ಶಾಲಾ ಬಾಲಕಿಯರು ಶೌಚಾಲಯ ಸ್ವಚ್ಛಗೊಳಿಸುತ್ತಿರುವುದು ಕಂಡು ಬರುತ್ತಿದೆ. ಆದರೆ ಈ ವಿಡಿಯೋ ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಅಲ್ಲದೆ ವಿಡಿಯೋ ಹರಿದಾಡುವವರೆಗೂ ಈ ಸಂಬಂಧ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಕುರಿತ ಯಾವುದೇ ಆರೋಪಗಳು ಕೇಳಿ ಬಂದಿಲ್ಲ. ಈ ಹಿನ್ನಲೆಯಲ್ಲಿ ವಿಡಿಯೋ ಚಿತ್ರೀಕರಣಗೊಂಡಿರುವ ಕುರಿತು ಹೆಚ್ಚಿನ ತನಿಖೆ ನಡೆಯಬೇಕಾಗಿದೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ :  ಜಿಲ್ಲಾ ಉಪನಿರ್ದೇಶಕರಿಗೆ ವರದಿ ಸಲ್ಲಿಕೆ
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಕರಣ ಹಿನ್ನಲೆಯಲ್ಲಿ ಖುದ್ಧಾಗಿ ಶಾಲೆಗೆ ಭೇಟಿ ನೀಡಿದ್ದು, ಈ ಸಂಬಂಧ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿ, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕರು ಹಾಗು ವಿದ್ಯಾರ್ಥಿಗಳಿಂದ ಮಾಹಿತಿ ಪಡೆಯಲಾಗಿದೆ. ಶಿಕ್ಷಕರು ನಾವು ಯಾವುದೇ ವಿದ್ಯಾರ್ಥಿಗಳಿಗೆ ಶೌಚಾಲಯ ಸ್ವಚ್ಛಗೊಳಿಸಿಲು ಹೇಳಿಲ್ಲ. ಬದಲಾಗಿ ಶೌಚಾಲಯ ಬಳಕೆಯ ನಂತ ನೀರು ಹಾಕುವಂತೆ ಹೇಳಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ ವಿದ್ಯಾರ್ಥಿಗೂ ಇದಕ್ಕೆ ವಿರುದ್ಧ ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ವರದಿಯನ್ನು ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಲಾಗಿದೆ ಎಂದರು.
    ಜಿಲ್ಲಾ ರಕ್ಷಣಾಧಿಕಾರಿ ಭೇಟಿ :
    ಘಟನೆ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಗುರುವಾರ ಸಂಜೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳ್ ಹಾಗು ಡಿಎಸ್‌ಎಸ್ ಮುಖಂಡರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನ ಗುಡ್ಡದ ನೇರಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಂಜೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭದ್ರಾ ಪ್ರೌಢ ಶಾಲೆ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿರುವ ಭದ್ರಾ ಪ್ರೌಢ ಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.
    ಸುಮಾರು ೩೦ ವರ್ಷಗಳ ನಂತರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸಂಭ್ರಮಾಚರಣೆ ನಡೆಸುವ ಮೂಲಕ ತಮಗೆ ವಿದ್ಯೆ ಹೇಳಿಕೊಟ್ಟ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿ ತಮ್ಮ ಹಿಂದಿನ ಅನುಭವಗಳನ್ನು ಹಂಚಿಕೊಂಡರು.  ಮುಖ್ಯ ಶಿಕ್ಷಕ ಸಿ.ಎಸ್.ನಾಗರಾಜ, ನಿವೃತ್ತ ಶಿಕ್ಷಕರಾದ ಚನ್ನಪ್ಪ ಮತ್ತು ಶಂಕರಪ್ಪ ಸೇರಿದಂತೆ ಶಿಕ್ಷಕ ಹಾಗು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
    ೧೯೯೨-೯೩ ನೇ ಸಾಲಿನ ವಿದ್ಯಾರ್ಥಿಯಾದ ಪ್ರಸ್ತುತ ಮೈಸೂರು ನಿವಾಸಿ ಕಾಂತರಾಜ್ ಶಾಲೆಗೆ ೧ ಲಕ್ಷ ರು. ಮೌಲ್ಯದ ಬೆಂಚ್ ಮತ್ತು ಡೆಸ್ಕ್ ಗಳನ್ನು ದೇಣಿಗೆಯಾಗಿ ನೀಡಿದರು.
    ದೇವೆಂದ್ರ ಸ್ವಾಗತಿಸಿ, ಎಸ್. ಚಂದ್ರಯ್ಯ ಮತ್ತು ಜಯರಂಗ ನಿರೂಪಿಸಿದರು. ರಮೇಶ್ ವಿ. ವಂದಿಸಿದರು.

ಸಾರ್ವಜನಿಕರಿಗೆ ತಕ್ಷಣ ಮಾಹಿತಿ ನೀಡಿ, ಆರಂಭಿಕ ಹಂತದಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳಿ : ಸುರೇಶ್

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆ ವತಿಯಿಂದ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗು ಕುಂದುಕೊರತೆ ಸಭೆಯಲ್ಲಿ  ಲೋಕಾಯುಕ್ತ ನಿರೀಕ್ಷಕ ಎಚ್.ಎಸ್ ಸುರೇಶ್ ಪಾಲ್ಗೊಂಡು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
    ಭದ್ರಾವತಿ: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರು ಮಾಹಿತಿ ಕೇಳಿದಾಗ ಕೂಡಲೇ ಸ್ಪಂದಿಸಿದರೆ ಬಹಳಷ್ಟು ಸಮಸ್ಯೆಗಳು ಆರಂಭಿಕ ಹಂತದಲ್ಲಿಯೇ ಬಗೆಹರಿಯುತ್ತವೆ. ಅಸಮಂಜಸ ಉತ್ತರಗಳು ಹಾಗು ನಿರ್ಲಕ್ಷ್ಯದ ಕಾರಣದಿಂದ ದೂರುಗಳು ಸಲ್ಲಿಕೆಯಾಗುತ್ತವೆ ಎಂದು ಲೋಕಾಯುಕ್ತ ನಿರೀಕ್ಷಕ ಎಚ್.ಎಸ್ ಸುರೇಶ್ ಹೇಳಿದರು.
    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಇಲಾಖೆ ವತಿಯಿಂದ ಗುರುವಾರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗು ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಘಟನೆಗಳ ಪದಾಧಿಕಾರಿಗಳು ಕುಂದುಕೊರತೆ ಸಭೆಯಲ್ಲಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಹೊರತು ಭಾಷಣ ಮಾಡಬಾರದು. ಅದೇರೀತಿ  ಸಾರ್ವಜನಿಕರು ಕೇಳುವ ಪ್ರಶ್ನೆಗೆ ಉತ್ತರ ನೀಡುವುದು ಅಧಿಕಾರಿಗಳ ಜವಾಬ್ದಾರಿ ಎಂದರು.
    ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗು ನೌಕರರು ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್ ಹಂಚಿನಾಳ್ ಉಪಸ್ಥಿತರಿದ್ದರು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗೋಪಾಲಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ಕಾರ್ಮಿಕ ನಿರೀಕ್ಷಕ ಭೀಮೇಶ್, ಪೇಪರ್‌ಟೌನ್ ಪೊಲೀಸ್ ಠಾಣಾ ನಿರೀಕ್ಷಕಿ ನಾಗಮ್ಮ, ತಾಲೂಕು ವೈದ್ಯಾಧಿಕಾರಿ ಡಾ. ಎಂ.ಬಿ.ಅಶೋಕ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಸಮುದಾಯ ಸಂಘಟನಾಧಿಕಾರಿ ಸುಹಾಸಿನಿ, ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಕಂದಾಯ ಇಲಾಖೆ ಕಂದಾಯ ನಿರೀಕ್ಷಕ ಪ್ರಶಾಂತ್, ಎನ್.ಎಂ ಬಸವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.


Wednesday, December 27, 2023

ಬುದ್ಧ ವಿಹಾರದಲ್ಲಿ ಹುಣ್ಣಿಮೆ ಕಾರ್ಯಕ್ರಮ

ಭದ್ರಾವತಿ ನಗರದ ಸಂಬುದ್ಧ ದಮ್ಮಾಂಕುರ ಟ್ರಸ್ಟ್ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬುದ್ಧ ಸ್ಮರಣೆಯೊಂದಿಗೆ ಹುಣ್ಣಿಮೆ ಕಾರ್ಯಕ್ರಮ ಆಚರಿಸಲಾಯಿತು.
ಭದ್ರಾವತಿ ; ನಗರದ ಸಂಬುದ್ಧ ದಮ್ಮಾಂಕುರ ಟ್ರಸ್ಟ್ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬುದ್ಧ ಸ್ಮರಣೆಯೊಂದಿಗೆ ಹುಣ್ಣಿಮೆ ಕಾರ್ಯಕ್ರಮ ಆಚರಿಸಲಾಯಿತು.
ಹೊಸ ನಂಜಾಪುರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಮುಖರಾದ ಪ್ರೊ. ರಾಚಪ್ಪ, ಶ್ರೀನಿವಾಸ್, ಡಿ. ನರಸಿಂಹಮೂರ್ತಿ, ಸಿ. ಜಯಪ್ಪ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯ ಪಾಲ್ಗೊಂಡಿದ್ದರು.

