ಭದ್ರಾವತಿಯಲ್ಲಿ ಜಿ+೩ ಗುಂಪುಗಳ ನಿರ್ಮಾಣಕ್ಕೆ ತಕ್ಷಣ ಶಂಕಸ್ಥಾಪನೆ ನೆರವೇರಿಸುವಂತೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ರಾಜೀವ್‌ಗಾಂಧಿ ವಸತಿ ನಿಗಮದ ಕಾರ್ಯಕ್ರಮ ಅನುಷ್ಠಾನ ಪ್ರಧಾನ ವ್ಯವಸ್ಥಾಪಕರಾದ ಅರುಣ್‌ಕುಮಾರ್ ಅಡಗಲಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ, ಜ. ೭: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಸರ್ವರಿಗೂ ಸೂರು ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ನಗರದಲ್ಲಿ ಜಿ+೩ ಗುಂಪುಗಳ ನಿರ್ಮಾಣಕ್ಕೆ ತಕ್ಷಣ ಶಂಕಸ್ಥಾಪನೆ ನೆರವೇರಿಸುವಂತೆ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ರಾಜೀವ್‌ಗಾಂಧಿ ವಸತಿ ನಿಗಮದ ಕಾರ್ಯಕ್ರಮ ಅನುಷ್ಠಾನ ಪ್ರಧಾನ ವ್ಯವಸ್ಥಾಪಕರಾದ ಅರುಣ್‌ಕುಮಾರ್ ಅಡಗಲಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಕ್ಷೇತ್ರದಲ್ಲಿ ವಸತಿರಹಿತ ಬಡ ಕುಟುಂಬಗಳ ಬಹಳ ವರ್ಷಗಳ ಬೇಡಿಕೆ ಇದೀಗ ಈಡೇರುತ್ತಿದ್ದು, ನಗರಸಭೆ ವ್ಯಾಪ್ತಿಯಲ್ಲಿ ತಿಮ್ಲಾಪುರ, ಬುಳ್ಳಾಪುರ, ಮೂಲೆಕಟ್ಟೆ, ಜೇಡಿಕಟ್ಟೆ ಪ್ರದೇಶಗಳಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದಿಂದ ಜಿ+ ೩ ಒಟ್ಟು ೨೦೪೮ ಗುಂಪು ಮನೆಗಳ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ತಕ್ಷಣ ಕಾಮಗಾರಿ ಆರಂಭಿಸಲು ಶಂಕುಸ್ಥಾಪನೆ ನೆರವೇರಿಸುವಂತೆ ಮನವಿ ಮಾಡಲಾಗಿದೆ.
ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸುವ ಸಂಬಂಧ ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಅವರೊಂದಿಗೆ ನಿಗಮದ ಅಧಿಕಾರಿಗಳು ತುರ್ತಾಗಿ ಚರ್ಚಿಸುವಂತೆ ವೇದಿಕೆ ಮುಖಂಡ, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕೋರಿದ್ದಾರೆ.
No comments:
Post a Comment