ಭದ್ರಾವತಿ,ಜ.21: ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗು ಗಂಗಾಮತಸ್ಥರ ಸಂಘದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ 903ನೇ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಿಸಲಾಯಿತು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಕಾರ್ಯಕ್ರಮ ಉದ್ಘಾಟಿಸಿದರು. ಗಂಗಾಮತಸ್ಥರ ಸಂಘದ ಅಧ್ಯಕ್ಷ ಎಚ್.ಎ ಪರಮೇಶ್ವರಪ್ಪ ಆದ್ಯಕ್ಷತೆವಹಿಸಿದ್ದರು.
ತಹಸೀಲ್ದಾರ್ ಆರ್. ಪ್ರದೀಪ್, ಉಪ ತಹಸೀಲ್ದಾರ್ ಮಂಜನಾಯ್ಕ, ಅರಸು, ಶಿರಸ್ತೇದಾರ್ ರಾಧಾಕೃಷ್ಣಭಟ್, ಗಂಗಾಮತಸ್ಥರ ಸಂಘದ ಉಪಾಧ್ಯಕ್ಷರಾದ ಕೆ.ಎಂ ಅಣ್ಣಯ್ಯ, ಎಸ್. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಆರ್ ಯಲ್ಲಪ್ಪ, ಕಾರ್ಯದರ್ಶಿ ಎಚ್.ಸಿ ಬೇಲೂರಪ್ಪ, ಖಜಾಂಚಿ ವೈ.ಆರ್ ಮಂಜುನಾಥ್ ಯರೇಹಳ್ಳಿ, ಸಂಘಟನಾ ಕಾರ್ಯದರ್ಶಿಗಳಾದ ನಾಗರತ್ನ ಮತ್ತು ಮಂಜುಳಾ ಸೇರಿದಂತೆ ನಿರ್ದೇಶಕರು ಹಾಗು ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment