ಭದ್ರಾವತಿ, ಜ. 2: ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಜ.8ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕ ಮಂಗೋಟೆ ರುದ್ರೇಶ್ ತಿಳಿಸಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ತಂದೆಯವರ ಸ್ಮರಣಾರ್ಥ ಚಾರಿಟಬಲ್ ಟ್ರಸ್ಟ್ ಅಸ್ತಿತ್ವಕ್ಕೆ ತರಲಾಗಿದೆ. ಈ ಟ್ರಸ್ಟ್ ಮೂಲಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಬೇಕೆಂಬ ಉದ್ದೇಶದಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಪ್ರಸ್ತುತ ಕ್ಷೇತ್ರದಲ್ಲಿ ನಿರುದ್ಯೋಗಿಗಳ ಸಮಸ್ಯೆ ಹೆಚ್ಚಾಗಿರುವುದರಿಂದ ಈ ಮೇಳ ಅವಶ್ಯಕವಾಗಿದೆ ಎಂದರು.
ಜ.8ರಂದು ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ವಿದ್ಯಾ ಸಂಸ್ಥೆ ಆವರಣದಲ್ಲಿ ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಮೇಳ ನಡೆಯಲಿದ್ದು ಸುಮಾರು 25ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮ, ನರ್ಸಿಂಗ್, ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವೀಧರ ನಿರುದ್ಯೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಎಮ್ ಸಂತೋಷ್, ಆನಂದ್ ಕುಮಾರ್, ಬಿ.ಎಸ್ ಮಂಜುನಾಥ್, ಸುನಿಲ್ ಗಾಯಕ್ವಾಡ್, ರವಿ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment