ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಎವಿ ಶಾಲೆ ಮತ್ತು ಕಾಲೇಜುಗಳ ವಾರ್ಷಿಕೋತ್ಸವ ೨೫ನೇ ವರ್ಷದ ಬೆಳ್ಳಿ ಉತ್ಸವ ಸಮಾರಂಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಜ. ೫ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು.
ಅವರು ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್‌ಎವಿ ಶಾಲೆ ಮತ್ತು ಕಾಲೇಜುಗಳ ವಾರ್ಷಿಕೋತ್ಸವ ೨೫ನೇ ವರ್ಷದ ಬೆಳ್ಳಿ ಉತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾಮಾಜಿಕ ಜಾಲತಾಣಗಳ ಬಳಕೆ ಮಿತಿಯಲ್ಲಿರಬೇಕು. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದಂತೆ, ಮಾದಕ ದ್ರವ್ಯ ವ್ಯಸನದಿಂದ ದೂರವಿರುವಂತೆ ಹಾಗೂ ದಿನನಿತ್ಯದ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವಂತೆ ಕರೆ ನೀಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಣ ಸಂಸ್ಥೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.
No comments:
Post a Comment