ಪರವಾನಗಿ ಇಲ್ಲದ ಆಟೋ ಚಾಲನೆ : ರು.೧೦,೫೦೦ ದಂಡ

ಭದ್ರಾವತಿ : ಪರವಾನಗಿ ಇಲ್ಲದ ಆಟೋ ಚಲಾಯಿಸಿದ ಚಾಲಕನಿಗೆ ನಗರದ ಸಿವಿಲ್ ಜಡ್ಜ್ ಅಂಡ್ ಜೆಎಂಎಫ್‌ಸಿ ನ್ಯಾಯಾಲಯ ರು.೧೦.೫೦೦ ದಂಡ ವಿಧಿಸಿರುವ ಘಟನೆ ನಡೆದಿದೆ. 
ಸಂಚಾರಿ ಪೊಲೀಸರು ನಗರದ ಮಾಧವಚಾರ್ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ಪರವಾನಗಿ ಇಲ್ಲದ ಆಟೋ ಚಾಲನೆ ಮಾಡುತ್ತಿದ್ದ ಚಾಲಕ ಜಿಂದಲ್ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಂಗಳವಾರ ನ್ಯಾಯಾಲಯದ ಆದೇಶದ ಮೇರೆಗೆ ಚಾಲಕನಿಂದ ದಂಡ ವಸೂಲಾತಿ ಮಾಡಲಾಗಿದೆ. ವಿಶೇಷವಾಗಿ ಈ ಪ್ರಕರಣದಲ್ಲಿ ಕಡಿಮೆ ದಂಡ ವಸೂಲಾತಿ ಮಾಡುತ್ತಿದ್ದು, ನ್ಯಾಯಾಲಯ ಹೆಚ್ಚಿನ ದಂಡ ವಿಧಿಸುವ ಮೂಲಕ ಎಚ್ಚರಿಕೆ ಗಂಟೆ ನೀಡಿದೆ. 
ಕಳೆದ ಸುಮಾರು ೧ ತಿಂಗಳಿನಿಂದ ಸಂಚಾರಿ ಪೊಲೀಸರು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದು, ಈ ನಡುವೆಯೂ ಸಂಚಾರಿ ನಿಯಮ ಉಲ್ಲಂಘನೆಗಳು ಕಂಡು ಬರುತ್ತಿವೆ. ಈಗಲಾದರೂ ಸಾರ್ವಜನಿಕರು ಎಚ್ಚೆದ್ದುಕೊಂಡು ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. 

Tuesday, December 26, 2023

ಪತ್ರಕರ್ತ ಅನಂತ ಕುಮಾರ್‌ಗೆ ವೀರಯೋಧ ಮುರಳಿ ಪ್ರಶಸ್ತಿ

ಭದ್ರಾವತಿ ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ ೨೦೨೩ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆ ವರದಿಗಾರ ಅನಂತ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
    ಭದ್ರಾವತಿ: ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ ೨೦೨೩ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆ ವರದಿಗಾರ ಅನಂತ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
    ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಂಗೀತ ಸಂಭ್ರಮ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಸಮಾಜ ಸೇವಕ ಪೊಲೀಸ್ ಉಮೇಶ್, ಶ್ರೀ ಬಸವೇಶ್ವರ ಧರ್ಮಸಂಸ್ಥೆ  ಅಧ್ಯಕ್ಷ ಶಿವಕುಮಾರ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜು, ಅಪೇಕ್ಷ ನೃತ್ಯಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಅಪೇಕ್ಷ ಮಂಜುನಾಥ್, ಸಾಹಿತಿ ಅರಳಿಹಳ್ಳಿ ಅಣ್ಣಪ್ಪ, ಶಿಕ್ಷಕ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಮಾಜದ ಅಧಿಕಾರಿಗಳು ಕರ್ತವ್ಯದಲ್ಲಿ ಜಾತಿ ಪ್ರದರ್ಶಿಸಬೇಡಿ, ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಪಡಬೇಡಿ : ಕಾಗಿನೆಲೆ ಶ್ರೀ

 

ಭದ್ರಾವತಿ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

    ಭದ್ರಾವತಿ: ಸಮಾಜದ ಅಧಿಕಾರಿಗಳು ಕರ್ತವ್ಯದಲ್ಲಿ ಜಾತಿ ಪ್ರದರ್ಶಿಸಬೇಡಿ. ಆದರೆ ಹುಟ್ಟಿದ ಜಾತಿ ಬಗ್ಗೆ ಕೀಳರಿಮೆಯನ್ನೂ ಪಡಬೇಡಿ ಎಂದು ಶ್ರೀ ಕನಕ ಗುರುಪೀಠ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.

ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ, ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಭದ್ರಾವತಿ ತಾಲೂಕಿನ ಕುರುಬರ ಸಂಘ ಶೈಕ್ಷಣಿಕ ಕ್ರಾಂತಿ ಮೂಲಕ ಇಡೀ ರಾಜ್ಯದಲ್ಲಿ ಗಮನಸೆಳೆದಿದೆ. ಹುಟ್ಟಿದ ಮೇಲೆ ಹುಟ್ಟಿದ ಜಾತಿ ಬಗ್ಗೆ ಕೀಳಿರಿಮೆಪಡಬಾರದು. ಜಾತಿಯ ಇತಿಹಾಸ, ಸಂಸ್ಕೃತಿ ತಿಳಿಯದಿದ್ದರೆ ಮಾತ್ರ ಕೀಳರಿಮೆ ಮೂಡಲು ಸಾಧ್ಯ ಎಂದರು.

ಹಾಲುಮತ ಸಮಾಜದವರು ಒಟ್ಟುಗೂಡಿದರೆಂದರೆ ಇತರರಲ್ಲಿ ಸಂಚಲನ ಮೂಡುತ್ತದೆ. ಆದರೆ ನಾವು ಹಾಲಿನಂತೆ ಶುದ್ಧವಾಗಿ ಬದುಕೋಣ. ಹಾಲುಮತ ಸಮಾಜ ಉತ್ತಮ ಇತಿಹಾಸ ಹಾಗು ಧಾರ್ಮಿಕ ಸಂಸ್ಕೃತಿಯನ್ನು ಒಳಗೊಂಡಿರುವ ಸಮಾಜವಾಗಿದೆ ಎಂದರು.

ವಿದ್ಯೆ ವಿನಯ ಕಲಿಸಬೇಕು. ಸಮಾಜದ ಕಾರ್ಯಕ್ರಮಗಳಲ್ಲಿ ಒಟ್ಟುಗೂಡಿ ಸಮಾಜದ ಏಳಿಗೆಗೆ ಕಾರಣರಾಗಬೇಕೆಂದರು.

ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್ ಮಾತನಾಡಿ, ಸಮಾಜ ಬಾಂಧವರ ನಡುವೆ ಬಾಂಧವ್ಯ ಬೆಳೆಯಲು ಮತ್ತು ಸಮಾಜದ ಪ್ರತಿಭಾವಂತರನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಮುಖ್ಯ. ಸೇವಾ ಭಾವನೆ ರೂಢಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಗೌರವ ದೊರೆಯಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್. ಅಧಿಕಾರಿ ಬಿ.ಎಸ್. ಶೇಖರಪ್ಪ, ದಾವಣಗೆರೆಯ ಪ್ರೋಬೆಷನರಿ ತಹಶೀಲ್ದಾರ್ ಟಿ.ಎನ್. ರಘು, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ಕೆ. ರಂಗನಾಥ್, ನಿರ್ದೇಶಕರಾದ ಎಂ. ಶರತ್, ಡಾ. ಸೌಮ್ಯ ಪ್ರಶಾಂತ್, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ. ಪ್ರಭಾಕರ್ ಬೀರಯ್ಯ, ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಾದ ಬಿ.ಎಚ್ ವಸಂತ, ಎನ್. ಸತೀಶ್, ಬಿ.ಎಸ್ ಮಂಜುನಾಥ್, ಬಿ.ಎ ರಾಜೇಶ್, ಜೆ. ಕುಮಾರ್, ಕೆ. ಕೇಶವ, ಎಲ್. ಪ್ರವೀಣ್, ನಿರ್ದೇಶಕರಾದ ಸಣ್ಣಯ್ಯ, ಕೆ. ಲೋಕೇಶ್, ವಿನೋದ್ ಕುಮಾರ್, ಹೇಮಾವತಿ ಶಿವಾನಂದ, ಜೆ.ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರಶಾಂತ ಸಣ್ಣಕ್ಕಿ ನಿರೂಪಿಸಿದರು.

