ಭದ್ರಾವತಿ, ಜ. 21: ಎಐಸಿಸಿ ಕಾರ್ಯದರ್ಶಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕ ಡಾ. ಸಿರಿ ವೆಳ್ಳಾಪ್ರಸಾದ್ ಜ.22ರಂದು ನವ ದೆಹಲಿಯಿಂದ ನಗರಕ್ಕೆ ಆಗಮಿಸಲಿದ್ದಾರೆ.
ಈ ಸಂಬಂಧ ಬೆಳಗ್ಗೆ 10.30 ಕ್ಕೆ ಶಾಸಕರ ಗೃಹ ಕಚೇರಿಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಪಕ್ಷದ ಎಲ್ಲಾ ಹಾಲಿ ಮತ್ತು ಮಾಜಿ ಚುನಾಯಿತ ಜನ ಪ್ರತಿನಿಧಿಗಳು, ಪಕ್ಷದ ನಗರ ಹಾಗೂ ಗ್ರಾಮಾಂತರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.
No comments:
Post a Comment