ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಎಸ್. ಕುಮಾರ್ ಸ್ಪರ್ಧಿಸಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಿದೆ.
ಭದ್ರಾವತಿ, ಜ. ೧೫: : ಈ ಹಿಂದೆ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಾಬಲ್ಯ ಹೊಂದಿದ್ದ ಒಕ್ಕಲಿಗರು ಇದೀಗ ತಮ್ಮ ಪ್ರಾಬಲ್ಯ ಕಳೆದುಕೊಳ್ಳುತ್ತಿದ್ದಾರೆ. ಎಲ್ಲಾ ರಂಗದಲ್ಲೂ ಶೋಷಣೆಗೆ ಒಳಗಾಗುತ್ತಿದ್ದು, ಈಗಲಾದರೂ ಎಚ್ಚೆತ್ತುಕೊಂಡು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟಿತರಾಗುವುದು ಅನಿವಾರ್ಯವಾಗಿದೆ ಎಂಬ ಸಂದೇಶದೊಂದಿಗೆ ಕಳೆದ ೩ ತಿಂಗಳ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ಇದೀಗ ಮತ್ತಷ್ಟು ಕ್ರಿಯಾಶೀಲವಾಗಿದ್ದು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಎಸ್. ಕುಮಾರ್ ಸ್ಪರ್ಧಿಸಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಒತ್ತಾಯಿಸಿದೆ.
ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಎಸ್. ಕುಮಾರ್‌ರವರು ಕ್ಷೇತ್ರದಲ್ಲಿ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದು, ೪ ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಾರಿ ಚುನಾವಣೆಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗಬೇಕೆಂಬ ಉದ್ದೇಶದಿಂದ ಒಂದು ಬಾರಿ ಎಸ್. ಕುಮಾರ್‌ಗೆ ಅವಕಾಶ ನೀಡುವಂತೆ ವೇದಿಕೆ ಕೋರಿದೆ.
ಸಂಸದ ಬಿ.ವೈ ರಾಘವೇಂದ್ರ, ಒಕ್ಕಲಿಗ ಸಮುದಾಯದ ಮುಖಂಡರು, ಮೇದಿಕೆ ಪ್ರಮುಖರು, ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
No comments:
Post a Comment