ಗೂಂಡಾಗಿರಿ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಜೆಡಿಎಸ್ ಆಗ್ರಹ

ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ

ಭದ್ರಾವತಿ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಾಗು ಹೆಚ್ಚುತ್ತಿರುವ ದುರಾಡಳಿತದ ವಿರುದ್ಧ ಮಂಗಳವಾರ  ತಾಲೂಕು ಕಛೇರಿ ಮುಂಭಾಗ ಜಾತ್ಯಾತೀತ ಜನತಾದಳ ವತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.
    ಭದ್ರಾವತಿ :  ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಾಗು ಹೆಚ್ಚುತ್ತಿರುವ ದುರಾಡಳಿತದ ವಿರುದ್ಧ ಮಂಗಳವಾರ  ತಾಲೂಕು ಕಛೇರಿ ಮುಂಭಾಗ ಜಾತ್ಯಾತೀತ ಜನತಾದಳ ವತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.
    ಪಕ್ಷದ ಮುಖಂಡರಾದ ಶಾರದಾ ಅಪ್ಪಾಜಿ ನೇತೃತ್ವ ವಹಿಸಿದ್ದರು. ಪ್ರಮುಖರು ಮಾತನಾಡಿ, ಕ್ಷೇತ್ರದಲ್ಲಿ ಓ.ಸಿ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ, ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಲ್ಲದೆ ಗೂಂಡಾಗಿರಿ, ದಬ್ಬಾಳಿಕೆ, ಅಧಿಕಾರ ದುರ್ಬಳಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಕ್ಷೇತ್ರದಲ್ಲಿ ಬಡವರು, ಅಸಹಾಯಕರು, ಶೋಷಿತರು ನೆಮ್ಮದಿಯಿಂದ ಬದುಕುವ ಸ್ಥಿತಿ ಇಲ್ಲವಾಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ತಕ್ಷಣ ಇವುಗಳಿಗೆ ಕಡಿವಾಣ ಹಾಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.      
    ಧರಣಿ ಸತ್ಯಾಗ್ರಹದಲ್ಲಿ ಜೆಡಿಎಸ್ ಪಕ್ಷದ ಪ್ರಮುಖರಾದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಮುಖಂಡರಾದ ಡಿ. ಆನಂದ, ಗೊಂದಿ ಜಯರಾಂ, ಎಂ.ಎ ಅಜಿತ್, ಧರ್ಮೇಗೌಡ(ಕುಂಬ್ರಿ ಚಂದ್ರಣ್ಣ), ಎಚ್.ಬಿ ರವಿಕುಮಾರ್, ಎಂ. ರಾಜು, ಎ.ಟಿ ರವಿ, ಉಮೇಶ್, ಗುಣಶೇಖರ್, ಮಧುಸೂಧನ್, ಉದಯ ಕುಮಾರ್, ದಿಲೀಪ್, ರೇಖಾ ಪ್ರಕಾಶ್, ಮಂಜುಳ ಸುಬ್ಬಣ್ಣ, ರೂಪಾವತಿ, ನಾಗರತ್ನ, ಸಾವಿತ್ರಮ್ಮ ಪುಟ್ಟೇಗೌಡ, ರಾಧ ಪ್ರಭಾಕರ್, ಭಾಗ್ಯಮ್ಮ, ಎ. ರಾಧ ಹಾಗು ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಯುವ ಮುಖಂಡ ಮಂಗೋಟೆ ರುದ್ರೇಶ್, ನಕುಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, December 25, 2023

ಶಾಸಕರ ಆಪ್ತ ಸಹಾಯಕ ಈಶ್ವರ್ ಅಪಘಾತದಲ್ಲಿ ಮೃತ

ಈಶ್ವರ್
    ಭದ್ರಾವತಿ : ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಆಪ್ತ ಸಹಾಯಕ ಈಶ್ವರ್(೪೭) ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
    ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿ ಪುನಃ ನಗರಕ್ಕೆ ಹಿಂದಿರುಗಿ ಬರುವಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
    ಈಶ್ವರ್ ಬಹಳ ವರ್ಷಗಳಿಂದ ಶಾಸಕರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕುಟುಂಬ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸೈನಿಕರ ಸಂಘದಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ

ಹೋರಾಟ ಸ್ಥಳದಲ್ಲಿ ವಾರ್ಷಿಕ ದಿನದರ್ಶಿಕೆ ಬಿಡುಗಡೆ

ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಈ ಬಾರಿ ವಿಶೇಷವಾಗಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸೋಮವಾರ ವಾರ್ಷಿಕ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಈ ಬಾರಿ ವಿಶೇಷವಾಗಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸೋಮವಾರ ವಾರ್ಷಿಕ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.
    ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು. ಅಗತ್ಯವಿರುವ ಬಂಡವಾಳ ತೊಡಗಿಸಬೇಕು ಹಾಗು ಕಾರ್ಮಿಕರ ಹಿತಕಾಪಾಡಬೇಕೆಂದು ಆಗ್ರಹಿಸಿ ಕಳೆದ ೩೪೧ ದಿನಗಳಿಂದ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಹೋರಾಟ ಆರಂಭದಿಂದಲೂ ಬೆಂಬಲಿಸಿಕೊಂಡು ಬಂದಿರುವ ಮಾಜಿ ಸೈನಿಕರ ಸಂಘ ಇದೀಗ ಹೋರಾಟ ಸ್ಥಳದಲ್ಲಿ ವಾರ್ಷಿಕ ದಿನದರ್ಶಿಕೆ ಬಿಡುಗಡೆಗೊಳಿಸುವ ಮೂಲಕ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಪುನಃ ಸದಾ ಕಾಲ ಸಂಪೂರ್ಣವಾಗಿ ಬೆಂಬಲವಿರುವುದಾಗಿ ಸ್ಪಷ್ಟಪಡಿಸಿದೆ.
    ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಸಹಕಾರ್ಯದರ್ಶಿ ಹರೀಶ್, ಉಪಾಧ್ಯಕ್ಷ ಮಹೇಶ್, ಮಾಜಿ ಸೈನಿಕರಾದ ಬೋರೇಗೌಡ, ಉದಯ್, ದೇವರಾಜ್, ಸುರೇಶ್, ಶ್ರೀಧರ, ಶೇಷಾಚಲ, ಕುಮಾರ್, ಅಶೋಕ್, ರಮೇಶ್, ಪ್ರಸಾದ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ರಾಕೇಶ್ ಸೇರಿದಂತೆ ಪದಾಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.

ಡಿ.೨೬ರಂದು ಜೆಡಿಎಸ್ ಪಕ್ಷದಿಂದ ಧರಣಿ ಸತ್ಯಾಗ್ರಹ

    ಭದ್ರಾವತಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಹಾಗು ಹೆಚ್ಚುತ್ತಿರುವ ದುರಾಡಳಿತದ ವಿರುದ್ಧ ಡಿ.೨೬ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಜಾತ್ಯಾತೀತ ಜನತಾದಳ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
    ಪಕ್ಷದ ಮುಖಂಡರಾದ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

Sunday, December 24, 2023

ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ : ಉಪ್ಪಾರರು ಸಂಘಟನೆಗೊಳ್ಳಲಿ, ಸಮಾಜದ ಮುನ್ನಲೆಗೆ ಬರಲಿ

ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ದೇಶಾದ್ಯಂತ ರಥಯಾತ್ರೆ

ಉಪ್ಪಾರ ಸಮುದಾಯದ ಜನಜಾಗೃತಿಗಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ಭದ್ರಾವತಿ ನಗರಕ್ಕೆ ಆಗಮಿಸಿತು. ಹಳೇನಗರದ ಬಸವೇಶ್ವರ ವೃತ್ತದಲ್ಲಿ ಉಪ್ಪಾರ ಸಮಾಜದ ಗುರುಗಳಾದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
    ಭದ್ರಾವತಿ: ಉಪ್ಪಾರ ಸಮುದಾಯದ ಜನಜಾಗೃತಿಗಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಶ್ರೀ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ನಗರಕ್ಕೆ ಆಗಮಿಸಿತು.
    ಗಾಂಧಿನಗರ ವೃತ್ತಕ್ಕೆ ಆಗಮಿಸಿದ ರಥಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಭಗೀರಥ ಉಪ್ಪಾರ ಸಂಘ ಹಾಗು ತಾಲೂಕು ಸಂಘದ ಪದಾಧಿಕಾರಿಗಳು, ಪ್ರಮುಖರು ಸ್ವಾಗತಿಸಿದರು. ನಂತರ ಹಳೇನಗರದ ಬಸವೇಶ್ವರ ವೃತ್ತದಲ್ಲಿ ಉಪ್ಪಾರ ಸಮಾಜದ ಗುರುಗಳಾದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
    ದೇಶಾದ್ಯಂತ ಸುಮಾರು ೧೧ ಕೋಟಿಗೂ ಹೆಚ್ಚಿನ ಜನಸಂಖ್ಯೆಯಲ್ಲಿರುವ ಉಪ್ಪಾರರು ವಿವಿಧ ರಾಜ್ಯಗಳಲ್ಲಿ ಆಯಾ ಪ್ರಾದೇಶಿಕ ಭಾಷೆಗಳಿಗೆ ಅನುಸಾರವಾಗಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಾರೆ. ಉಪ್ಪಾರರನ್ನು ಜನಜಾಗೃತಿಗೊಳಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಸಮಾಜದ ಮುನ್ನಲೆಗೆ ತರುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕೆಂದು ಕರೆ ನೀಡಲಾಯಿತು.  
    ಜಿಲ್ಲಾ ಸಂಘದ ಅಧ್ಯಕ್ಷ ಎಚ್.ಟಿ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಖಜಾಂಚಿ ನಾಗರಾಜ್ ಕಂಕಾರಿ, ಉಪಾಧ್ಯಕ್ಷರಾದ ಬೊಮ್ಮನಕಟ್ಟೆ ಮಂಜುನಾಥ್,  ಉಮೇಶ್ ಕಟ್ಟಾ, ಜಿಲ್ಲಾ ನಿರ್ದೇಶಕ ಎಸ್. ರಾಜಶೇಖರ್, ತಾಲೂಕು ಅಧ್ಯಕ್ಷ ರವಿಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭಾ ಸದಸ್ಯೆ ಅನುಪಮ ಚನ್ನೇಶ್, ಸಮಾಜದ ಪ್ರಮುಖರಾದ ರವೀಶ್, ಅವಿನಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಡಿ.೨೬ರಂದು ಕನ್ನಡ ರಾಜ್ಯೋತ್ಸವ, ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ

