ತಾಲೂಕು ಆಡಳಿತ, ಅಬಕಾರಿ ಇಲಾಖೆಗೆ ಮನವಿ
ಭದ್ರಾವತಿ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ತಾಲೂಕು ಆಡಳಿತ ಹಾಗು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ, ಜ. ೯: ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್)ದ ವತಿಯಿಂದ ತಾಲೂಕು ಆಡಳಿತ ಹಾಗು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
ತಾಲೂಕಿನ ನಗರ ಹಾಗು ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವನ್ನು ಹೆಚ್ಚಾಗಿದ್ದು, ಇದರಿಂದಾಗಿ ತಾಲೂಕಿನಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಮಕ್ಕಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿನ ಮಹಿಳೆಯರು ಮತ್ತು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಈ ಹಿನ್ನಲೆಯಲ್ಲಿ ತಾಲೂಕು ದಂಡಾಧಿಕಾರಿಗಳು ಹಾಗು ಅಬಕಾರಿ ಇಲಾಖೆಗಳು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಕೋರಲಾಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಯುವ ಘಟಕದ ತಾಲೂಕು ಅಧ್ಯಕ್ಷ ಆರ್. ತ್ಯಾಗರಾಜ ನೇತೃತ್ವದಲ್ಲಿ ಮನವಿ ಮನವಿ ಸಲ್ಲಿಸಲಾಯಿತು. ತೀರ್ಥಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
No comments:
Post a Comment