ರೈತ ಚೈತನ್ಯ ಕಾರ್ಯಕ್ರಮ ಕುರಿತು ಎಚ್.ಡಿ ಕುಮಾರಸ್ವಾಮಿ ಮನವರಿಕೆ
ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರೈತ ಸಂಕ್ರಾಂತಿ ಆನ್‌ಲೈನ್ ಸಂವಾದ ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭದ್ರಾವತಿ, ಜ. ೧೬ : ಜೆಡಿಎಸ್ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರೈತ ಸಂಕ್ರಾಂತಿ ಆನ್‌ಲೈನ್ ಸಂವಾದ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಆನ್‌ಲೈನ್ ಮೂಲಕ ಕ್ಷೇತ್ರದ ರೈತರೊಂದಿಗೆ ಎಚ್.ಡಿ ಕುಮಾರಸ್ವಾಮಿ ಕೃಷಿ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಿದರು. ಅಲ್ಲದೆ ಈಗಾಗಲೇ ಪಕ್ಷದ ವತಿಯಿಂದ ರೂಪಿಸಲಾಗಿರುವ ರೈತ ಚೈತನ್ಯ ಕಾರ್ಯಕ್ರಮ ಕುರಿತು ಮನವರಿಕೆ ಮಾಡಿಕೊಡಲಾಯಿತು. ಮಧ್ಯಾಹ್ನ ೩.೩೦ ರಿಂದ ಆರಂಭಗೊಂಡ ಸಂವಾದ ಸುಮಾರು ೩ ಗಂಟೆಗೂ ಹೆಚ್ಚು ಸಮಯ ನಡೆಯಿತು. ಕ್ಷೇತ್ರದ ವಿವಿಧೆಡೆಗಳಿಂದ ರೈತರು ಸಂವಾದದಲ್ಲಿ ಪಾಲ್ಗೊಂಡಿದ್ದರು.
ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ, ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಪ್ರಮುಖರಾದ ಡಿ.ಟಿ ಶ್ರೀಧರ್, ಡಿ. ಆನಂದ್, ಎಂ.ಎ ಅಜಿತ್, ಎಚ್.ಬಿ ರವಿಕುಮಾರ್, ಆನಂದ್, ಮುತುರ್ಜಾಖಾನ್, ಜಯರಾಂ ಗೊಂದಿ, ಎ.ಟಿ ರವಿ, ಭಾಗ್ಯಮ್ಮ, ದಿಲೀಪ್, ಸೈಯದ್ ಅಜ್ಮಲ್, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ರೈತ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂವಾದದಲ್ಲಿ ರೈತರಿಗೆ ಎಳ್ಳು ಸಕ್ಕರೆ ವಿತರಿಸಲಾಯಿತು.
No comments:
Post a Comment