    ಭದ್ರಾವತಿ: ಅಪೇಕ್ಷ ನೃತ್ಯ ಕಲಾವೃಂದ, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೬ರ ಮಂಗಳವಾರ ಮಧ್ಯಾಹ್ನ ೩ ಗಂಟೆಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವ, ಸಂಗೀತ ಸಂಭ್ರಮ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
    ಸಂಗೀತ ಸಂಭ್ರಮ ಮಧ್ಯಾಹ್ನ ೩ ಗಂಟೆಗೆ ಆರಂಭವಾಗಲಿದ್ದು, ತಬಲ ವಾದಕ ದೇವನೂರು ರುದ್ರೇಶ್, ರಿದಮ್ ಪ್ಯಾಡ್ ವಾದಕ ಮೋಹನ್‌ಕುಮಾರ್, ಕೀ ಬೋರ್ಡ್ ವಾದಕ ಅಂತೋಣಿ ಮ್ಯಾಥ್ಯೂಸ್, ಗಾಯಕ ಡಾ. ಶ್ರೀಧರ್ ಕುಲಕರ್ಣಿ, ವಿದುಷಿ ಶೃತಿ ಕುಲಕರ್ಣಿ ಮತ್ತು  ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
    ಸಂಜೆ ೬ ಗಂಟೆಗೆ ವಿವಿಧ ಕ್ಷೇತ್ರದ ಸಾಧಕರಿಗೆ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ೨೦೨೨ ಹಾಗು ೨೩ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ನಡೆಯಲಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾ ವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಅಪೇಕ್ಷ ರಾಜ್ಯ ಪ್ರಶಸ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್ ಕನ್ನಡ ಕುವರ/ಕುವರಿ ಪ್ರಶಸ್ತಿ ಹಾಗು ಸಮಾಜ ಸೇವಕ ಸ್ನೇಹಜೀವಿ ಉಮೇಶ್ ವೀರಯೋಧ ಮುರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎಸ್.ಎಸ್ ವಿಜಯಾದೇವಿ, ನಗರಸಭೆ ಸದಸ್ಯೆ ಬಿ.ಟಿ ನಾಗರಾಜ್, ವೈದ್ಯ ಡಾ. ಶಿವಪ್ರಕಾಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಸ್ಥಾಪಕಿ ಲತಾ ರಾಬರ್ಟ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜು ಮತ್ತು ಡಾ. ವಿಷ್ಣು ಸೇವಾ ಸಮಿತಿ ಅಧ್ಯಕ್ಷ ಎಂ. ಶ್ರೀನಿವಾಸ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಭಾನುವಾರ ಅದ್ದೂರಿಯಾಗಿ ಜರುಗಿತು. . ಭಕ್ತರಿಂದ ಈಡುಕಾಯಿ ಹರಕೆ ಸಮರ್ಪಣೆ ನಡೆಯಿತು.
    ಭದ್ರಾವತಿ: ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಪ್ರತಿ ವರ್ಷದಂತೆ ಈ ಬಾರಿ ಸಹ ಭಾನುವಾರ ಅದ್ದೂರಿಯಾಗಿ ಜರುಗಿತು.
    ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ, ರಥಶುದ್ಧಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ೧೨.೩೦ಕ್ಕೆ ಸ್ವಾಮಿಯ ರಥೋತ್ಸವ ನಡೆಯಿತು. ದೇವಸ್ಥಾನದ ಮುಂಭಾಗ ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಶ್ರೀ ಸ್ವಾಮಿಗೆ ಜಯಘೋಷಗಳನ್ನು ಹಾಕುವ ಮೂಲಕ ಸಂಭ್ರಮಿಸಿದರು. ನಗರದ ವಿವಿಧ ಭಜನೆ ತಂಡಗಳಿಂದ ಭಜನೆ ನಡೆಯಿತು.
    ರಥೋತ್ಸವ ಸರ್.ಎಂ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಬಂದು ತಲುಪಿತು. ಭಕ್ತರಿಂದ ಈಡುಕಾಯಿ ಹರಕೆ ಸಮರ್ಪಣೆ ನಡೆಯಿತು. ನಂತರ ಭಕ್ತರಿಗೆ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ಸೇರಿದಂತೆ ಇನ್ನಿತರ ಪ್ರಸಾದ ವಿತರಣೆ ನಡೆಯಿತು. ಪ್ರತಿ ವರ್ಷದಂತೆ ಈ ಬಾರಿ ಸಹ ಸೇವಾಕರ್ತರಾದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಅವರಿಂದ ಅನ್ನಸಂತರ್ಪಣೆ ನೆರವೇರಿತು.
    ರಥೋತ್ಸವದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.

Saturday, December 23, 2023

ನಾಗರಕಟ್ಟೆಯಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ಕಾಗದನಗರದ ಶ್ರೀಕ್ಷೇತ್ರ ನಾಗರಕಟ್ಟೆ ಯಲ್ಲಿ ತಾಲೂಕು ವೈಷ್ಣವ ಪರಿಷತ್ ಸಹಯೋಗದೊಂದಿಗೆ ಶನಿವಾರದಂದು ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಆಚರಿಸಲಾಯಿತು.
    ಭದ್ರಾವತಿ: ಕಾಗದನಗರದ ಶ್ರೀಕ್ಷೇತ್ರ ನಾಗರಕಟ್ಟೆ ಯಲ್ಲಿ ತಾಲೂಕು ವೈಷ್ಣವ ಪರಿಷತ್ ಸಹಯೋಗದೊಂದಿಗೆ ಶನಿವಾರದಂದು ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಆಚರಿಸಲಾಯಿತು.
    ಮುಂಜಾನೆ ೬.೩೦ಕ್ಕೆ ಆರಂಭಗೊಂಡ ಪೂಜಾ ಕಾರ್ಯಕ್ರಮಗಳು ರಾತ್ರಿ ೧೦.೩೦ರವರೆಗೆ ಜರುಗಿದವು. ಸಂಜೆ ೭ ಗಂಟೆಗೆ ಸಹಸ್ರ ದೀಪೋತ್ಸವ ನಡೆಸಲಾಯಿತು.
ನಗರಸಭೆ ಸದಸ್ಯ ಬಸವರಾಜ್ ಆನೇಕೊಪ್ಪ, ಪೊಲೀಸ್ ಇನ್ಸ್‌ಪೆಕ್ಟರ್ ನಾಗಮ್ಮ, ಸಬ್ ಇನ್ಸ್‌ಪೆಕ್ಟರ್ ಕವಿತಾ ಸೇರಿದಂತೆ ಸಹಸ್ರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
    ದೇವಾಲಯದ ಪ್ರಧಾನ ಅರ್ಚಕರಾದ ರಮೇಶ್ ಭಟ್ ತರಳಿಮಠ, ಅರ್ಚಕರಾದ ಚಿನ್ಮಯಿ ಪೂಜೆ ನೆರವೇರಿಸಿದರು. ವೀರಾಂಜನೇಯ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.

ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ವೈಕುಂಠ ಏಕಾದಶಿ

ಭದ್ರಾವತಿ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ವೈಕುಂಠನಾಥ ದರ್ಶನ ಭಕ್ತರನ್ನು ಆಕರ್ಷಿಸಿತು.
ಭದ್ರಾವತಿ : ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.
ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥ ದರ್ಶನ ನಡೆಯಿತು. ವಿಶೇಷವಾಗಿ ಭಕ್ತರಿಗೆ ಲಾಡು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಸ್ಥಾನದ ಸ್ವಾಮಿಯ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮೆಮೊರಿ ಮೇಕರ‍್ಸ್ ವತಿಯಿಂದ ವಿಶೇಷವಾಗಿ ನಿರ್ಮಿಸಲಾದ ವೈಕುಂಠನಾಥ ದರ್ಶನ ಭಕ್ತರನ್ನು ಆಕರ್ಷಿಸಿತು.
ದೇವಸ್ಥಾನದ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್, ಶಾಂತಕುಮಾರ್, ನಾಗೇಶ್ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.


