ಭದ್ರಾವತಿ, ಜ. 23: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಾಜಿ ಸದಸ್ಯ ಎಸ್. ಮಣಿಶೇಖರ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಪಕ್ಷದ ನಗರ ಹಾಗು ಗ್ರಾಮಾಂತರ ಅಧ್ಯಕ್ಷರು ತಿಳಿಸಿದ್ದಾರೆ.
ಇವರು ಕಳೆದ ಸುಮಾರು 1 ವರ್ಷದಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪಕ್ಷದ ವಿರೋಧಿ ಬಣಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಆದರೂ ಸಹ ಪಕ್ಷೇತರ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ.
ಈ ಎಲ್ಲಾ ವಿಚಾರಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಪಕ್ಷದ ನಿರ್ಣಯದಂತೆ ಜಿಲ್ಲಾ ಹಾಗು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದ ನಗರ ಹಾಗು ಗ್ರಾಮಾಂತರ ಅಧ್ಯಕ್ಷರು ಎಸ್. ಮಣಿಶೇಖರ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಆರ್. ಕರುಣಾಮೂರ್ತಿ ಮತ್ತು ಕೆ. ಧರ್ಮಾಕುಮಾರ್ ತಿಳಿಸಿದ್ದಾರೆ.
No comments:
Post a Comment