ಭದ್ರಾವತಿ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು. ದೇವಸ್ಥಾನದ ಸ್ವಾಮಿಯ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಕೊಡುಗೆ ಅಪಾರ : ಎಸ್. ಮಧುಬಂಗಾರಪ್ಪ

ಭದ್ರಾವತಿ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಶಿಕ್ಷಕರ ವಿವಿಧ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಆ ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳ ಕೊಡುಗೆಯೂ ಪ್ರಮುಖವಾಗಿದ್ದು,  ಓದಿದ ಶಾಲೆಯ ಅಭಿವೃದ್ಧಿಗೆ ಶ್ರಮಿಸುವುದು ಸಹ ಸೇವೆಯೇ ಆಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧುಬಂಗಾರಪ್ಪ ಹೇಳಿದರು.
    ಅವರು ಶನಿವಾರ ತಾಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
    ಮುಂಬರುವ ವರ್ಷದಲ್ಲಿ ಇಡೀ ರಾಜ್ಯದಲ್ಲಿ ೧ ರಿಂದ ೭ನೇ ತರಗತಿವರೆಗಿನ ಯಾವ ಮಕ್ಕಳು ಸಹ ಕೆಳಗೆ ನೆಲದ ಮೇಲೆ ಕೂರದಂತೆ ಸಕಲ ವಿದ್ಯಾರ್ಥಿಗಳಿಗೂ ಆಸನದ ವ್ಯವಸ್ಥೆ ಒದಗಿಸಲು ಚಿಂತನೆ ನಡೆಸಿದ್ದು, ೧ ವರ್ಷ ಅವಧಿಯಲ್ಲಿ ಸಂಪೂರ್ಣ ಅನುಷ್ಠಾನಗೊಳಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.
    ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜ್ಞಾನವೇ ದೇಶದ ದೊಡ್ಡ ಆಸ್ತಿ ಎಂದು ತಿಳಿಸಿದ ಅವರು, ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  
    ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ತೊರೆದು ಒಟ್ಟಾಗಿ ಕೆಲಸ ನಿರ್ವಹಿಸುತ್ತೇವೆ. ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವುದರಿಂದ ಮಲೆನಾಡಿನ ಸರ್ಕಾರಿ ಶಾಲೆಗಳಲ್ಲಿನ ಸಮಸ್ಯೆಗಳು ಖಂಡಿತವಾಗಿ ಬಗೆಹರಿಯುವ ವಿಶ್ವಾಸವಿದೆ ಎಂದರು.
    ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ಯರೇಹಳ್ಳಿ ಸರ್ಕಾರಿ ಶಾಲೆಯ ಊಟದ ಹಾಲ್ ವಿಸ್ತರಣೆಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮಾತ್ರ ಗುಣಮಟ್ಟದ ಶಿಕ್ಷಣ ಎಂಬುದು ಪೋಷಕರ ಭ್ರಮೆ. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಚ್ಛಾಶಕ್ತಿ ಇಲ್ಲದಿದ್ದರೆ ಯಾವ ಶಾಲೆಯಲ್ಲಿ ಓದಿದರೂ ಅಷ್ಟೆ ಎಂದರು.
    ವೇದಿಕೆಯಲ್ಲಿ ಜಿ.ಪಂ ಮಾಜಿ ಸದಸ್ಯ ಎಸ್. ಕುಮಾರ್, ತಹಶೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್,  ಅಮೃತ ಮಹೋತ್ಸವ ಸಂಭ್ರಮಾಚರಣೆ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗು ಗ್ರಾಮದ ಮುಖಂಡರು  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಾಲೆಯ ಮುಖ್ಯ ಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು. ಗಾಯಕ ಹರೋನಹಳ್ಳಿ ಸ್ವಾಮಿ ಪ್ರಾರ್ಥಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಇ. ಚಂದ್ರಶೇಖರ್ ಸ್ವಾಗತಿಸಿದರು.

ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮಾಚರಣೆ

 



   ಭದ್ರಾವತಿ: ತಾಲೂಕಿನ ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಶನಿವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು.

     ಸಂಸದ ಬಿ.ವೈ ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾ ತನಾಡಿದರು. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿದ್ದರು.

  ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ. ವಿಠಲರಾವ್, ಆನಂದಪ್ಪ, ಅಧ್ಯಕ್ಷ ಬಿ. ರಮೇಶ್, , ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಕೆ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

       ಅಮೃತ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು.


ಭದ್ರಾವತಿ:ಸೆಳೆದ ವೈಕುಂಠನಾಥನ ದರ್ಶನ

 


ಭದ್ರಾವತಿ: ಪ್ರತಿವರ್ಷದಂತೆ ಈ ವರ್ಷ ಸಹ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶನಿವಾರ ವೈಕುಂಠ ಏಕಾದಶಿ ಅದ್ದೂರಿಯಾಗಿ ಜರುಗಿತು.

     ಬೆಳಗ್ಗೆ ೪.೩೦ರಿಂದಲೇ ವೈಕುಂಠನಾಥನ ದರ್ಶನ ಆರಂಭಗೊಂಡಿದ್ದು, ಈ ಬಾರಿ ಸಹ ಸ್ವಾಮಿಯ ದರ್ಶನ ಭಕ್ತರ ಕಣ್ಮನ ಸೆಳೆಯುತ್ತಿದೆ. ದೇವಾಲಯದ ಪ್ರಧಾನ ಅರ್ಚಕರಾದ ವೇ||ಬ್ರ|| ಶ್ರೀ ರಂಗನಾಥ ಶರ್ಮ ಅವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

      ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ಡಿ. ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಅನುರಾಧ ಪಟೇಲ್, ದೇವಾಲಯದ ಸಹಾಯಕ ಅರ್ಚಕ ಶ್ರೀನಿವಾಸ್, ದೇವಾಲಯ ವ್ಯವಸ್ಥಾಪನ ಸಮಿತಿ  ಅಧ್ಯಕ್ಷ ಮಾರುತಿ, ಪದಾಧಿಕಾರಿಗಳಾದ ಆಶಾ ಪುಟ್ಟಸ್ವಾಮಿ, ಗಿರಿನಾಯ್ಡು, ವಿಶ್ವೇಶ್ವರಗಾಯಕ್ವಾಡ್, ಉಪ ತಹಸೀಲ್ದಾರ್ ಮಂಜಾನಾಯ್ಕ, ಎ.ಟಿ.ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, December 22, 2023

ವಿವಿಧ ದೇವಸ್ಥಾನಗಳಲ್ಲಿ ವೈಕುಂಠನಾಥನ ದರ್ಶನಕ್ಕೆ ಸಕಲ ಸಿದ್ದತೆ

ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಸ್ಥಾನ ಸೇರಿದಂತೆ ವಿವಿಧೆಡೆ ದೇವಸ್ಥಾನಗಳಲ್ಲಿ ಶನಿವಾರ ವೈಕುಂಠ ಏಕಾದಶಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಕೆ.ಆರ್ ನಾಗರಾಜು ಶುಕ್ರವಾರ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು.
    ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಸ್ಥಾನ ಸೇರಿದಂತೆ ವಿವಿಧೆಡೆ ದೇವಸ್ಥಾನಗಳಲ್ಲಿ ಶನಿವಾರ ವೈಕುಂಠ ಏಕಾದಶಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
    ಬಹುತೇಕ ದೇವಸ್ಥಾನಗಳಲ್ಲಿ ಬೆಳಿಗ್ಗೆ ೪.೩೦ರಿಂದಲೇ ಶ್ರೀ ವೈಕುಂಠನಾಥನ ದರ್ಶನ ಆರಂಭಗೊಳ್ಳಲಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಿರೀಕ್ಷೆಗೂ ಮೀರಿ ಭಕ್ತರು ಪಾಲ್ಗೊಳ್ಳುತ್ತಿದ್ದು, ಶುಕ್ರವಾರ ಮುಜರಾಯಿ ಅಧಿಕಾರಿಯಾಗಿರುವ ತಹಸೀಲ್ದಾರ್ ಕೆ.ಆರ್ ನಾಗರಾಜು ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು.
    ಭಕ್ತರಿಗೆ ವೈಕುಂಠನಾಥನ ದರ್ಶನಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಯಶಸ್ವಿಗೊಳಿಸಬೇಕೆಂದು ಕೋರಿದರು.
    ಕ್ಷೇತ್ರ ಶಿಕ್ಷಣಧಿಕಾರಿ ಎ.ಕೆ ನಾಗೇಂದ್ರಪ್ಪ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಜಿ ಮಾರುತಿ, ಸಹಾಯಕ ಅರ್ಚಕ ಎಸ್. ಶ್ರೀನಿವಾಸನ್, ಮುಜರಾಯಿ ಇಲಾಖೆ ಸಿಬ್ಬಂದಿ ಎ.ಟಿ ಬಸವರಾಜ್, ಮುಖಂಡರಾದ ತಮ್ಮಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


    ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೫ ಗಂಟೆಯಿಂದ ವೈಕುಂಠನಾಥ ದರ್ಶನ ನಡೆಯಲಿದೆ. ವಿಶೇಷವಾಗಿ ಭಕ್ತರಿಗೆ ಲಾಡು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.
    ಕಾಗದನಗರ ೭ನೇ ವಾರ್ಡ್ ಶ್ರೀ ಕ್ಷೇತ್ರ ನಾಗರಕಟ್ಟೆಯಲ್ಲಿ ತಾಲೂಕು ವೈಷ್ಣವ ಪರಿಷತ್ ವತಿಯಿಂದ ವೈಕುಂಠ ಏಕಾದಶಿ ಹಾಗು ಸಹಸ್ರ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ೬.೩೦ ರಿಂದ ರಾತ್ರಿ ೧೦.೩೦ರ ವರೆಗೆ ವೈಕುಂಠನಾಥ ದರ್ಶನ ಹಾಗು ಸಂಜೆ ೭ ಗಂಟೆ ದೀಪೋತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶ್ರೀಕ್ಷೇತ್ರದ ಪ್ರಧಾನ ಅರ್ಚಕ ರಮೇಶ್ ಭಟ್ಟರು ತರಳಿಮಠ ಕೋರಿದ್ದಾರೆ.
---------------------------------------------------
`ಕೊರೋನಾ ವೈರಸ್ ಪುನಃ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಹಚ್ಚಿನ ಜಾಗೃತಿ ವಹಿಸಬೇಕಾಗಿದೆ. ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ವೈಕುಂಠ ಏಕಾದಶಿ ಯಶಸ್ವಿಗೊಳಿಸಲು ಸಹಕರಿಸಬೇಕು.' 
                                                                   - ಕೆ.ಆರ್ ನಾಗರಾಜು, ಮುಜರಾಯಿ ಅಧಿಕಾರಿ, ತಹಸೀಲ್ದಾರ್, ಭದ್ರಾವತಿ.
-------------------------------------------------------------
    ಬಿ.ಎಚ್ ರಸ್ತೆ, ಹುತ್ತಾಕಾಲೋನಿ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ವಿಜೃಂಭಣೆಯಿಂದ ವೈಕುಂಠ ಏಕಾದಶಿ ಆಚರಿಸಲಾಗುತ್ತಿದ್ದು, ಭಕ್ತರಿಗೆ ವೈಕುಂಠನಾಥನ ದರ್ಶನ ಪಡೆಯಲು ಸಕಲ ಸಿದ್ದತೆಗಳನ್ನು ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿದೆ.

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ

ಭದ್ರಾ ನದಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಬಿತ್ತನೆ ಕಾರ್ಯಕ್ಕೆ ಚಾಲನೆ

ಭದ್ರಾವತಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯ ನಡೆಯಿತು. ಶಾಸಕ ಬಿ.ಕೆ. ಸಂಗಮೇಶ್ವರ್ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.
    ಭದ್ರಾವತಿ : ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯ ನಡೆಯಿತು.
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಹಿಂಭಾಗ ಹೊಸಸೇತುವೆ ಬಳಿ ಭದ್ರಾ ನದಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮೀನುಮರಿಗಳ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.
    ಬೈಪಾಸ್ ರಸ್ತೆ ಮೊಸರಹಳ್ಳಿ ಬಳಿ ಹೊಸಸೇತುವೆ ಸಮೀಪ ಹಾಗು ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಹಿಂಭಾಗ ಹೊಸಸೇತುವೆ ಬಳಿ ಭದ್ರಾ ನದಿಯಲ್ಲಿ ಉತ್ತಮ ತಳಿಯ ಕಾಟ್ಲ ಸುಮಾರು ೭೦-೮೦ ಎಂ.ಎಂ ಬಲಿತ ಮರಿಗಳನ್ನು ಬಿತ್ತನೆ ಮಾಡಲಾಗಿದೆ. ಈ ಮರಿಗಳು ಸುಮಾರು ೩ ರಿಂದ ೪ ತಿಂಗಳ ಅವಧಿಯಲ್ಲಿ ಬೆಳವಣಿಗೆ ಹೊಂದಲಿದ್ದು, ಮೀನುಗಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮೀನುಮರಿಗಳು ಸುಮಾರು ೭-೮ ತಿಂಗಳ ಅವಧಿಯಲ್ಲಿ ಸುಮಾರು ೧೦ ಕೆ.ಜಿ ತೂಕದಷ್ಟು ಬೆಳವಣಿಗೆ ಹೊಂದಲಿವೆ.  
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಶರಥ ಗಿರಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶಿವಕುಮಾರ್, ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಇ. ಮೋಹನ್‌ಕುಮಾರ್, ಭದ್ರಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಕೆ. ಮುರುಗನ್, ಉಪಾಧ್ಯಕ್ಷ ಟಿ.ಎಸ್ ಮೌನೇಶ್ವರ್, ನಿರ್ದೇಶಕರಾದ ಸುರೇಶ್, ಸಿ. ವೀರಪ್ಪನ್, ನಾಗರಾಜ್, ಮುರುಗೇಶ್, ನಾಸೀರ್ ಖಾನ್, ಬಿ.ಎನ್ ಗೋಪಿ, ಕಲ್ಪನ, ಕಾರ್ಯದರ್ಶಿ ಬಿ.ಎನ್ ರೂಪಾದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಪರವಾನಗಿ ಪಡೆದು ಮೀನುಗಾರಿಕೆಯಲ್ಲಿ  ತೊಡಗಿಸಿಕೊಂಡಿರುವ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುಕ್ರವಾರ ಭದ್ರಾ ನದಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸುಮಾರು ೪ ಲಕ್ಷ ಬಲಿತ ಮೀನುಮರಿಗಳ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗು ಸಹಕರಿಸಿದ ಮೀನುಗಾರಿಕೆ ಇಲಾಖೆ ಅಧಿಕಾರಿಗಳನ್ನು , ಭದ್ರಾ ಮೀನುಗಾರರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು.  

ಉಪಾಧ್ಯಕ್ಷರಾಗಿ ಎಲ್. ದೇವರಾಜ್

ಎಲ್. ದೇವರಾಜ್
    ಭದ್ರಾವತಿ : ನಗರದ ಅಪ್ಪರ್‌ಹುತ್ತಾ ಶ್ರೀ ಭೈರವೇಶ್ವರ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಲ್. ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದೇವರಾಜ್ ಅವರು ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಹಲವಾರು ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿದ್ದರು. ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಇವರನ್ನು ಅಭಿನಂದಿಸಿದ್ದಾರೆ.

ಡಿ.೨೩-೨೪ರಂದು ಯರೇಹಳ್ಳಿ ಶಾಲೆ ಅಮೃತಮಹೋತ್ಸವ

ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ

ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡಿ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಹಮ್ನಿಕೊಂಡಿರುವುದಾಗಿ ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ತಿಳಿಸಿದರು.
    ಭದ್ರಾವತಿ: ತಾಲೂಕಿನ ಯರೇಹಳ್ಳಿ ಗ್ರಾಮದ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೮೦ ವರ್ಷ ಪೂರೈಸಿ ಶತಮಾನದ ಕಡೆಗೆ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಡಿ.೨೩ ಮತ್ತು ೨೪ರಂದು ಎರಡು ದಿನಗಳ ಕಾಲ ಶಾಲಾ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ ಆಯೋಜಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ೩ ಮುಖ್ಯ ಸಮಿತಿಗಳು ಹಾಗು ೧೧ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.
    ಡಿ.೨೩ರಂದು ಬೆಳಗ್ಗೆ ೯.೩೦ಕ್ಕೆ ಬಸಾಪುರದಿಂದ ಕೆಂಚಮ್ಮ, ಕರಿಯಮ್ಮ ದೇವಾಲಯದ ಮೂಲಕ ಕಾರ್ಯಕ್ರಮದ ಸ್ಥಳದವರೆಗೆ ಕಲಾಮೇಳದೊಂದಿಗೆ ಮೆರವಣಿಗೆ ನಡೆಯಲಿದೆ. ೧೧.೩೦ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.


ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಉನ್ನತೀಕರಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
    ಮುಖ್ಯ ಅತಿಥಿಗಳಾಗಿ ಶಾಸಕರಾದ ಶಾರದಾ ಪೂರ್‍ಯಾನಾಯ್ಕ, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಡಿ.ಎಸ್ ಅರುಣ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಪಾಲ್ಗೊಳ್ಳಲಿದ್ದಾರೆ.
    ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ. ವಿಠಲರಾವ್, ಆನಂದಪ್ಪ, ಅಧ್ಯಕ್ಷ ಬಿ. ರಮೇಶ್, ಅಮೃತ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೈ.ಕೆ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರುವರು. ಮಧ್ಯಾಹ್ನ ೩ ರಿಂದ ೫ರವರೆಗೆ ಚಿಂತನಗೋಷ್ಠಿ, ಸಂಜೆ ೫ ರಿಂದ ಸಾಂಸ್ಕೃತಿಕ ಸಂಭ್ರಮ ಸಂಜೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.
    ಡಿ.೨೪ರಂದು ಬೆಳಿಗ್ಗೆ ೧೦ಕ್ಕೆ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಸಮಾವೇಶ, ಮಧ್ಯಾಹ್ನ ೨ಕ್ಕೆ ಕವಿಗೋಷ್ಠಿ, ೩ ರಿಂದ ೪ರವರೆಗೆ ಗೀತಗಾಯನ ಕಾರ್ಯಕ್ರಮ, ೪ ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Thursday, December 21, 2023

ಅಯೋಧ್ಯೆ `ಶ್ರೀರಾಮ ಮಂತ್ರಾಕ್ಷತೆ' : ಅದ್ದೂರಿ ಸ್ವಾಗತ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಅಂಗವಾಗಿ ಗುರುವಾರ ಸಂಜೆ ಭದ್ರಾವತಿ ನಗರಕ್ಕೆ ಆಗಮಿಸಿದ `ಶ್ರೀರಾಮ ಮಂತ್ರಾಕ್ಷತೆ'ಗೆ ಅದ್ದೂರಿ ಸ್ವಾಗತ ಕೋರಲಾಯಿತು.
    ಭದ್ರಾವತಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಅಂಗವಾಗಿ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ `ಶ್ರೀರಾಮ ಮಂತ್ರಾಕ್ಷತೆ'ಗೆ ಅದ್ದೂರಿ ಸ್ವಾಗತ ಕೋರಲಾಯಿತು.
    ಬಿ.ಎಚ್ ರಸ್ತೆ ಹುತ್ತಾ ಕಾಲೋನಿ ಬಸ್ ನಿಲ್ದಾಣ ಸಮೀಪ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ `ಶ್ರೀರಾಮ ಮಂತ್ರಾಕ್ಷತೆ'ಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.
    ಮೆರವಣಿಗೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದವರೆಗೂ ಸಾಗಿತು. ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು.
    ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಶ್ರೀರಾಮ ಸೇವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯತನ ವಹಿಸದಿರಿ, ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ : ಡಾ. ಸೆಲ್ವಮಣಿ

ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
    ಭದ್ರಾವತಿ: ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕುಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯತನವಹಿಸಬಾರದು. ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಎಚ್ಚರಿಸಿದರು.
    ಅವರು ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಸಮಗ್ರ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಆಲಿಸಿದರು.
    ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಹಕ್ಕುಪತ್ರ ವಿತರಣೆ ಶಾಸಕರ ಕನಸಾಗಿದ್ದು, ವಿಳಂಬದಿಂದ ಹಿನ್ನಡೆಯಾಗಿದೆ. ಹಕ್ಕುಪತ್ರ ನೀಡಲು ಎರಡು ಸಭೆಗಳನ್ನು ನಡೆಸಿದರೂ ಇದುವರೆಗೂ ವಿತರಣೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ವಿಷಾದ ವ್ಯಕ್ತಪಡಿಸಿದರು.  
    ಇದಕ್ಕೆ ಪ್ರತಿಕ್ರಿಯಿಸಿದ ಡಾ. ಸೆಲ್ವಮಣಿ, ಭದ್ರಾವತಿ ತಾಲೂಕಿನ ಅಭಿವೃದ್ಧಿಗಳ ಪರಿಶೀಲನೆಗಾಗಿ ಪತ್ಯೇಕವಾಗಿ ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ್ ಅವರನ್ನು ನೇಮಿಸಲಾಗಿದೆ. ಪ್ರತಿದಿನ ಪರಿಶೀಲನೆ ನಡೆಸಿ ವಿವರ ನೀಡಲಿದ್ದಾರೆ. ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಮುಂದಿನ ತಿಂಗಳು ಜ.೩ ಅಥವಾ ೪ರಂದು ಪೂರ್ಣ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಸಭೆ ಅಧ್ಯಕ್ಷತೆವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ನಗರೋತ್ಥಾನ ಯೋಜನೆ ಕಾಮಗಾರಿಗಳು ಶೇ.೪೮ರಷ್ಟು ಪೂರ್ಣಗೊಳ್ಳಬೇಕಿತ್ತು. ಆದರೆ ಇದುವರೆಗೂ ಶೇ.೬ರಷ್ಟು ಮಾತ್ರ ಪೂರ್ಣಗೊಂಡಿವೆ. ಯುಜಿಡಿ ಗ್ರಾಮಗಾರಿ ಶೇ.೪೦ರಷ್ಟು ಬಾಕಿ ಉಳಿದಿದ್ದು, ರಸ್ತೆ ಸೇರಿದಂತೆ ಹಲವು ಕಾಮಗಾರಿಗಳು ವಿಳಂಬವಾಗಿವೆ. ೨೨ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿ(ಪಿಡಿಓ)ಗಳ ಖಾತೆಗಳಲ್ಲಿ ಎಷ್ಟು ಹಣವಿದೆ, ಯಾವ ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಪ್ರಗತಿಯಲ್ಲಿವೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕೋರಿದರು.
    ಈ ನಡುವೆ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದವು. ಅಭಿವೃದ್ಧಿ ಕಾರ್ಯಗಳ ಕುರಿತು ಯಾವಾಗ ಕೇಳಿದರೂ ಕೋರ್ಟ್‌ಗೆ ತೆರಳಿದ್ದೇವೆ, ಡಿಸಿ ಕಚೇರಿಗೆ ತೆರಳಿದ್ದೇವೆ, ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದೇವೆ ಅನ್ನುತ್ತಾರೆ. ಉಳಿದಂತೆ ೪ ದಿನ ರಜೆ, ೨ ದಿನ ವಿಶೇಷ ರಜೆಗಳು ಕಳೆದರೆ ಇವರು ಜನರ ಕೆಲಸಮಾಡುವುದು ಯಾವಾಗ ಎಂದು ಪ್ರಶ್ನಿಸಿದರು.
    ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ. ಸೆಲ್ವಮಣಿ, ಎಲ್ಲಾ ಇಲಾಖೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
    ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಲೋಕಂಡೆ ಸ್ನೇಹಲ್ ಸುಧಾಕರ್, ಉಪವಿಭಾಗಾಧಿಕಾರಿ ಜಿ.ಎಚ್ ಸತ್ಯನಾರಾಯಣ, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ  ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಸ್ ಚೆನ್ನಪ್ಪನವರ್, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್, ಸದಸ್ಯರಾದ
    ವಿ. ಕದಿರೇಶ್, ಬಿ.ಟಿ ನಾಗರಾಜ್, ಲತಾಚಂದ್ರಶೇಖರ್, ಜಾರ್ಜ್, ಕಾಂತರಾಜ್, ಶ್ರೇಯಸ್, ಮಂಜುನಾಥ್  ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Wednesday, December 20, 2023

ಕೋವಿಡ್-೧೯ ಮುಂಜಾಗ್ರತೆ ವಹಿಸಿ, ಆರೋಗ್ಯ ರಕ್ಷಿಸಿಕೊಳ್ಳಿ : ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕೋವಿಡ್-೧೯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
    ಭದ್ರಾವತಿ: ರಾಜ್ಯದಲ್ಲೂ ಕೋವಿಡ್-೧೯ ಉಪತಳಿ ಜೆ.ಎನ್.೧ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದರು.
     ಅವರು ಬುಧವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೋವಿಡ್-೧೯ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
    ಕ್ಷೇತ್ರದಲ್ಲಿ ಜನರ ಸುರಕ್ಷತೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಜನರು ಜವಾಬ್ದಾರಿಯಿಂದ ತಮ್ಮ ಸುರಕ್ಷತೆಗೆ ಗಮನವಹಿಸಬೇಕು. ೬೦ವರ್ಷ ಮೇಲ್ಪಟ್ಟವರು ಮತ್ತು ಗರ್ಭೀಣಿ ಸ್ತ್ರೀಯರು ಗಾಳಿ ಬೆಳಕು ಉತ್ತಮವಾಗಿರುವಂತಹ ಸುರಕ್ಷತೆಯ ಸ್ಥಳದಲ್ಲಿರಬೇಕು. ಅನಗತ್ಯ ಓಡಾಟ ಸರಿಯಲ್ಲ ಎಂದರು.
    ಬೆಂಕಿ ಬಿದ್ದಾಗ ಬಾವಿ ತೋಡುವುದು ಬೇಡ. ಮೊದಲೇ ಸುರಕ್ಷತೆ ಬಗ್ಗೆ ವೈದ್ಯಾಧಿಕಾರಿಗಳು ಗಮನಹರಿಸಿ. ಇಡೀ ರಾಜ್ಯದಲ್ಲಿ ವೈದ್ಯರ ಕೊರತೆಯಿದೆ. ಆದ್ದರಿಂದ ಸಮಸ್ಯೆ ಹೇಳದೆ ವ್ಯವಸ್ಥೆಗೆ ಮುಂದಾಗಿ. ನಾನು ಸಹ ಜಿಲ್ಲಾ ಆರೋಗ್ಯಾಧಿಕಾರಿ ಹಾಗು ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆ ನಿವಾರಣೆಗೆ ಶ್ರಮಿಸುತ್ತೇನೆ ಎಂದರು.
    ತಾಲೂಕು ವೈದ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ತಾಲೂಕಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಎಲ್ಲರಿಗೂ ಪರೀಕ್ಷೆ ಕಡ್ಡಾಯವಲ್ಲ. ಆದರೆ ಶೀತ, ನೆಗಡಿ ಇರುವವರು ಮತ್ತು ಹೊರದೇಶಗಳಿಂದ ಬಂದವರಿಗೆ ಪರೀಕ್ಷೆ ಕಡ್ಡಾಯಗೊಳಿಸಲಾವುದು. ಸಾರ್ವಜನಿಕರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸುವುದು ಸೂಕ್ತ ಎಂದು ಸಲಹೆ ನೀಡಿದರು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್ ಮಾತನಾಡಿ, ಕ್ಷೇತ್ರ ಹೆಚ್ಚಿನ ಜನಸಂಖ್ಯೆ ಹೊಂದಿದೆ.  ಆರೋಗ್ಯ ಸೇವೆ ಸಮರ್ಪಕವಾಗಿ ಒದಗಿಸಲು ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಪ್ರಸ್ತುತ ಸ್ಟಾಪ್ ನರ್ಸ್‌ಗಳು, ಅನಸ್ತೇಷಿಯ ತಜ್ಞರು, ಮೂವರು ಫಿಜಿಷನ್ ವೈದ್ಯರ ಅಗತ್ಯವಿರುವುದಾಗಿ ಸಭೆಗೆ ಮಾಹಿತಿ ನೀಡಿದರು. ಉಳಿದಂತೆ ಆಕ್ಸಿಜನ್ ಕೊರತೆಯಿಲ್ಲ. ೧೦೦ಹಾಸಿಗೆಯ ಆಸ್ಪತ್ರೆಯಲ್ಲಿ ೯೮ ಹಾಸಿಗೆಗಳಿಗೆ ಆಮ್ಲಜನಕದ ವ್ಯವಸ್ಥೆ ಅಳವಡಿಸಲಾಗಿದೆ ಎಂದರು.
    ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜು, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಉಪಸ್ಥಿತರಿದ್ದರು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಉಪತಹಸೀಲ್ದಾರ್   ಮಂಜಾನಾಯ್ಕ, ಕಂದಾಯ ನಿರೀಕ್ಷಕ ಪ್ರಶಾಂತ್, ನಗರಸಭೆ ಸದಸ್ಯರಾದ ಚನ್ನಪ್ಪ, ಲತಾಚಂದ್ರಶೇಖರ್, ಟಿಪ್ಪು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ನಗರಸಭೆ ನೂತನ ಪೌರಾಯುಕ್ತರಾಗಿ ಪ್ರಕಾಶ್ ಎಂ. ಚನ್ನಪ್ಪನವರ್

ಪ್ರಕಾಶ್ ಎಂ. ಚನ್ನಪ್ಪನವರ್
    ಭದ್ರಾವತಿ: ನಗರಸಭೆ ಪೌರಾಯುಕ್ತರಾಗಿ ಕರ್ನಾಟಕ ಪೌರಾಡಳಿತ ಇಲಾಖೆ ಗ್ರೇಡ್-೧ ಅಧಿಕಾರಿ ಪ್ರಕಾಶ್ ಎಂ. ಚನ್ನಪ್ಪನವರ್ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
    ಬೆಳಗಾವಿ ಜಿಲ್ಲೆ ಸವದತ್ತಿ ಪುರಸಭೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನಪ್ಪನವರ್ ಅವರನ್ನು ಸರ್ಕಾರ ಪೌರಾಯುಕ್ತ ಹುದ್ದೆಗೆ ವರ್ಗಾವಣೆಗೊಳಿಸಿದ್ದು, ನಗರಸಭೆ ವ್ಯವಸ್ಥಾಪಕಿ ಸುನೀತಾ ಕುಮಾರಿ ಅವರಿಂದ ಅಧಿಕಾರ ಹಸ್ತಾಂತರಿಸಿಕೊಂಡರು.
ಈ ಹಿಂದೆ ಪೌರಾಯುಕ್ತರಾಗಿದ್ದ ಎಚ್.ಎಂ ಮನುಕುಮಾರ್ ಅವರನ್ನು ಸರ್ಕಾರ ನೆಲಮಂಗಲ ನಗರಸಭೆಗೆ ವರ್ಗಾವಣೆಗೊಳಿಸಿದ ಹಿನ್ನಲೆಯಲ್ಲಿ ಕಳೆದ  ಕೆಲವು ದಿನಗಳಿಂದ ಹುದ್ದೆ ಖಾಲಿಯಾಗಿ ಉಳಿದಿತ್ತು.
    ನೂತನ ಪೌರಾಯುಕ್ತ ಚನ್ನಪ್ಪನವರನ್ನು ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್ ಸೇರಿದಂತೆ ಸದಸ್ಯರು ಸ್ವಾಗತಿಸಿ ಅಭಿನಂದಿಸಿದ್ದಾರೆ.

ಪವರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಒಂದೇ ಕುಟುಂಬದ ಮೂವರ ಸಾಧನೆ

೩ ತಿಂಗಳ ಅಭ್ಯಾಸ, ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿ

ಭದ್ರಾವತಿ ಸಿ.ಎನ್ ರಸ್ತೆ ನಿವಾಸಿ ವೈ. ನಟರಾಜ್ ಕುಟುಂಬ ಸದಸ್ಯರು ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨ ದಿನಗಳ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಬಹುಮಾನ ಪಡೆದುಕೊಂಡಿದ್ದಾರೆ.
    ಭದ್ರಾವತಿ: ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨ ದಿನಗಳ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಒಂದೇ ಕುಟುಂಬದ ಮೂವರು ಭಾಗವಹಿಸಿ ಬಹುಮಾನ ಪಡೆಯುವ ಮೂಲಕ ಗಮನಸೆಳೆದಿದ್ದಾರೆ.
ಈ ಕುಟುಂಬದ ಸದಸ್ಯರು ಕಳೆದ ೩ ತಿಂಗಳಿನಿಂದ ಪವರ್ ಲಿಪ್ಟಿಂಗ್ ಅಭ್ಯಾಸದಲ್ಲಿ ತೊಡಗಿದ್ದು, ಕಡಿಮೆ ಅವಧಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪವರ್ ಲಿಪ್ಟಿಂಗ್ ಕ್ಷೇತ್ರದಲ್ಲಿ ಸಾಧನೆಯ ಪಯಣಕ್ಕೆ ಮುನ್ನುಡಿ ಬರೆದಿದ್ದಾರೆ.  
    ನಗರದ ಸಿ.ಎನ್ ರಸ್ತೆ ನಿವಾಸಿ ವೈ. ನಟರಾಜ್ ಕುಟುಂಬ ಸದಸ್ಯರು ಇಂತಹದೊಂದು ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಕಾರಂತ್ ಜಿಮ್ ವ್ಯಾಯಾಮ ಶಾಲೆಯಲ್ಲಿ ಕಳೆದ ೩ ತಿಂಗಳ ಹಿಂದೆ ತರಬೇತಿ ಆರಂಭಿಸಿದ ನಟರಾಜ್ ಕುಟುಂಬ ಸದಸ್ಯರು ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ನಡೆದಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
    ೧೨೦ ಕೆ.ಜಿ ತೂಕದ ವಿಭಾಗದಲ್ಲಿ ವೈ. ನಟರಾಜ್ ತೃತೀಯ ಸ್ಥಾನ, ಇವರ ಪತ್ನಿ ಡಿ. ಸೌಮ್ಯ ೮೪ ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಹಾಗು ಈ ದಂಪತಿಗಳ ಕಿರಿಯ ಪುತ್ರ ಎನ್. ಮನ್ವಿತ್ ೫೩ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರ ಹಿರಿಯ ಪುತ್ರ ಎನ್. ಪೂಜಿತ   ಸಹ ಕಳೆದ ಮೂರು ತಿಂಗಳ ಹಿಂದೆ ಅಭ್ಯಾಸ ಆರಂಭಿಸಿದ್ದು, ಒಂದು ಜಿಲ್ಲಾ ಮಟ್ಟದ ಸ್ಪರ್ಧೆ ಹಾಗು ಒಂದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾನೆ.
    ಒಟ್ಟಾರೆಯಾಗಿ ಕಳೆದ ೩ ತಿಂಗಳ ಹಿಂದೆ ಪವರ್ ಲಿಪ್ಟಿಂಗ್ ತರಬೇತಿ ಪಡೆದ ನಟರಾಜ್ ಕುಟುಂಬ ಸದಸ್ಯರು ಕೆಲವೇ ತಿಂಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಯುವ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ದಾರೆ.  

ಹಾಡುಹಗಲೇ ಮದ್ಯದಂಗಡಿಯಲ್ಲಿ ಆಟೋಚಾಲಕನ ಹತ್ಯೆ : ಪೊಲೀಸರ ಮುಂಚಿನ ಕಾರ್ಯಾಚರಣೆ ಮೂವರ ಸೆರೆ

ಭದ್ರಾವತಿ: ನಗರದ ಬಿ.ಹೆಚ್.ರಸ್ತೆಯ ಭದ್ರಾವೈನ್ಸ್ ಮದ್ಯದಂಗಡಿಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆಗೈದಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದ್ದು, ಅಂಗಡಿ ಮುಂಭಾಗ ಜನಸಂದಣಿ ಕಂಡು ಬಂದಿತು.
    ಭದ್ರಾವತಿ: ನಗರದ ಬಿ.ಹೆಚ್.ರಸ್ತೆಯ ಭದ್ರಾವೈನ್ಸ್ ಮದ್ಯದಂಗಡಿಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆಗೈದಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
    ಹತ್ಯೆಯಾದ ವ್ಯಕ್ತಿ ಹಿರಿಯೂರು ಗ್ರಾಮದ ನಿವಾಸಿ, ಆಟೋಚಾಲಕ ಹೇಮಂತ್(೪೦) ಅಲಿಯಾಸ್ ಕರಿಚುಕ್ಕಿ ಎಂಬುದಾಗಿ ಗುರುತಿಸಲಾಗಿದೆ. ಈತ ಮಧ್ಯಾಹ್ನ ೧೧.೩೦ರ ಸುಮಾರಿಗೆ ಮದ್ಯದಂಗಡಿಯಲ್ಲಿ ಕುಳಿತಿರುವ ವೇಳೆ ಈ ಕೃತ್ಯ ನಡೆದಿದೆ.
    ಹಳೆದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಳಿದ ಇಬ್ಬರ ಪತ್ತೆಗಾಗಿ ಬಲೆ ಬೀಸಿದ್ದಾರೆ.  ಬೊಮ್ಮನಕಟ್ಟೆ ಗ್ರಾಮದ ಮುಬಾರಕ್, ಸತ್ಯಾನಂದ, ಕಲೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ಕುರಿತಂತೆ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.